ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಳ್ಳಾರಿ : ಚುನಾವಣೆಗೆ ಎರಡು ದಿನ ಮೊದಲು ಐಟಿ ದಾಳಿ

|
Google Oneindia Kannada News

ಬಳ್ಳಾರಿ, ಏಪ್ರಿಲ್ 21 : ಲೋಕಸಭಾ ಚುನಾವಣೆಗೆ ಎರಡು ದಿನ ಬಾಕಿ ಇರುವಾಗ ಬಳ್ಳಾರಿಯಲ್ಲಿ ಐಟಿ ದಾಳಿ ನಡೆಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ಮುಂದುವರೆದಿದೆ.

ಭಾನುವಾರ ಬೆಳಗ್ಗೆ ಚುನಾವಣಾಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರ ಸಹಕಾರದಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಳ್ಳಾರಿಯ ಹಲವು ಕಡೆ ದಾಳಿಯನ್ನು ನಡೆಸಿದ್ದಾರೆ. ಚುನಾವಣೆಗೆ ಹಣ ಸಂಗ್ರಹ ಆರೋಪದ ಮೇಲೆ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ.

ಬೆಳಗಾವಿ : ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿಬೆಳಗಾವಿ : ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ

IT raid

ಕೆಪಿಸಿಸಿ ಉಪಾಧ್ಯಕ್ಷ ಸೂರ್ಯ ನಾರಾಯಣ ರೆಡ್ಡಿ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ, ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಪ್ತರ ಮನೆ ಮೇಲೆ ದಾಳಿ ಮಾಡಲಾಗಿದೆ.

ಮಂಡ್ಯ : ಕಾಂಗ್ರೆಸ್‌ ನಾಯಕ ಆತ್ಮಾನಂದ ಮನೆ ಮೇಲೆ ಐಟಿ ದಾಳಿಮಂಡ್ಯ : ಕಾಂಗ್ರೆಸ್‌ ನಾಯಕ ಆತ್ಮಾನಂದ ಮನೆ ಮೇಲೆ ಐಟಿ ದಾಳಿ

ಏಪ್ರಿಲ್ 23ರಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯವಾಗಲಿದೆ. ಮತದಾನಕ್ಕೆ ಎರಡು ದಿನ ಬಾಕಿ ಇರುವಾಗಲೇ ಐಟಿ ದಾಳಿ ನಡೆದಿದೆ.

ಬಳ್ಳಾರಿ ಚುನಾವಣಾ ಪುಟ

ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೈ.ದೇವೇಂದ್ರಪ್ಪ, ಕಾಂಗ್ರೆಸ್-ಜೆಡಿಎಸ್‌ನಿಂದ ಹಾಲಿ ಸಂಸದ ವಿ.ಎಸ್.ಉಗ್ರಪ್ಪ ಕಣದಲ್ಲಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ನಾಯಕರ ಮನೆಗಳ ಮೇಲೆ ಏಕೆ ಐಟಿ ದಾಳಿ ನಡೆಸಲಾಗುತ್ತಿದೆ? ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದರು. ಈಗ ಕೆಪಿಸಿಸಿ ಉಪಾಧ್ಯಕ್ಷರ ಮನೆ ಮೇಲೆ ದಾಳಿ ಮಾಡಲಾಗಿದೆ.

English summary
Income Tax department conducted raid on house of Congress and BJP workers in Ballari. Ballari lok sabha seat elections will be held on April 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X