ಅಂತರರಾಜ್ಯ ಸಂಚಾರಕ್ಕೆ ಬಳ್ಳಾರಿ ಜಿಲ್ಲಾಡಳಿತದ ನಿರ್ಬಂಧ

ಬಳ್ಳಾರಿ, ಜುಲೈ 07 : ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಬಳ್ಳಾರಿ ಜಿಲ್ಲಾಡಳಿತ ಅಂತರರಾಜ್ಯ ಪ್ರಯಾಣಕ್ಕೆ ನಿರ್ಬಂಧ ಹಾಕಿದೆ. ಸೋಮವಾರ ಬಳ್ಳಾರಿ ಜಿಲ್ಲೆಯಲ್ಲಿ 99 ಹೊಸ ಪ್ರಕರಣ ಪತ್ತೆಯಾಗಿತ್ತು.

Recommended Video

      ಕಪ್ಪು ಪಟ್ಟಿ ಕಟ್ಟಿಕೊಂಡು ಬೀದಿಗೆ ಬಂದ ಡಾಕ್ಟರ್ ಮತ್ತು ನರ್ಸ್ ಗಳು | Oneindia Kannada

      ಮಂಗಳವಾರ ಬಳ್ಳಾರಿ ಜಿಲ್ಲಾಡಳಿತ ಈ ಕುರಿತು ಆದೇಶ ಪ್ರಕಟಿಸಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದಿಂದ ಜನರು ಬಳ್ಳಾರಿಗೆ ಬರುವಂತಿಲ್ಲ ಎಂದು ಆದೇಶದಲ್ಲಿ ಜಿಲ್ಲಾಡಳಿತ ಹೇಳಿದೆ.

      ಸೇವಾ ಸಿಂಧು ಮೂಲಕ ನೋಂದಣಿ ಮಾಡಿದವರು, ಕಂಪನಿಗಳ ಐಡಿ ಕಾರ್ಡ್ ಹೊಂದಿರುವವರು, ವಿವಿಧ ಇಲಾಖೆಗಳ ವ್ಯಕ್ತಿಗಳನ್ನು ಹೊರತುಪಡಿಸಿ ಉಳಿದವರು ಬಳ್ಳಾರಿ ಜಿಲ್ಲೆಗೆ ಪ್ರವೇಶಿಸುವುದನ್ನು ತಕ್ಷಣದಿಂದಲೇ ನಿರ್ಬಂಧಿಸಲಾಗಿದೆ.

      Interstate Movement Banned By Ballari District Administration

      ಈ ನಿರ್ಬಂಧ ಅಗತ್ಯ ವಸ್ತುಗಳನ್ನ ಸರಬರಾಜು ಮಾಡುವ ವಾಹನಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಡಳಿತ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಅಂತರರಾಜ್ಯದ ಗಡಿಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ.

      ಬೆಂಗಳೂರು ನಗರ ಹೊರತುಪಡಿಸಿದರೆ ಪ್ರತಿ ದಿನ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗುತ್ತಿರುವ ಜಿಲ್ಲೆ ಬಳ್ಳಾರಿ. ಜಿಲ್ಲೆಯಲ್ಲಿ ಇದುವರೆಗೂ 1343 ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 36 ಜನರು ಇದುವರೆಗೂ ಮೃತಪಟ್ಟಿದ್ದಾರೆ.

      ಆಸ್ಪತ್ರೆಗೆ ಸಚಿವರ ಭೇಟಿ: ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್ ಮಂಗಳವಾರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಂಭೀರ ಕೊರೊನಾ ಸೋಂಕಿತರ ಅಹವಾಲು ಆಲಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+