ನೂತನ ಸಿಎಂಗೆ ಶುಭಾಶಯ ಕೋರಿದ ಜನಾರ್ದನ ರೆಡ್ಡಿ

ಬಳ್ಳಾರಿ, ಜುಲೈ 27: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಅವರಿಗೆ ಶುಭ ಕೋರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

"ರೈತ ನಾಯಕನಿಗೆ ಹಾರ್ದಿಕ ಶುಭಾಶಯಗಳು. ಕರ್ನಾಟಕದ ಧೀಮಂತ ನಾಯಕ ರೈತ ಹೋರಾಟಗಾರ ಸನ್ಮಾನ್ಯ ಬಿ.ಎಸ್. ಯಡಿಯೂರಪ್ಪನವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿದ ಈ ಶುಭ ಸಂದರ್ಭದಲ್ಲಿ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.

Janardhana Reddy Wishes Cm Yeddyurappa

"ಯಡಿಯೂರಪ್ಪನವರ ನೇತೃತ್ವದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲೆಡೆ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ. ಸಮಸ್ತ ಜನಾಂಗದ ಭಾಂಧವರ ಪ್ರೀತಿಗೆ ಅವರು ಪಾತ್ರರಾಗಲಿ. ಎಲ್ಲ ರೈತಪರ ಯೋಜನೆಗಳು ಜಾರಿಗೊಳ್ಳಲಿ. ದೇವರು ಯಡಿಯೂರಪ್ಪನವರಿಗೆ ಇನ್ನು ಹೆಚ್ಚಿನ ಅಧಿಕಾರ, ಅಂತಸ್ತು ದಯಪಾಲಿಸಲಿ' ಎಂದು ಹಾರೈಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+