• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮದ್ಯ ಮಾರಾಟ ನಿಷೇಧಕ್ಕೆ ಆಗ್ರಹಿಸಿ ಇಟಗಿಹಾಳ್ ಗ್ರಾಮಸ್ಥರ ಪ್ರತಿಭಟನೆ

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಸೆಪ್ಟೆಂಬರ್ 12: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಇಟಗಿಹಾಳ್ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಇಂದು ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆ ತಡೆದು ನೂರಾರು ಮಹಿಳೆಯರು, ಗ್ರಾಮಸ್ಥರು ಕೆಲಕಾಲ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಗಡಿಗ್ರಾಮವಾದ ಇಟಗಿಹಾಳ್ ಗ್ರಾಮದಲ್ಲಿ ವಿಪರೀತ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು, ಗ್ರಾಮದ ಮಹಿಳೆಯರು ನೆರೆಯ ಆಂಧ್ರಪ್ರದೇಶದ ಆದೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲೇ ಅಡುಗೆ ತಯಾರಿಸಿಕೊಂಡು ಬೃಹತ್ ಪ್ರತಿಭಟನೆ ನಡೆಸಿದರು. ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸುವ ನಮ್ಮ ಗಂಡಂದಿರು ಮದ್ಯಸೇವನೆ ಮಾಡಿ ತಮ್ಮ ಆರೋಗ್ಯ ಹದಗೆಡಿಸಿಕೊಳ್ಳುವುದಲ್ಲದೇ, ಮನೆಯ ನೆಮ್ಮದಿಯನ್ನೂ ಹಾಳು ಮಾಡುತ್ತಿದ್ದಾರೆ. ಕೂಡಲೇ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿ 20 ರೂ.ಗೆ ಒಂದು ಬಿಯರ್... ಆದ್ರೂ ಕೊಳ್ಳೋರೇ ಇಲ್ಲ!

ಸಿರುಗುಪ್ಪ ಪಟ್ಟಣದ ನಡುರಸ್ತೆಯಲ್ಲೇ ನೂರಾರು ಮಹಿಳೆಯರು ಮತ್ತು ಗ್ರಾಮಸ್ಥರು ಮೊಕ್ಕಾಂ ಹೂಡಿದ್ದರು. ಪೊಲೀಸರು ಮತ್ತು ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವವರಿಗೂ ನಾವ್ ಇಲ್ಲಿಂದ ಕದಲುವುದಿಲ್ಲ ಎಂದು ಗ್ರಾಮಸ್ಥರ ಪಟ್ಟು ಹಿಡಿದ ಪ್ರಸಂಗವೂ ನಡೆಯಿತು.

ಸದ್ಯ ಇಟಗಿಹಾಳ್ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನಮ್ಮೂರಿನಲ್ಲಿರುವ ಮದ್ಯದ ಅಂಗಡಿಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಲೇಬೇಕೆಂದು ಪ್ರತಿ ಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಳಪಾಕ: ಪ್ರತಿಭಟನಾ ಸ್ಥಳದಲ್ಲೇ ಅಡುಗೆ ತಯಾರಿ ಮಾಡಿಕೊಳ್ಳುವ ಪ್ರತಿಭಟನಾಕಾರರು ನಾವು ಜಿಲ್ಲಾಧಿಕಾರಿ ಸ್ಥಳಕ್ಕಾಗಮಿಸುವವರಿಗೂ ಇಲ್ಲಿಂದ ತೆರಳುವುದಿಲ್ಲವೆಂದು ಪಟ್ಟು ಹಿಡಿದರು.‌ ಕೆಲಕಾಲ ಆದೋನಿ- ಸಿರುಗುಪ್ಪ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಕಳೆದೆರಡು ಗಂಟೆಯಿಂದಲೂ ಎರಡು ಕಿಲೋ ಮೀಟರ್ ಉದ್ದಕ್ಕೂ ವಾಹನಗಳು ನಿಂತಲ್ಲೇ ನಿಂತಿದ್ದವು.

English summary
Hundreds of women and villagers staged a protest in Siraguppa town today demanding a ban on liquor sales in the Itagihal village of Ballari,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X