ಸಿದ್ದರಾಮಯ್ಯನವರು ಸಿಎಂ ಆಗಬೇಕೆಂಬುದು ನನ್ನ ಆಶಯ: ಸಚಿವ ಶ್ರೀರಾಮುಲು
ಬಳ್ಳಾರಿ, ಆಗಸ್ಟ್, 16: ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲಿ. ಅವರು ಮುಖ್ಯಮಂತ್ರಿ ಆಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಸಚಿವ ಬಿ.ಶ್ರೀರಾಮುಲು ಬಳ್ಳಾರಿಯಲ್ಲಿ ಹೇಳಿದರು. ಹೀಗೆ ಹೇಳುವ ಮೂಲಕ ಬಾದಾಮಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದಾರೆಂಬ ಕುರುಬ ಸಮುದಾಯದ ಅಸಮಾಧಾನವನ್ನು ಹೋಗಲಾಡಿಸುವ ಪ್ರಯತ್ನ ಮಾಡಿದರು.
ಬಳ್ಳಾರಿಯಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಉದ್ಘಾಟನೆ ಸಮಾರಂಭ ಬಳಿಕ ಮಾತನಾಡಿದ ಅವರು, "ನಾವು ರಾಜಕೀಯಗೋಸ್ಕರ ಮಾತನಾಡುತ್ತೇವೆ. ವೈಯಕ್ತಿಕವಾಗಿ ನನಗೂ ಸಿದ್ದರಾಮಯ್ಯ ಅವರಿಗೂ ಏನು ವಿರೋಧಗಳು ಇಲ್ಲ. ನನಗೂ ಬಿಜೆಪಿಯಿಂದ ಸಿಎಂ ಅವಕಾಶ ಬಂದರೆ, ಹಿಂದುಳಿದ ಸಮುದಾಯದಿಂದ ಆಗಲಿ ಎಂದು ಬಯಸುತ್ತೇನೆ. ರಾಮುಲು ಮುಖ್ಯಮಂತ್ರಿ ಆಗಬೇಕೆಂದು ಸಿದ್ದರಾಮಯ್ಯ ಅವರನ್ನು ಕೇಳಿದರೆ ಅವರು ಒಪ್ಪಿಕೊಳ್ಳುತ್ತಾರೆ. ಜಾತಿ ವ್ಯವಸ್ಥೆಯಲ್ಲಿ ಇವುಗಳನ್ನು ಮಾಡಬೇಕು. ಇವು ರಾಜಕಾರಣದ ತಂತ್ರಗಾರಿಕೆ. ಇದನೆಲ್ಲ ಮಾಡಿಕೊಂಡು ಹೋದರೆ ಮಾತ್ರ ರಾಜಕಾರಣಕ್ಕೆ ಅರ್ಥ ಬರುತ್ತದೆ," ಎಂದರು.
'ನಾವು ಹಿಂದುಳಿದ ಸಮುದಾಯವನ್ನು ಕೈಬಿಡಲ್ಲ'
"ಸಿದ್ದರಾಮಯ್ಯ ಮತ್ತು ನಾವು ಹಿಂದುಳಿದ ಜಾತಿಗಳನ್ನು ಒಂದು ಮಾಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಹಿಂದುಳಿದ ಸಮುದಾಯಗಳು ಒಂದಾದರೆ ರಾಜ್ಯ ಮತ್ತು ದೇಶದಲ್ಲಿ ಕ್ರಾಂತಿ ಮಾಡಬಹುದು. ನಮ್ಮಲ್ಲಿ ಒಗ್ಗಟ್ಟು ಪ್ರದರ್ಶನ ಆಗಬೇಕು. ಹಿಂದುಳಿದವರ ವಿಚಾರ ಬಂದಾಗ ನಾನು ಮತ್ತು ಸಿದ್ದರಾಮಯ್ಯ ಒಂದೇ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದಾಗ ರಾಜ್ಯದಲ್ಲಿ ನೀವು ಇನ್ನೊಬ್ಬ ದೇವರಾಜ ಅರಸ ಆಗಬೇಕೆಂದು ನಾನು ಹೇಳಿದ್ದೆ. ಬಾದಾಮಿಯಲ್ಲಿ ಹೇಗೆ ಗೆದ್ದರೆಂದು ಒಮ್ಮೆ ಕೇಳಿ. ಅವರು ಬಹಿರಂಗವಾಗಿ ಹೇಳಲ್ಲ, ಬದಲಾಗಿ ರಾತ್ರಿ ಹೋಗಿ ಕೇಳಿದರೆ ಕಿವಿಯಲ್ಲಿ ಹೇಳುತ್ತಾರೆ. ಹಿಂದುಳಿದ ಸಮುದಾಯವನ್ನು ನಾವು ಬಿಟ್ಟು ಕೊಡುವುದಕ್ಕೆ ತಯಾರಿಲ್ಲ. ಏಕೆಂದರೆ ಅದು ನಮ್ಮ ಸಮುದಾಯ," ಎಂದರು.

