ಕಮ್ಮರಚೇಡು: ಮನೆಯ ತಡೆಗೋಡೆ ಕೆಡವಿದ ಅಧಿಕಾರಿಗಳು: ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರು
ನೀರಿನ ಟ್ಯಾಂಕ್ ಕಟ್ಟಲು ನಿರ್ಮಾಣ ಹಂತದ ಮನೆಯ ತಡೆಗೋಡೆ ಕೆಡವಿದ್ದರಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ನಡೆದಿದೆ.
ಬಳ್ಳಾರಿ, ಮಾರ್ಚ್, 15: ನೀರಿನ ಟ್ಯಾಂಕ್ ಕಟ್ಟಲು ನಿರ್ಮಾಣ ಹಂತದ ಮನೆಯ ತಡೆಗೋಡೆ ಕೆಡವಿದ್ದರಿಂದ ಮನನೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ನಡೆದಿದೆ.
ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರಾಜೇಶ್, ಶೇಖಪ್ಪ, ಸುಶೀಲಮ್ಮ ಮತ್ತು ಜ್ಯೋತಿ ಎಂಬುವರು ಇದೀಗ ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಮ್ಮರಚೇಡು ಗ್ರಾಮ ಠಾಣಾ ಜಮೀನಿನಲ್ಲಿ ಇದ್ದ ನೀರಿನ ಟ್ಯಾಂಕ್ ಸೋರುತ್ತಿತ್ತು. ಆದ್ದರಿಂದ ಹೊಸದಾಗಿ ಟ್ಯಾಂಕ್ ಕಟ್ಟಲು ಹಳೆಯದನ್ನು ಕೆಡವಲಾಗಿತ್ತು. ಅದೇ ಜಾಗದಲ್ಲಿ ರಾಜೇಶ್, ಶೇಖಪ್ಪ ಅವರು ಮನೆಗೆ ನಿರ್ಮಿಸಿದ್ದ ತಡೆಗೋಡೆಯನ್ನು ಕೂಡ ಕೆಡವಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ನಾಲ್ವರು
ತಹಶೀಲ್ದಾರ್ ಬಲರಾಂ ಕಟ್ಟಿಮನಿ ಸ್ಥಳಕ್ಕೆ ತೆರಳಿ, ತಡೆಗೋಡೆ ಕೆಡವಲು ಹೇಳಿದ್ದರು. ಮನೆ ಮಾಲೀಕರು ಅವರ ಮಾತು ಕೇಳದ್ದಿದ್ದರಿಂದ ಅಧಿಕಾರಿಗಳೇ ಪೊಲೀಸರ ಸಹಾಯದಿಂದ ಗೋಡೆಯನ್ನು ಕೆಡವಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇದೀಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಸಂಬಂಧ ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ಇನ್ಸ್‌ಪೆಕ್ಟರ್ ನಿರಂಜನ್ ಕುಮಾರ್ ತಿಳಿಸಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777












Click it and Unblock the Notifications