Karnataka election 2023: ಬಳ್ಳಾರಿ ಜಿಲ್ಲೆಯ ಮತಗಟ್ಟೆಗಳಲ್ಲಿ ಸಿದ್ಧತೆ ಹೇಗಿದೆ?
ಬಳ್ಳಾರಿ, ಮೇ, 09: ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, ಈಗಾಗಲೇ ಬಳ್ಳಾರಿ ಜಿಲ್ಲಾಡಳಿತ ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನ ಮಾಡಿಕೊಳ್ಳುತ್ತಿದೆ. ಮತದಾನದ ಪ್ರಕ್ರಿಯೆಗೆ ಮಸ್ಟರಿಂಗ್ ಕಾರ್ಯ ಭರದಿಂದ ಸಾಗಿದ್ದು, ಇವಿಎಂ ಮಷಿನ್‌ಗಳನ್ನು ಚುನಾವಣೆಗೆ ನಿಯೋಜಿಸಿದ ಸಿಬ್ಬಂದಿಗಳು ಬಸ್‌ಗಳ ಮೂಲಕ ಮತದಾನದ ಕೇಂದ್ರಗಳಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ.
ಜಿಲ್ಲೆಯ ಗ್ರಾಮೀಣ ವ್ಯಾಪ್ತಿಯಲ್ಲಿ 676 ಮತಗಟ್ಟೆ ಕೇಂದ್ರ, ನಗರ, ಪಟ್ಟಣ ಪ್ರದೇಶದಲ್ಲಿ 515 ಮತಗಟ್ಟೆ ಕೇಂದ್ರಗಳು ಸೇರಿ ಒಟ್ಟು 1,222 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಕಂಪ್ಲಿ-240, ಸಿರಗುಪ್ಪ-227, ಬಳ್ಳಾರಿ ಗ್ರಾಮೀಣ-242, ಬಳ್ಳಾರಿ ನಗರ-262 ಹಾಗೂ ಸಂಡೂರು ಕ್ಷೇತ್ರದಲ್ಲಿ 251 ಮತಗಟ್ಟೆಗಳಿವೆ. ಜಿಲ್ಲೆಯ 5 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 295 ಸೂಕ್ಷ್ಮ ಹಾಗೂ 73 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ 1,222 ಮತಗಟ್ಟೆಗಳಿಗೆ 2,445 (ಬ್ಯಾಲೆಟ್ ಯುನಿಟ್), 1,716 (ಕಂಟ್ರೋಲ್ ಯುನಿಟ್) ಮತ್ತು 1,857 (ವಿ.ವಿ.ಪ್ಯಾಟ್)ಗಳನ್ನು ಬಳಸಲಾಗುತ್ತಿದೆ. 5,815 ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.
ಜಿಲ್ಲೆಯಲ್ಲಿ 5,67,319 ಪುರುಷ ಮತದಾರರು ಮತ್ತು 5,84,920 ಮಹಿಳಾ ಮತದಾರರು, 172 ತೃತೀಯ ಲಿಂಗಿ ಮತದಾರರು ಸೇರಿ ಒಟ್ಟು 11,52,411 ಮತದಾರರು ಮತದಾನದ ಹಕ್ಕು ಚಲಾಯಿಸಲಿದ್ದಾರೆ ಇನ್ನೂ ಎಲ್ಲಾ ಮತಗಟ್ಟೆಗಳಲ್ಲಿ ಫ್ಯಾನ್, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲದ ವ್ಯವಸ್ಥೆಯನ್ನು ಕೂಡ ಕಲ್ಪಿಸಲಾಗಿದೆ.
ಹುಬ್ಬಳ್ಳಿ, ಮೇ, 09: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ರಾಜ್ಯದ ಹಲವೆಡೆ ಐಟಿ ಅಧಿಕಾರಿಗಳ ದಾಳಿಯು ಮುಂದುವರೆದಿದ್ದು, ಮತ್ತೊಂದೆ ಚುನಾವಣೆ ಅಧಿಕಾರಿಗಳು ಕೂಡ ದಾಳಿ ಮುಂದುವರೆಸಿದ್ದಾರೆ. ಅದೇ ರೀತಿ ಸೋಮವಾರ (ಮೇ 08) ತಡರಾತ್ರಿ ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದ ಮನೆ ಮೇಲೆ 12 ಜನ ಚುನಾವಣಾಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ.
ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಕಾಂಗ್ರೆಸ್ ನಾಯಕಿ ದೇವಕಿ ನಿವಾಸದಲ್ಲಿ ಮೂರು ಗಂಟೆಗಳ ತಪಾಸಣೆ ನಡೆಸಿದ ಚುನಾವಣಾ ಅಧಿಕಾರಿಗಳು, ಏನು ಸಿಗದೆ ಬರಿಗೈಲ್ಲಿ ವಾಪಾಸ್ ಹೋಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇವಕಿ ಅವರು ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆಯ ಆಪ್ತೆ ಎಂದು ತಿಳಿದುಬಂದಿದೆ.
ಧಾರವಾಡ ಜಿಲ್ಲೆಯ ಮತಗಟ್ಟೆಗಳ ವಿವರ
ಇನ್ನು ವಿದ್ಯಾಕಾಶಿ ಧಾರವಾಡ ಸಜ್ಜಾಗಿದ್ದು, ನಾಳೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಜಿಲ್ಲೆಯ 7 ಕ್ಷೇತ್ರಗಳಲ್ಲಿ ಮಸ್ಟರಿಂಗ್ ಆರಂಭವಾಗಿದೆ. ಧಾರವಾಡ ಬಾಸೆಲ್ ಮಶಿನ್ ಕೇಂದ್ರದಿಂದ ಇವಿಎಂ ಯಂತ್ರಗಳ ಮಸ್ಟರಿಂಗ್ ಮಾಡಲಾಗುತ್ತಿದೆ. ಚುನಾವಣಾ ಸಿಬ್ಬಂದಿ ತಮಗೆ ನಿಗದಿಪಡಿಸಿದ ಮತಗಟ್ಟೆಗಳಿಗೆ ತೆರಳುತ್ತಿದ್ದಾರೆ.
ಧಾರವಾಡದ ಬಾಸೆಲ್ ಮಿಶನ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗ್ಗಡೆ ಅವರು ಚುನಾವಣಾ ಕಾರ್ಯವನ್ನು ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 15.20 ಲಕ್ಷ ಮತಗಳಿವೆ. ಅದರ ಪ್ರಕಾರ 1,642 ಮತಗಟ್ಟೆಗಳನ್ನು ಸಿದ್ಧಪಡಿಸಿ ತಯಾರಿ ಮಾಡಿಕೊಳ್ಳಲಾಗಿದೆ.
ಮತಗಟ್ಟೆಗಳ ಸುತ್ತ ಮೂಲಭೂತ ಸೌಕರ್ಯದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಜಿಲ್ಲೆಗೆ ಕೇಂದ್ರದ 22 ಭದ್ರತಾ ಪಡೆಯ ತುಕಡಿಗಳು ಬಂದಿವೆ. ಇದರೊಂದಿಗೆ 2 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ ಎಂದರು.
ಒಟ್ಟಾರೆ ಧಾರವಾಡದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಾಳೆ ಮತದಾನ ನಡೆದು, ಸಂಜೆ ಎಲ್ಲಾ ಅಭ್ಯರ್ಥಿಗಳ ಹಣೆಬರಹ ಸ್ಟ್ರಾಂಗ್ ರೂಮ್ ಸೇರಲಿದೆ.
ವಿಶೇಷ ಮತಗಟ್ಟೆಗಳ ಸ್ಥಾಪನೆ
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ಜರುಗುವ ಮತದಾನ ಹೆಚ್ಚಳಕ್ಕೆ ಭಾರತ ಚುನಾವಣಾ ಆಯೋಗದ ನಿರ್ದೇಶನದಲ್ಲಿ ಧಾರವಾಡ ಜಿಲ್ಲಾ ಆಡಳಿತವು ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಲ್ಲಿ ಆಯ್ದ ಮತಗಟ್ಟೆಗಳನ್ನು ವಿಶೇಷವಾಗಿ ರೂಪಿಸಲು ಕ್ರಮ ಕೈಗೊಂಡಿದೆ.
ಜಿಲ್ಲೆಯಲ್ಲಿ ಮಹಿಳಾ ಸ್ನೇಹಿಯಾದ 14 ಸಖಿ, ವಿಕಲಚೇತನರನ್ನು ಪ್ರೇರೆಪಿಸುವ 7 ಪಿಡಬ್ಲ್ಯೂಡಿ ಮತಗಟ್ಟೆ, ಯುವಕರನ್ನು ಆಕರ್ಷಿಸುವ 7 ಯುವ ಮತಗಟ್ಟೆ ಮತ್ತು ಸಾಂಪ್ರದಾಯಿಕತೆಯನ್ನು ಸಾರುವ 6 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ವಿವರಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications