ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಸರ್ಕಾರ ಬಂದರೆ ಟಿಪ್ಪು ಜಯಂತಿ ರದ್ದು: ಯೋಗಿ

|
Google Oneindia Kannada News

ಬಳ್ಳಾರಿ, ಮೇ 9: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು, ಈ ಬಾರಿ ಅಧಿಕಾರ ಬಿಜೆಪಿಗೆ ಮರಳಿ ದಕ್ಕಿದರೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

ಬಳ್ಳಾರಿಯ ಹೊಸಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಯೋಗಿ ಆದಿತ್ಯನಾಥ್, ಒಂದು ವೇಳೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿ ಆಚರಣೆ ಮುಂದುವರಿಸುವುದಿಲ್ಲ ಎಂದು ಭರವಸೆ ನೀಡಿದರು.

'ಕಾಂಗ್ರೆಸ್ ಅಧಿಕಾರಕ್ಕೇರಿದರೆ ರಾಜ್ಯದಲ್ಲಿ ಜಿಹಾದಿ, ಗೂಂಡಾ ಕೇಂದ್ರ': ಯೋಗಿ'ಕಾಂಗ್ರೆಸ್ ಅಧಿಕಾರಕ್ಕೇರಿದರೆ ರಾಜ್ಯದಲ್ಲಿ ಜಿಹಾದಿ, ಗೂಂಡಾ ಕೇಂದ್ರ': ಯೋಗಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹನುಮಾನ್ ಜಯಂತಿ ಮತ್ತು ಗಣೇಶ ಜಯಂತಿಯನ್ನು ಆಚರಿಸುತ್ತಿಲ್ಲ. ಆದರೆ, ಟಿಪ್ಪು ಜಯಂತಿ ಆಚರಣೆಗೆ ಉತ್ಸಾಹ ತೋರಿಸುತ್ತಿದೆ ಎಂದು ಆರೋಪಿಸಿದರು.

karnataka assembly elections 2018: yogi adityanath bjp comes to power will repeals tippu jayanti

ಇಲ್ಲಿನ ವಿಜಯನಗರ ಸಾಮ್ರಾಜ್ಯ ದೇಶದ ಇತಿಹಾಸದಲ್ಲಿ ಖ್ಯಾತಿ ಪಡೆದಿದೆ. ಶ್ರೀಕೃಷ್ಣದೇವರಾಯನ ಆಡಳಿತ ಅವಧಿ ಸುವರ್ಣಯುಗವಾಗಿತ್ತು. ಅದು ಅನುಕರಣೀಯ, ಸ್ಮರಣೀಯ ಆಡಳಿತ ನೀಡಿದರು. ಆ ಆಡಳಿತ ಮತ್ತೆ ಮರುಕಳಿಸಬೇಕಿದೆ ಎಂದರು.

English summary
Karnataka assembly elections 2018: Uttar Pradesh chief minister Yogi Adityanath said that, Tippu Jayanti, which is being celebrated by congress government will be repealed if the bjp came to power in Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X