ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್‌ಡೌನ್ ಇದ್ರೂ ಜಿಂದಾಲ್ ಕಂಪನಿ ಕಾರ್ಯ ನಿರ್ವಹಣೆ: ಆಕ್ರೋಶ

|
Google Oneindia Kannada News

ಬಳ್ಳಾರಿ, ಮಾರ್ಚ್ 25: ಏಪ್ರಿಲ್ 14ರವರೆಗೆ ಇಡೀ ದೇಶ ಹಾಗೂ ಎಲ್ಲಾ ರಾಜ್ಯಗಳು ಲಾಕ್‌ಡೌನ್ ಆಗಿದ್ದರೂ ಬಳ್ಳಾರಿಯ ಜಿಂದಾಲ್ ಕಂಪನಿ ಮಾತ್ರ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ.

ಕರ್ನಾಟಕದಲ್ಲಿರುವ ಕಂಪನಿಗಳ ಪೈಕಿ ಜಿಂದಾಲ್‌ನಲ್ಲಿ ಅತಿ ಹೆಚ್ಚು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೂ ಅವರಿಗೆ ರಜೆ ನೀಡಿದೆ ಕೆಲಸ ಮಾಡಿಸಿಕೊಳ್ಳುತ್ತಿದೆ. ಹೀಗಾಗಿ ಕೊರೊನಾ ವೈರಸ್ ಭೀತಿ ಎದುರಾಗಿದೆ. ಇಂದು ಜಿಂದಾಲ್ ಕಾರ್ಮಿಕರಿದ್ದ 12 ಬಸ್‌ಳನ್ನು ತಡೆದು ಜನರು ಪ್ರತಿಭಟನೆ ನಡೆಸಿದ್ದಾರೆ.

Live Updates : ಕಲಬುರಗಿಯಲ್ಲಿ ಮತ್ತೆ ಲಾಕ್‌ಡೌನ್ ನಿರ್ಲಕ್ಷ್ಯLive Updates : ಕಲಬುರಗಿಯಲ್ಲಿ ಮತ್ತೆ ಲಾಕ್‌ಡೌನ್ ನಿರ್ಲಕ್ಷ್ಯ

ಸುಮಾರು 20 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಂದ ಕೆಲಸ ನಡೆಯುತ್ತಿದೆ ಎಂಬ ಮಾಹಿತಿ ಸ್ಥಳೀಯರಿಗೆ ಸಿಕ್ಕಿತ್ತು. ಹೀಗಾಗಿ ಇಂದು ಬೆಳಗಿನ ಜಾವ ಕಾರ್ಮಿಕರನ್ನು ಕಂಪನಿಗೆ ಕರೆದುಕೊಂಡು ಹೋಗುತ್ತಿದ್ದ ಸುಮಾರು 12 ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಆದರೆ ಇದಕ್ಕೆಲ್ಲ ಕ್ಯಾರೆ ಎನ್ನದೇ ಕಾರ್ಮಿಕರನ್ನು ಕಂಪನಿಗೆ ಕರೆದೊಯ್ಯಲಾಯಿತು.

Jindal Company Dont Care For Karnataka Lockdown For 21 Days

ಜಿಂದಾಲ್ ಕಂಪನಿಗೆ ಅಮೆರಿಕ, ಚೀನಾ ಸೇರಿದಂತೆ ವಿವಿಧ ಭಾಗದಿಂದ ಎಂಜಿನೀಯರ್ ಗಳು ಬರುತ್ತಾರೆ. ಅಷ್ಟೇ ಅಲ್ಲದೆ ಸ್ಥಳೀಯರು ಕಂಪನಿಯಲ್ಲಿ ಕೆಲಸ ಮಾಡಿ ತಮ್ಮ ಗ್ರಾಮಗಳಿಗೆ ಮರಳುತ್ತಾರೆ. ಈ ಪೈಕಿ ಯಾರಿಗಾದರು ಕೊರೊನಾ ಸೋಂಕು ತಗುಲಿದರೆ ಜಿಲ್ಲೆಯ ಪರಿಸ್ಥಿತಿ ತುಂಬಾ ಗಂಭೀರವಾಗಿರುತ್ತದೆ. ಇದರಿಂದಾಗಿ ಏಪ್ರಿಲ್ 14ರವರೆಗೂ ಕಂಪನಿಯನ್ನು ಮುಚ್ಚಿಸಬೇಕು ಎಂದು ಸ್ಥಳೀಯರ ಒತ್ತಾಯಿಸಿದ್ದಾರೆ.

ಮಹಾಮಾರಿ ಕೊರೊನಾ ವೈರಸ್‌ನಿಂದಾಗಿ ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ಮುಂದಿನ 21 ದಿನಗಳ ಕಾಲ ಭಾರತ ಲಾಕ್‍ಡೌನ್ ಆಗಲಿದೆ ಎಂದು ಹೇಳಿದ್ದರು. ಆದರೆ ಕೆಲವರು ಇದನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ.

ಬಳ್ಳಾರಿಯ ಜಿಂದಾಲ್ ಕಂಪನಿ ಕೂಡ ನಡೆಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿರುವ ಕಾರ್ಮಿಕರನ್ನು ಬಸ್ಸಿನಲ್ಲಿ ಕರೆದುಕೊಂಡು ಬರಲಾಗುತ್ತಿದೆ. ಈ ಮೂಲಕ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ. ಇದರಿಂದಾಗಿ ಸ್ಥಳೀಯರು ಜಿಂದಾಲ್ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

English summary
Until April 14, when the entire country and all the states were on lockdown, only the Bellary Jindal Company was operating as usual.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X