ಬಳ್ಳಾರಿ ಜನರಿಗೆ ಏನು ಹೇಳಲು ಹೊರಟಿದ್ದೀರಿ?; ಕಾಂಗ್ರೆಸ್ ಮುಖಂಡರಿಗೆ ಪ್ರಶ್ನೆ
ಬಳ್ಳಾರಿ, ಸೆಪ್ಟೆಂಬರ್ 21: ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ವಿಭಾಗಿಸಿ ಹೊಸದಾಗಿ ವಿಜಯನಗರ ಜಿಲ್ಲೆ ರಚನೆಗೆ ಮುಂದಾಗಿರುವ ನಡೆಗೆ ಜಿಲ್ಲೆಯ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ರಾಜ್ಯ ಮುಖಂಡರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯನವರು ಅನರ್ಹ ಶಾಸಕ ಆನಂದ್ ಸಿಂಗ್ ನಿಯೋಗದಲ್ಲಿ ಭಾಗವಹಿದ್ದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.
ನೀವು ನಿಯೋಗದಲ್ಲಿ ಪಾಲ್ಗೊಳ್ಳುವ ಮೂಲಕ ಜನರಿಗೆ ಏನು ಸಂದೇಶವನ್ನು ನೀಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
"ಅಖಂಡ ಬಳ್ಳಾರಿ ಜಿಲ್ಲೆ ನಿಮಗೆ ಬೇಡವೇ... ಆ ನಿಯೋಗದಲ್ಲಿ ಭಾಗವಹಿಸುವ ಮೊದಲು ಸ್ಥಳೀಯ ಮುಖಂಡರ ಜೊತೆ ಪೂರ್ವಭಾವಿ ಸಭೆಯನ್ನು ನಡೆಸಿ ಅಭಿಪ್ರಾಯಗಳನ್ನು ಪಡೆದಿದ್ದಾರಾ? ದಯವಿಟ್ಟು ಬಳ್ಳಾರಿ ಜಿಲ್ಲೆಯ ಜನತೆಗೆ ಸ್ಪಷ್ಟನೆ ಕೊಡಿ" ಎಂದು ಕೇಳಿಕೊಂಡಿದ್ದಾರೆ.

"ಯಾವ ಕಾರಣಕ್ಕೆ ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಬೇಕು ಎನ್ನುತ್ತೀರಿ? ಅದಕ್ಕೆ ನಿಮ್ಮ ಸಮರ್ಥನೆ ಏನು ದಯವಿಟ್ಟು ಬಳ್ಳಾರಿ ಜಿಲ್ಲೆಯ ಜನತೆಗೆ ತಿಳಿಸಿ. ನಿಮ್ಮ ಉತ್ತರದ ನಿರೀಕ್ಷೆಯಲ್ಲಿದ್ದೇವೆ" ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬಳ್ಳಾರಿ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಕುರುಗೋಡು ಚನ್ನಬಸವರಾಜ್ ಗೌಡರು ಪ್ರಶ್ನಿಸಿದ್ದಾರೆ.












Click it and Unblock the Notifications