ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಿಂದಾಲ್ ನಂಜು ಮುಂದುವರೆದರೆ ಕಂಪನಿ ಸಂಪೂರ್ಣ ಬಂದ್; ಆನಂದ್ ಸಿಂಗ್

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜೂನ್ 19: ಬಳ್ಳಾರಿ ಜಿಲ್ಲೆಯ ಜಿಂದಾಲ್ ನಂಜು ಇದೇ‌ ರೀತಿ ಮುಂದುವರೆದರೆ ಇಡೀ ಕಂಪನಿಯನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಇಲಾಖೆ ಖಾತೆ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ‌

ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ನಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ಜಿಂದಾಲ್ ಕಂಪನಿಯನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಚೆರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುತ್ತಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

If Coronavirus Cases Continue We Will Close Ballari Jindal Company Said Minister Anand Singh

ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಆದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆ ಸೊಮವಾರ ತುರ್ತು ಸಭೆ ಕರೆಯಲಾಗಿದೆ. ಜಿಂದಾಲ್ ಮುಖ್ಯಸ್ಥ ವಿನೋದ್ ನಾವೆಲ್ ಅವರೂ ಸಭೆಗೆ ಆಗಮಿಸಲಿದ್ದಾರೆ ಎಂದರು. ದೇಶ ಲಾಕ್ ಡೌನ್ ಮಾಡಿದಾಗಲೂ ಜಿಂದಾಲ್ ಗೆ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೆವು. ಹೀಗಾಗಿ ಜನ ನಮ್ಮ ಮೇಲೆ ಅನುಮಾನ ವ್ಯಕ್ತಪಡಿಸುತ್ತಾರೆ. ಆದರೆ ಸರ್ಕಾರ ಅಗತ್ಯ ಬಿದ್ದರೆ ಜಿಂದಾಲ್ ಸಂಪೂರ್ಣ ಬಂದ್ ಮಾಡಲು ಸಿದ್ಧವಾಗಿದೆ ಎಂದಿದ್ದಾರೆ.

English summary
If coronavirus cases in ballari jindal continue, we will completely close company said minister for forest and ecology ananda singh,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X