'ನಾಡೋಜ' ಗೌರವಕ್ಕೆ ಪಂಡಿತ್ ರಾಜೀವ್ ತಾರಾನಾಥರು ಆಯ್ಕೆ
ಹೊಸಪೇಟೆ, ಮಾರ್ಚ್ 08: ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಈ ಬಾರಿಯ ನಾಡೋಜ ಗೌರವ ನೀಡಿ ಸನ್ಮಾನಿಸಲಾಗುವುದು ಎಂದು ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪ್ರಕಟಿಸಿದೆ.
ಕನ್ನಡ ವಿವಿ ಕುಲಪತಿ ಮಲ್ಲಿಕಾ ಘಂಟಿ ಅವರು ಸುದ್ದಿಗೋಷ್ಠಿ ನಡೆಸಿ, ಮಾರ್ಚ್ 10ರಂದು ವಿವಿ ಆವರಣದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ರಾಜೀವ್ ತಾರಾನಾಥ್ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ನಾಡೋಜ ಪ್ರಶಸ್ತಿ(ಗೌರವ ಡಿ. ಲಿಟ್ ಪದವಿಗೆ ಸಮ) ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.

ಜತೆಗೆ 91 ಪಿಎಚ್ ಡಿ ಹಾಗೂ 299 ವಿದ್ಯಾರ್ಥಿಗಳಿಗೆ ಪದವಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇಂಗ್ಲಿಷ್ ಪ್ರಾಧ್ಯಾಪಕ, ಅನುವಾದಕ, ಸರೋದ್ ವಾದಕರಾಗಿರುವ ರಾಜೀವ್ ತಾರಾನಾಥ್ ಅವರು ಸದ್ಯ ಮೈಸೂರಿನಲ್ಲಿ ನೆಲೆಸಿದ್ದಾರೆ. ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ.ಭಾರತವಲ್ಲದೆ ಆಸ್ಟ್ರೇಲಿಯಾ, ಯುರೋಪ್, ಯೆಮೆನ್, ಅಮೆರಿಕಾ, ಕೆನಡಾ ಮುಂತಾದ ವಿದೇಶಗಳಲ್ಲಿಯೂ ನಿರಂತರವಾಗಿ ಸಂಗೀತ ಕಾರ್ಯಕ್ರಮಗಳನ್ನು ನೀಡಿ ಅಪಾರ ಅಭಿಮಾನಿ ಬಳಗವನ್ನು ಗಳಿಸಿಕೊಂಡಿದ್ದಾರೆ. ಅನೇಕ ಪ್ರಖ್ಯಾತ ಚಲನಚಿತ್ರಗಳಿಗೂ ಸಂಗೀತ ನೀಡಿದ್ದಾರೆ.
ಕನ್ನಡದಲ್ಲಿ ಸಂಸ್ಕಾರ, ಪಲ್ಲವಿ, ಅನು ರೂಪ, ಶೃಂಗಾರಮಾಸ, ಪೇಪರ್ ಬೋಟ್ ಹಾಗೂ ಮಲಯಾಳಂನ ಕಾಂಚನಸೀತಾ ಮತ್ತು ಕಡಾವು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications