Sandur By Election Results 2024: ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು!

Karnataka By Election Results 2024: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು, ಇಂದು (ನವೆಂಬರ್ 23) ಮತ ಎಣಿಕೆ ನಡೆಯುತ್ತಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

Karnataka By Election Results 2024 Congress candidate Annapoorna win in Sandur

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಇ.ಅನ್ನಪೂರ್ಣ 93,051 ಮತಗಳನ್ನು ಪಡೆಯುವ ಮೂಲಕ 9,568 ಮತಗಳ ಅಂತದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು 83,483 ಮತಗಳನಳನ್ನು ಪಡೆಯುವ ಮೂಲಕ ಸೋಲನುಭವಿಸಿದ್ದಾರೆ. ಇ. ಅನ್ನಪೂರ್ಣ ಗೆಲುವು ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಕಾಂಗ್ರೆಸ್ ಅಭ್ಯರ್ಥಿಯು ಸಂಡೂರು ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಮೊದಲ ಮಹಿಳಾ ಅಭ್ಯರ್ಥಿಯಾಗಿದ್ದಾರೆ. ಅಂಚೆ ಮತ ಎಣಿಕೆಯಿಂದ ಇವಿಎಂ ಮತ ಎಣಿಕೆಯ ಮೂರು ಸುತ್ತುಗಳಲ್ಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ಮಧ್ಯದಲ್ಲಿ ಹಿನ್ನಡೆ ಅನುಭವಿಸಿದರು. ಆದರೆ, ಇದೀಗ ಅಂತಿಮವಾಗಿ ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಹೇಳಿದ್ದೇನು?: ಮತ್ತೊಂದೆಡೆ ನೋಡುವುದಾದರೆ, ಸೋಲುಂಡಿರುವ ಬಿಜೆಪಿ ಅಭ್ಯರ್ಥಿ ‌ಬಂಗಾರು ಹನುಮಂತು ಪ್ರತಿಕ್ರಿಯಿಸಿದ್ದು, ಈ ಸೋಲಿನ ಹೊಣೆಯನ್ನು ನಾನು ಒತ್ತುಕೊಳ್ಳುತ್ತೇನೆ. ಯಾರ ಮೇಲೂ‌ ಇದನ್ನು ಹೊರಿಸುವುದಿಲ್ಲ. ಕಾಂಗ್ರೆಸ್ ‌ಹಣ ಬಲದಿಂದ‌‌ ಈ ಚುನಾವಣೆ ಗೆದ್ದಿದೆ. ಸ್ವತಃ ಸಿಎಂ ಸಿದ್ದರಾಮಯ್ಯ ಇಲ್ಲಿಯೇ ಠಿಕಾಣಿ ಹೂಡಿದ್ದರು. ಸಚಿವ ಶಿವರಾಜ ತಂಗಡಗಿ ಉಸ್ತುವಾರಿ ‌ಹೊತ್ತಿದ್ದ ಪ್ರದೇಶ ಸೇರಿ ಸಚಿವರು ಇದ್ದ ಪ್ರದೇಶದಲ್ಲಿ ನಮಗೆ ಹಿನ್ನಡೆಯಾಗಿದೆ ಎಂದು ಹೇಳಿದರು.

2028ರಲ್ಲಿ ಸಂಡೂರಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ನಾನು ಅಲ್ಲಿಯೇ ಮನೆ ಮಾಡಿ ಜನರ ಜೊತೆ ಇರುತ್ತೇನೆ. 2028ರಲ್ಲಿ ಯಾರೇ ಅಭ್ಯರ್ಥಿಯಾಗಲಿ‌ ಒಗ್ಗಟ್ಟಿನಿಂದ ಕಾಂಗ್ರಸ್‌ ಸೋಲಿಸುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+