'ಸಿದ್ದರಾಮಯ್ಯ ಮತ್ತು ನಾನು ಶ್ರೇಷ್ಟರಿದ್ದೇವೆ'
ನಾನು ರಾಜಕೀಯವಾಗಿ ಕುರುಬ ಸಮುದಾಯದ ನಾಯಕನ್ನು ಎದುರಿಸುತ್ತಿದ್ದೇನೆ. ಅದಕ್ಕಾಗಿ ಕುರುಬ ಸಮುದಾಯಕ್ಕೆ ನನ್ನ ಬಗ್ಗೆ ಸಿಟ್ಟು ಇದೆ. ಅದಕ್ಕಾಗಿ ನಾನು ಈ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದ್ದೆ. ಆದರೆ, ಆದರೆ ಹಾಗೇನಿಲ್ಲ ಎಂದು ಸೋಮಶೇಖರ್ ರೆಡ್ಡಿ ನನ್ನನ್ನ ಕರೆದುಕೊಂಡು ಬಂದರು. ರಾಜಕೀಯದಲ್ಲಿ ನಾನು ಮತ್ತು ಸಿದ್ದರಾಮಯ್ಯನವರು ಶ್ರೇಷ್ಟರಿದ್ದೇವೆ. ಯಾರು ಅನ್ಯತಾ ಭಾವಿಸಬೇಡಿ ಎಂದರು.
"ಒಮ್ಮೊಮ್ಮೆ ಸಿದ್ದರಾಮಯ್ಯ ಮತ್ತು ನಾನು ಮಾತನಾಡುತ್ತಿರುತ್ತೇವೆ. ನೀವು ಏನು ತಿಳಿದುಕೊಳ್ಳಬಾರದು, ನಾವು ರಾಜಕೀಯಗೋಸ್ಕರ ಮಾತನಾಡುತ್ತೇವೆ." ರಾಮುಲು ಕುರುಬ ಸಮಾಜ ಮತ್ತು ಸಿದ್ದರಾಮಯ್ಯ ವಿರುದ್ಧ ಎಂದು ತಿಳಿದು ಕೊಳ್ಳಬಾರದು. ಕುರುಬ ಸಮಾಜಕ್ಕೆ ನಾನು ವಿರೋಧಿ ಅಲ್ಲ. ಸಿದ್ದರಾಮಯ್ಯ ಮತ್ತು ನಾನು ಎರಡೆರಡು ಕ್ಷೇತ್ರದಲ್ಲಿ ನಿಂತು ಒಂದರಲ್ಲಿ ಗೆದ್ದು, ಮತ್ತೊಂದು ಕ್ಷೇತ್ರದಲ್ಲಿ ಸೋತಿದ್ದೇವೆ. ನನಗೆ ಯಾವುದೇ ವಿಚಾರ ಹೇಳುವುದಕ್ಕೆ ಯಾರ ಭಯವಿಲ್ಲ. ನಾನು ಯಾರಿಗೂ ಗುಲಾಮನಲ್ಲ. ನಾನು ಯಾರ ಕೈಯಲ್ಲಿ ಕೆಲಸ ಮಾಡುತ್ತಿಲ್ಲ," ಎಂದು ಶ್ರೀರಾಮುಲು ಸ್ಪಷ್ಟಪಡಿಸಿದರು.

"ಸಿದ್ದರಾಮಯ್ಯ ಮತ್ತು ನಾನು ನೋಡುವುದಕ್ಕೆ ರಾಜಕೀಯವಾಗಿ ವಿರುದ್ಧ ಆಗಿರುತ್ತೇವೆ. ಆದರೆ ನಾವಿಬ್ಬರು ಬಹಳಷ್ಟು ದೋಸ್ತಿಗಳು, ನಾವು ಒಳಗೊಳಗೆ ಏನೋ ಮಾಡಿಕೊಳ್ಳುತ್ತೇವೆ." ಇಬ್ಬರು ರಾಜಕಾರಣದಲ್ಲಿರಬೇಕು. ಏನೋ ಮಾಡಿಕೊಂಡು ಇಬ್ಬರು ವಿಧಾನಸಭೆ ಪ್ರವೇಶ ಮಾಡುತ್ತೇವೆ. ಏಕೆ ಯೋಚನೆ ಮಾಡುತ್ತೀರಿ ಎಂದು ಜನರಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ದರಾಮನಂದ ಸ್ವಾಮಿ, ಶಾಸಕ ಬಿ.ನಾಗೇಂದ್ರ, ಮೇಯರ್ ರಾಜೇಶ್ವರಿ, ಕುರುಬ ಸಂಘದ ಅಧ್ಯಕ್ಷ ಎರ್ರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications