• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿ: 2 ಸಾವಿರ ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ

|

ಬಳ್ಳಾರಿ, ಆ.14: ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇಂಥ ಸಂದರ್ಭದಲ್ಲಿ ಜಿಲ್ಲೆಯ ನಾಗರಿಕರ ಹಿತದೃಷ್ಟಿಯಿಂದ ಜಿಂದಾಲ್ ಕಾರಖಾನೆಯು ಬಳ್ಳಾರಿಯಲ್ಲಿ 2 ಸಾವಿರ ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಅನುಕೂಲ ಮಾಡಿಕೊಡಬೇಕು ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಅವರು ಮನವಿ ಮಾಡಿದ್ದಾರೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಜಿಂದಾಲ್‍ನಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿನೋದ ನೋವೆಲ್ ಅವರನ್ನು ಗುರುವಾರ ಬೆಳಗ್ಗೆ ಭೇಟಿಯಾಗಿ ಜಿಲ್ಲೆಯ ಕೊರೊನಾ ಸ್ಥಿತಿಗತಿ, ತಾವು ಈ ಸಂದರ್ಭದಲ್ಲಿ ನೆರವಿಗೆ ಧಾವಿಸಬೇಕಾದ ಅಗತ್ಯತೆ ಕುರಿತು ಶಾಸಕ ಸೋಮಶೇಖರರೆಡ್ಡಿ ಅವರು ಎಳೆಎಳೆಯಾಗಿ ವಿವರಿಸಿದರು.

ಕೊರೊನಾ ಸೋಂಕು ಗೆದ್ದ ಬಳ್ಳಾರಿಯ ಶತಾಯುಷಿ ಅಜ್ಜಿ

ಈ ಭಯನಾತ್ಮಕ ಪರಿಸ್ಥಿತಿಯಲ್ಲಿ ಕೊರೊನಾ ಸೊಂಕಿತರಿಗೆ ಬೆಡ್‍ಗಳ ವ್ಯವಸ್ಥೆ ಮಾಡುವುದೇ ಅತ್ಯಂತ ದೊಡ್ಡ ಸವಾಲಾಗಿದೆ ಎಂಬುದನ್ನು ಸಹ ಶಾಸಕ ಸೋಮಶೇಖರರೆಡ್ಡಿ ಅವರು ವಿವರಿಸಿದರು.

ಶಾಸಕರ ಮನವಿಗೆ ಅತ್ಯಂತ ಸಕರಾತ್ಮಕವಾಗಿ ಸ್ಪಂದಿಸಿರುವ ಜಿಂದಾಲ್ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕ್ರೀಡಾ ಕಾಂಪ್ಲೆಕ್ಸ್‍ನಲ್ಲಿ ಬೆಡ್‍ಗಳ ವ್ಯವಸ್ಥೆ ಮಾಡಿ ಕೋವಿಡ್‍ಕೇರ್ ಸೆಂಟರ್ ಸ್ಥಾಪಿಸುವುದಕ್ಕೆ ಅಗತ್ಯ ಸಹಕಾರ ಮಾಡುವುದಾಗಿ ತಿಳಿಸಿದೆ.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ‌‌ ದಮ್ಮೂರು ಶೇಖರ್, ರಾಯಚೂರು ಬಳ್ಳಾರಿ ಹಾಗೂ ಕೊಪ್ಪಳ ಹಾಲು ಒಕ್ಕೂಟದ ನಿರ್ದೇಶಕರಾದ ವೀರಶೇಖರ್ ರೆಡ್ಡಿ ಹಾಗೂ ಜಿಂದಾಲ್ ಅಧಿಕಾರಿಗಳು ಇದ್ದರು.

English summary
Jindal company has agreed to build 2000 bed Covid Care center in Ballari said MLA Somashekar Reddy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X