Karnataka assembly election 2023: ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ: ಶ್ರೀರಾಮುಲು
ರಾಜ್ಯ ವಿಧಾನಸಭೆ ಚುನಾವಣೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಬಳ್ಳಾರಿ, ಮಾರ್ಚ್, 15: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವೆ ಎಂದು ಸಚಿವ ಬಿ.ಶ್ರೀರಾಮುಲು ಬಳ್ಳಾರಿಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ನಗರದ ಸ್ವಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಕ್ಷೇತ್ರದಲ್ಲಿ ಸೇವೆ ಮಾಡಿದ್ದೇನೆ. ಈಗ ಮತ್ತೊಮ್ಮೆ ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಹೈಕಮಾಂಡ್‌ಗೂ ತಿಳಿಸಿದ್ದು, ಬಹುತೇಕ ಎಲ್ಲರ ಅಪೇಕ್ಷೆ ಮೇರೆಗೆ ಬಳ್ಳಾರಿ ಗ್ರಾಮೀಣದಿಂದಲೇ ಸ್ಪರ್ಧೆ ಮಾಡುವೆ ಎಂದರು.

ಅಧಿಕಾರ ಸಿಗುವ ಮುನ್ನವೇ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಆರಂಭವಾಗಿದೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಕಚ್ಚಾಟದ ಮಧ್ಯೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಜಗಳ ನಡೆಯುತ್ತಿದೆ. ಇಬ್ಬರು ನಾಯಕರು ತಿರುಕನ ಕನಸು, ಹಗಲು ಕನಸು ಕಾಣುತ್ತಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಬಗ್ಗೆ ಜನರು ಜಾಗೃತರಾಗಿದ್ದಾರೆ ಎಂದರು.
ಡಿಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ರಾಮುಲು
ಕಳೆದ ಬಾರಿ ಉತ್ತರ ಕರ್ನಾಟಕದಲ್ಲಿ ನಮಗೆ ಸಂಖ್ಯೆ ಕಡಿಮೆಯಾಗಿತ್ತು. ಇದರಿಂದಾಗಿ ಸರ್ಕಾರ ರಚನೆ ಮಾಡಲು ಕಷ್ಟವಾಗಿತ್ತು. ಆದರೆ ಈ ಬಾರಿ ನೂರಕ್ಕೆ ನೂರರಷ್ಟು ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಒಳ್ಳೆಯ ಅವಕಾಶ ನನಗೆ ಸಿಕ್ಕೇ ಸಿಗುತ್ತದೆ ಎನ್ನುವ ಮೂಲಕ ಶ್ರೀರಾಮುಲು ಅವರು ಮತ್ತೊಮ್ಮೆ ಉಪ ಮುಖ್ಯಮಂತ್ರಿ ಅಗುವ ಇಂಗಿತ ವ್ಯಕ್ತಪಡಿಸಿದರು.
ಸಾರಿಗೆ ಸಿಬ್ಬಂದಿ ಮುಷ್ಕರ ಮಾಡುವುದಿಲ್ಲ
ಸಾರಿಗೆ ಸಿಬ್ಬಂದಿಗಳ ಮುಷ್ಕರದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಸಾರಿಗೆ ಸಿಬ್ಬಂದಿ ಜೊತೆಗೆ ಮಾತನಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಮುಷ್ಕರ ಮಾಡುವುದಿಲ್ಲ. ವೇತನ ಪರಿಷ್ಕರಣೆ ವಿಚಾರದಲ್ಲಿ ಕರೆದು ಮಾತನಾಡಿದ್ದೇನೆ. ಹಣಕಾಸಿನ ಇತಿಮಿತಿಯಲ್ಲಿ ಒಂದಷ್ಟು ಮಾಡುತ್ತೇನೆ ಎಂದಿದ್ದೇ. ಅದಕ್ಕೆ ಅವರು ಒಪ್ಪಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಮಾತನಾಡಿ, ಗುರುವಾರ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.

ಫೆಡರೇಶನ್ ಅವರ ಜೊತೆ ಮಾತನಾಡಲು ಎಂ.ಡಿ.ಅನ್ಬುಕುಮಾರ್‌ಗೆ ಈಗಾಗಲೇ ಹೇಳಿದ್ದೇನೆ. ಮನವೊಲಿಸಲು ಸೂಚನೆ ನೀಡಿದ್ದೇನೆ. ವೇತನ ಪರಿಷ್ಕರಣೆ ಮಾಡುವದು ನಿಜ ಎಂದು ಹೇಳಿದರು.












Click it and Unblock the Notifications