• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿಯಲ್ಲಿ ಎಷ್ಟು ಜನರಿಗೆ‌ ಕೊರೊನಾ ಲಸಿಕೆ ಹಾಕಲಾಗುತ್ತೆ ಗೊತ್ತಾ?

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಜನವರಿ 5: ಕಳೆದ ಹತ್ತು ತಿಂಗಳ ಕೊರೊನಾ ಮಾಹಾಮಾರಿಯ ವಿರುದ್ಧದ ಹೋರಾಟದಲ್ಲಿ ಭಾರತ ಗೆಲವು ಸಾಧಿಸಿದಂತೆ ಕಾಣುತ್ತಿದೆ. ಕೊರೊನಾ ಸೋಂಕಿಗೆ ಲಸಿಕೆ ಸಿಕ್ಕಿದ್ದು, ಆದರೆ ಆ ಲಸಿಕೆಯನ್ನು ಯಾರಿಗೆ‌ ಮತ್ತು ಹೇಗೆ ನೀಡಬೇಕು ಎನ್ನುವುದು ಸರ್ಕಾರದ ಮುಂದಿರುವ ಬಹುದೊಡ್ಡ ಸವಾಲಾಗಿದೆ.

ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಹಂಚಿಕೆ ಮಾಡಲು ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸಂಪೂರ್ಣ ಸಿದ್ಧವಾಗಿದೆ.‌ ಬಳ್ಳಾರಿ ನಗರ ಸೇರಿದಂತೆ ನಗರ ಪ್ರದೇಶದಲ್ಲಿ ಲಸಿಕೆ ಹಂಚಿಕೆ ಮಾಡಲು ಈಗಾಗಲೇ ಆರೋಗ್ಯ ಇಲಾಖೆ ತಯಾರಿ ನಡೆಸಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಹಂಚಿಕೆ ಮಾಡುವುದು ಆರೋಗ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಬಂದ ಬಳಿಕ ಮುಂದೇನು?

ಹೀಗಾಗಿ ಮಾದರಿ ಆರೋಗ್ಯ ಕೇಂದ್ರ ಹೇಗಿರಬೇಕು ಎಂದು ಕೇಂದ್ರ ಸರ್ಕಾರ ಈಗಾಗಲೇ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು, ಲಸಿಕೆ ಕೊಡುವ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ ಮೂರು ಕೊಠಡಿ ಇರಲೇಬೇಕು, ಜೊತೆಯಲ್ಲಿ ಆಸ್ಪತ್ರೆಗೆ ಒಂದು ಪ್ರವೇಶ ಹಾಗೂ ಒಂದು ನಿರ್ಗಮನ ಬಾಗಿಲು ಇರಲೇಬೇಕು ಎಂದು ಸರ್ಕಾರ ನಿಯಮ ಮಾಡಿದೆ.

ಇನ್ನು ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು ಒಂದು ಜಿಲ್ಲಾಸ್ಪತ್ರೆ (ವಿಮ್ಸ್) ಸೇರಿದಂತೆ ಒಟ್ಟು 92 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಿವೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಒಟ್ಟು 17,683 ಜನರಿಗೆ ಲಸಿಕೆ ನೀಡಲು ತಯಾರಿ ನೆಡಸಲಾಗಿದೆ.

ಮೊದಲ ಹಂತದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಹಾಗೂ ಡಾಕ್ಟರ್ ಗಳಿಗೆ ಲಸಿಕೆ ನೀಡಲು ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

English summary
The Department of Health and the District Administration are ready to distribute the coronavirus vaccine in Ballari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X