ಸ್ವಾತಂತ್ರ್ಯ ದಿನಾಚರಣೆ; ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ

ಬಳ್ಳಾರಿ, ಆಗಸ್ಟ್ 06; "ಸ್ವಾತಂತ್ರ್ಯ ದಿನಾಚರಣೆ 2023ರ ಹಿನ್ನಲೆಯಲ್ಲಿ ಎಲ್ಲಾ ಸರಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಪ್ರತಿಯೊಂದು ಇಲಾಖೆಯವರು ತಮ್ಮ ಇಲಾಖೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ವಿಮ್ಸ್ ಮೈದಾನದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು" ಎಂದು ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ನೀಡಿದರು.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶನಿವಾರ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ಕೊಟ್ಟರು.

Independence Day Government Buildings To Decorated With Lights At Ballari

"76ನೇ ಸ್ವಾತಂತ್ರ್ಯೋತ್ಸವವನ್ನು ಬಳ್ಳಾರಿ ನಗರದ ಸುಧಾಕ್ರಾಸ್ ಬಳಿಯ ವಿಮ್ಸ್ ಮೈದಾನದಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು" ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಚಿವರಿಂದ ಧ್ವಜಾರೋಹಣ; ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆದಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನದಲ್ಲಿ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ, ಧ್ವಜಾರೋಹಣ ಸಂದೇಶವನ್ನು ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ಬೇಕಾದ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರಾಷ್ಟ್ರೀಯ ಹಬ್ಬಗಳ ಆಚರಣಾ ವಿವಿಧ ಸಮಿತಿಯ ಅಧಿಕಾರಿಗಳಿಗೆ ತಿಳಿಸಿದರು.

ಆಗಸ್ಟ್‌ 15ರ ಮಂಗಳವಾರ ಬೆಳಗ್ಗೆ ನಗರದ ಎಚ್. ಆರ್. ಗವಿಯಪ್ಪ ವೃತ್ತದಲ್ಲಿ ಬೃಹತ್ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜಾರೋಹಣ, ನಂತರ ವಿಮ್ಸ್ ಆವರಣದಲ್ಲಿನ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ನಡೆಯಲಿದೆ. ಬಳಿಕ ವಿಮ್ಸ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಪೊಲೀಸ್ ಇಲಾಖೆಯು ಪರೇಡ್ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಶಾಲೆಗಳಲ್ಲಿ ಪರೇಡ್‌ನಲ್ಲಿ ಭಾಗವಹಿಸುವ ಮಕ್ಕಳಿಗೆ ತರಬೇತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಉಳಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳ ತಂಡಗಳಿಗೆ ಪೂರ್ವಭಾವಿ ತರಬೇತಿಯನ್ನು ನೀಡಿ ಸಜ್ಜುಗೊಳಿಸಬೇಕು ಎಂದರು.

ಮುಖ್ಯ ಕಾರ್ಯಕ್ರಮ ನಡೆಯುವ ಕಡೆ ಆಸನದ ವ್ಯವಸ್ಥೆ ಮಾಡಬೇಕು. ಶಾಲಾ ಮಕ್ಕಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಸಮಾರಂಭ ನಡೆಯುವ ವೇಳೆ ಅಗತ್ಯ ವೈದ್ಯಕೀಯ ವ್ಯವಸ್ಥೆಯನ್ನು ಮಾಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಮಾರಂಭದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಸನ್ಮಾನ, ವಿಶೇಷ ಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಹಾಗೂ ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಟರಾಜ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಮುಂತಾದವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+