ಮೂವರು ಸಾಧಕರಿಗೆ ಹಂಪಿ ವಿವಿಯ ನಾಡೋಜ ಗೌರವ
ಬಳ್ಳಾರಿ, ಮಾ.3 : ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ನಾಡೋಜ ಗೌರವ ಪದವಿಗೆ ಡಾ.ಪಿ.ಎಸ್.ಶಂಕರ್, ಪ್ರೊ.ಎಂ.ಎಚ್.ಕೃಷ್ಣಯ್ಯ ಹಾಗೂ ಎಸ್.ಆರ್.ರಾಮಸ್ವಾಮಿ ಅವರು ಆಯ್ಕೆಯಾಗಿದ್ದಾರೆ. ಮಾರ್ಚ್ 6ರಂದು ನಾಡೋಜ ಪದವಿ ಪ್ರದಾನ ಮಾಡಲಾಗುತ್ತದೆ.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಹಿ.ಚಿ. ಬೋರಲಿಂಗಯ್ಯ ಅವರು ಈ ಕುರಿತು ಮಾಹಿತಿ ನೀಡಿದರು. ಕಲಬುರ್ಗಿಯ ವೈದ್ಯ ಸಾಹಿತಿ ಡಾ.ಪಿ.ಎಸ್. ಶಂಕರ್, ಸಾಹಿತಿ ಹಾಗೂ ಕಲಾ ವಿಮರ್ಶಕ ಪ್ರೊ.ಎಂ.ಎಚ್. ಕೃಷ್ಣಯ್ಯ, ಸಾಹಿತಿ ಮತ್ತು ಪತ್ರಕರ್ತ ಎಸ್.ಆರ್. ರಾಮಸ್ವಾಮಿ ಅವರಿಗೆ ನಾಡೋಜ ಪದವಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಮಾರ್ಚ್ 6ರಂದು ಸಂಜೆ ವಿಶ್ವವಿದ್ಯಾಲಯದ 'ನವರಂಗ' ಬಯಲು ರಂಗಮಂದಿರದಲ್ಲಿ ನಡೆಯಲಿರುವ 23ನೇ ಘಟಿಕೋತ್ಸವ (ನುಡಿಹಬ್ಬ) ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನಾಡೋಜ ಗೌರವವನ್ನು ಪ್ರದಾನ ಮಾಡಲಿದ್ದಾರೆ. [ನಾಡೋಜ ದರೋಜಿ ಈರಮ್ಮ ಅಸ್ತಂಗತ]
23ನೇ ಘಟಿಕೋತ್ಸವ ಸಮಾರಂಭದಲ್ಲಿ 56 ಪಿಎಚ್ಡಿ, 62 ಎಂ.ಫಿಲ್, 907 ಸ್ನಾತಕೋತ್ತರ, 381 ಪದವಿ ಸೇರಿದಂತೆ ಒಟ್ಟು 1,742 ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರೊ ಹಿ.ಚಿ. ಬೋರಲಿಂಗಯ್ಯ ಅವರು ತಿಳಿಸಿದರು.
ಅಂಕಣಕಾರ ಮತ್ತು ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎಚ್.ಎಸ್.ಶಿವಪ್ರಕಾಶ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
-
New Airports: ಬಳ್ಳಾರಿ, ವಿಜಯನಗರ, ಕೊಪ್ಪಳದ ಜನರಿಗಾಗಿ ಹೊಸ ವಿಮಾನ ನಿಲ್ದಾಣ; ಎಂಬಿ ಪಾಟೀಲ್ ಬಿಗ್ ಅಪ್ಡೇಟ್ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications