ಆಪ್ತ ಸ್ನೇಹಿತ ಜನಾರ್ದನ ರೆಡ್ಡಿ ಪರ ಬ್ಯಾಟ್ ಬೀಸಿದ ಬಿ. ಶ್ರೀರಾಮುಲು

ಬಳ್ಳಾರಿ,ನವೆಂಬರ್ 1 : ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷವನ್ನು ಕಟ್ಟಿದವರು, ಯಾವತ್ತಿದರೂ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷದ ಪರವಾಗಿ ಇರುತ್ತಾರೆ. ಮುಜುಗರ ತರುವ ಕೆಲಸವನ್ನು ಯಾರೂ ಮಾಡುವುದಿಲ್ಲಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಮಾಜಿ ಸಚಿವ ಜರ್ನಾದನ ರೆಡ್ಡಿ, "ನನಗೆ ಕಾಂಗ್ರೆಸ್ ನಾಯಕರು ಹೆಚ್ಚು ತೊಂದರೆ ಕೊಟ್ಟಿದ್ದರು. ಆದರೆ ಈಗ, ಬಿಜೆಪಿ ನಾಯಕರು ಕೂಡ ನನಗೆ ತೊಂದರೆ ಕೊಡುತ್ತಿದ್ದಾರೆ. ನನ್ನ ರಾಜಕೀಯ ಜೀವನ ಮುಂದೆ ಹೇಗಿರತ್ತದೆ, ಅದು ನನಗೆ ಗೊತ್ತಿಲ್ಲ" ಎಂದು ಹೇಳಿದ್ದರು.

"ನಾನು ಬೆಳೆಸಿದ ಪಕ್ಷದವರು ನನಗೆ ತುಂಬಾ ಕಷ್ಟ ಕೊಡುತ್ತಿದ್ದಾರೆ. ನಾನು ನವಂಬರ್ 6ರ ಬಳಿಕ ಬಳ್ಳಾರಿಯಲ್ಲಿ ಇರುವ ಹಾಗಿಲ್ಲ. ಸುಪ್ರೀಂಕೋರ್ಟ್ ಆದೇಶ ಹಿನ್ನಲೆ, ನಾನು ಬಳ್ಳಾರಿ ಬಿಡಬೇಕು, ಆದರೆ ನಾನು ಬಳ್ಳಾರಿ ಬಿಟ್ಟು ಬೆಂಗಳೂರಿನಲ್ಲಿ ಇರುವುದಿಲ್ಲ. ಇಲ್ಲೇ ಆಸು ಪಾಸಿನಲ್ಲಿ ಇರುವೆ" ಎಂದು ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು.

Janardhana Reddy Our leader he always Stand for BJP says Sriramulu

ಬಿಜೆಪಿ ವಿರುದ್ಧ ಜನಾರ್ದನ ರೆಡ್ಡಿ ಮುನಿಸು ವಿಚಾರವಾಗಿ ಬಳ್ಳಾರಿಯಲ್ಲಿ ಮಂಗಳವಾರ ಮಾತನಾಡಿದ ಶ್ರೀರಾಮುಲು, "ಜನಾರ್ದನ ರೆಡ್ಡಿ ಯಾವ ಕಾರಣಕ್ಕೆ ಹೇಳಿಕೆ ನೀಡಿದ್ದಾರೆ ಎನ್ನುವುದು ಗೊತ್ತಿಲ್ಲ, ಮಾಧ್ಯಮದ ಮೂಲಕ ನನಗೂ ವಿಚಾರ ಗೊತ್ತಾಗಿದೆ. ಅವರು ನಮ್ಮ ನಾಯಕರು ಈ ಬಗ್ಗೆ ನಾನು ಅವರ ಜೊತೆ ಮಾತನಾಡುವೆ" ಎಂದರು.

ಎಸ್‌ಟಿ ಸಮಾವೇಶ; ನವೆಂಬರ್ 20ರಂದು ಬಳ್ಳಾರಿಯಲ್ಲಿ ಬೃಹತ್ ಎಸ್‌ಟಿ ಸಮಾವೇಶ ನಡೆಯಲಿದೆ. ನಿರೀಕ್ಷೆಗೂ ಮೀರಿ ಜನರು ಸೇರುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಅಹ್ವಾನ ಮಾಡಲು ನಾನು ಈಗಾಗಲೇ ಹಲವು ಜಿಲ್ಲೆಗಳಿಗೆ ಪ್ರವಾಸ ಮಾಡಿರುವೆ. ಕೇಂದ್ರ ನಾಯಕರಿಗೂ ಆಹ್ವಾನ ನೀಡಲಾಗುತ್ತದೆ. ಕೇಂದ್ರ ನಾಯಕರು ಭಾಗಿಯಾಗುವ ಕುರಿತು ಮುಖ್ಯಮಂತ್ರಿಯವರು ನಿರ್ಧಾರ ಮಾಡಲಿದ್ದಾರೆ ಎಂದು ಸಚಿವರು ಹೇಳಿದರು.

30 ಎಕರೆ ಪ್ರದೇಶದಲ್ಲಿ ವೇದಿಕೆ; ಸಮಾವೇಶಕ್ಕೆ ನಗರದ ಹೊರವಲಯದಲ್ಲಿ 30 ಎಕರೆ ಪ್ರದೇಶದ ಜಮೀನಿನಲ್ಲಿ ವೇದಿಕೆ ಹಾಗೂ ಪೆಂಡಾಲ್ ಹಾಕಲಾಗುವುದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳದ ಕ್ರೆಡಿಟ್ ಬಿಜೆಪಿ ಸರಕಾರಕ್ಕೆ ಸಲ್ಲುತ್ತದೆ. ಮೀಸಲಾತಿ ಹೆಚ್ಚಳಕ್ಕಾಗಿ ಕಳೆದ ನಾಲ್ಕು ದಶಕಗಳ ಹೋರಾಟಕ್ಕೆ ಫಲ ಸಿಕ್ಕಿದೆ. ಯಾವ ಸರಕಾರಗಳು ಮೀಸಲಾತಿ ಹೆಚ್ಚಳ ಮಾಡಲಿಲ್ಲ, ನನಗೆ ಬಿಜೆಪಿ ಸರಕಾರದ ಮೇಲೆ ನಂಬಿಕೆ ಇತ್ತು, ಇದೀಗ ಬಸವರಾಜ ಬೊಮ್ಮಾಯಿ ಮೀಸಲಾತಿಯನ್ನು ಕೊಟ್ಟಿದ್ದಾರೆ ಎಂದರು.

ಬಿ. ಶ್ರೀರಾಮುಲುಗೆ ಮೀಸಲಾತಿ ಕೊಡಿಸಲು ಆಗುವುದಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡುತ್ತಿದ್ದರು. ಆದರೆ ನಾನು ಬೇರೆಯವರ ಟೀಕೆಗೆ ತಲೆಕೆಡಿಸಿಕೊಳ್ಳದೆ, ಮಾತುಕೊಟ್ಟಂತೆ ನಡೆದುಕೊಂಡಿದ್ದೇನೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+