ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿನಿಂದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭ; ಸಂಪುಟ ಪುನಾರಚನೆ ಚರ್ಚೆ

|
Google Oneindia Kannada News

ವಿಜಯನಗರ, ಏಪ್ರಿಲ್ 16: ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಆಡಳಿತರೂಢ ಬಿಜೆಪಿ ತಯಾರಿ ಆರಂಭಿಸಿದೆ. ಇದಕ್ಕೆ ಪೂರಕವಾಗಿ ಇಂದಿನಿಂದ ಎರಡು ದಿನ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಪಕ್ಷದ ಸಂಘಟನೆ ಬಲಪಡಿಸುವ ಹಿನ್ನೆಲೆಯಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ (ಏ.16 ಮತ್ತು ಏ.17) ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚಿಂತನ-ಮಂಥನ ನಡೆಯಲಿದೆ. ಶುಕ್ರವಾರವಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆ.ಎಸ್. ಈಶ್ವರಪ್ಪ ರಾಜ್ಯ ಕಾರ್ಯಕಾರಿಣಿ ಸಭೆಗೆ ಗೈರಾಗುವ ಸಾಧ್ಯತೆ ಇದೆ.

ಬಿಜೆಪಿ ಕಾರ್ಯಕಾರಿಣಿ ಸಭೆ ಹಿಂದಿನ ರಾತ್ರಿಯೇ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ; ಏಕೆ?ಬಿಜೆಪಿ ಕಾರ್ಯಕಾರಿಣಿ ಸಭೆ ಹಿಂದಿನ ರಾತ್ರಿಯೇ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ; ಏಕೆ?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಬಲವರ್ಧನೆಗೆ ಅವಶ್ಯಕ ಇರುವ ಬದಲಾವಣೆಗಳ ಕುರಿತು ಚರ್ಚೆಗಳು ನಡೆಯಲಿವೆ. ಜತೆಗೆ ಸಾಕಷ್ಟು ಕುತೂಹಲ ಮೂಡಿಸಿರುವ ಸಂಪುಟ ಪುನಾರಚನೆ ಕಸರತ್ತು ಹಾಗೂ ನಿಗಮ ಮಂಡಳಿಗಳ ನೇಮಕ ಕುರಿತಂತೆಯೂ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.

Karnataka BJP Executive Meeting Starts In Hospet From Today; Discussion On Cabinet Reshuffle

ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಜೆ.ಪಿ. ನಡ್ಡಾ ಇಂದು ಹುಬ್ಬಳ್ಳಿಗೆ ಆಗಮಿಸಿ, ಅಲ್ಲಿಂದ ಹೊಸಪೇಟೆಗೆ ತೆರಳಲಿದ್ದಾರೆ. ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್‌, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಸೇರದಂತೆ ಸಚಿವರು, ಪ್ರಮುಖ ಮುಖಂಡರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ.

ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ಶನಿವಾರ (ಏ.16) ಹೊಸಪೇಟೆಯ ಆಂಜನೇಯ ಭಟ್ಟರಹಳ್ಳಿ ಸಮೀಪ ನಡೆಯಲಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಕರ್ನಾಟಕದ ಉಸ್ತುವಾರಿಗಳು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪ್ರದರ್ಶನೀಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Karnataka BJP Executive Meeting Starts In Hospet From Today; Discussion On Cabinet Reshuffle


ಶನಿವಾರ ಮಧ್ಯಾಹ್ನ 2.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯದ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದ ಉಸ್ತುವಾರಿಗಳು ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ ಮತ್ತು ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ.

Recommended Video

Finch ಯಾವ ಯಾವ ತಂಡ ಸುತ್ತಿ ಬಂದಿದ್ದಾರೆ ಗೊತ್ತಾ | Oneindia Kannada

English summary
Karnataka BJP Executive meeting will be held from today (April 16 and 17) at Hospet in Vijayanagara district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X