ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಿಂದಾಲ್ ಕಾರ್ಖಾನೆಯನ್ನು ಮತ್ತೆ ಲಾಕ್​​ಡೌನ್ ಮಾಡಲ್ಲ: ಬಳ್ಳಾರಿ ಡಿಸಿ

By ಬಳ್ಳಾರಿ ಪ್ರತಿನಿಧಿ
|
Google Oneindia Kannada News

ಬಳ್ಳಾರಿ, ಜೂನ್ 22: ಲಾಕ್​​​ಡೌನ್ ಸಡಿಲಿಕೆಯಾದ ಹಿನ್ನೆಲೆ ಬಳ್ಳಾರಿ ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯನ್ನು ಮತ್ತೆ ಲಾಕ್​​ಡೌನ್ ಮಾಡಲು ಆಗುವುದಿಲ್ಲವೆಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ.

Recommended Video

Galwan Faceoff : ಭಾರತ ಸೇನೆಗೆ ಬಂತು ಸೂಪರ್ ಪವರ್ | Full power For IAF & Army | Oneindia Kannadda

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಜುಬಿಲಿಯಂಟ್ ಕಾರ್ಖಾನೆ ಸಣ್ಣ ಪ್ರಮಾಣದ ಉತ್ಪಾದನೆ ಹೊಂದಿದೆ. ಇದಲ್ಲದೆ, ಅದು ಕೇವಲ ಒಂದು ಸಾವಿರ ನೌಕರರನ್ನು ಮಾತ್ರ ಹೊಂದಿದೆ. ಹೀಗಾಗಿ ಕಾರ್ಖಾನೆಯನ್ನು ಲಾಕ್​​ಡೌನ್ ಮಾಡಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯನ್ನು ಸೊನ್ನೆಗೆ ತರಲಾಯಿತು ಎಂದರು.

ಬಳ್ಳಾರಿ: ಜಿಲ್ಲಾಧಿಕಾರಿ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಜಿಂದಾಲ್ಬಳ್ಳಾರಿ: ಜಿಲ್ಲಾಧಿಕಾರಿ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಜಿಂದಾಲ್

ಆದರೆ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ಸುಮಾರು 30 ಸಾವಿರ ನೌಕರರನ್ನು ಹೊಂದಿದೆ. ಮೇಲಾಗಿ ಉತ್ಪಾದನಾ ಚಟುವಟಿಕೆಯಲ್ಲಿ ಸದಾ ಸಕ್ರಿಯವಾಗಿರುವ ಈ ಕಾರ್ಖಾನೆಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಲಾಕ್​​ಡೌನ್ ಮಾಡಲು ಬರುವುದಿಲ್ಲ ಎಂದು ಹೇಳಿದರು.

Jindal Factory Will Not Lockdown Again: Ballary DC

ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯನ್ನು ಈಗ ದೊಡ್ಡ ಕಂಟೈನ್ಮೆಂಟ್ ವಲಯ ಆಗಿ ಘೋಷಿಸಲಾಗಿದೆ. ಹೊರಗಿನಿಂದ ನೌಕರರನ್ನು ಕರೆ ತರುವ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ ಎಂದರು.

ಬಳ್ಳಾರಿ; ಜಿಂದಾಲ್ ಕಾರ್ಖಾನೆಗೆ ಸುತ್ತಲಿನ ಗ್ರಾಮಗಳ ಸಂಪರ್ಕ ಕಡಿತಬಳ್ಳಾರಿ; ಜಿಂದಾಲ್ ಕಾರ್ಖಾನೆಗೆ ಸುತ್ತಲಿನ ಗ್ರಾಮಗಳ ಸಂಪರ್ಕ ಕಡಿತ

Jindal Factory Will Not Lockdown Again: Ballary DC

ಅನೇಕ ರೀತಿಯ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಅಂದಾಜು 898 ಜನರನ್ನು ಈಗಾಗಲೇ ಜೆ.ಎಸ್.ಡಬ್ಲ್ಯು ಗುರುತಿಸಿ, ಅವರಿಗೆ ವೇತನ ಸಹಿತ ರಜೆ ನೀಡಿ ಮನೆಗೆ ಕಳಿಸಿಕೊಟ್ಟಿದೆ. ಜೊತೆಗೆ ಸುಮಾರು 1,086 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ 246 ಮಂದಿಗೆ ಪಾಸಿಟಿವ್ ಬಂದಿದೆ. ಉಳಿದ 300 ಮಂದಿಯ ತಪಾಸಣೆ ವರದಿ ಇಂದು ಅಥವಾ ನಾಳೆ ಬರಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಮಾಹಿತಿ ನೀಡಿದರು.

English summary
District Collector SS Nakul said that the steel factory of Jindal Group of Ballary district will not be locked down again after the lockdown Relaxation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X