ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಟ್ಟೂರು ಗುರುಬಸವೇಶ್ವರ ಸ್ವಾಮಿ ಜಾತ್ರೆ ರದ್ದು

|
Google Oneindia Kannada News

ಬಳ್ಳಾರಿ, ಡಿಸೆಂಬರ್ 25: ರೂಪಾಂತರಗೊಂಡ ಹೊಸ ಕೋವಿಡ್ ವೈರಸ್ ಸೋಂಕು ರಾಜ್ಯದಲ್ಲಿ ಹರಡದಂತೆ ತಡೆಗಟ್ಟಬೇಕಿದೆ. ಆದ್ದರಿಂದ, ಹೆಚ್ಚಿನ ಭಕ್ತರು ಸೇರುವ ರಥೋತ್ಸವವನ್ನು ನಿಷೇಧಿಸಿ ಬಳ್ಳಾರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಕೊಟ್ಟೂರಿನ ಗುರುಬಸವೇಶ್ವರ ಸ್ವಾಮಿ ದೇವಾಲಯ ಹಾಗೂ ಮದಲಘಟ್ಟ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯಗಳ ಕಾರ್ತಿಕೋತ್ಸವ ಕಾರ್ಯಕ್ರಮ ಹಾಗೂ ಏಕ ಕಾಲದಲ್ಲಿ ಹೆಚ್ಚು ಜನ ಸೇರುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಮೈಸೂರು: ಕೊರೊನಾ ಕಾರಣದಿಂದ ಸುತ್ತೂರು ಜಾತ್ರೆ ರದ್ದುಮೈಸೂರು: ಕೊರೊನಾ ಕಾರಣದಿಂದ ಸುತ್ತೂರು ಜಾತ್ರೆ ರದ್ದು

ಡಿಸೆಂಬರ್ 28ರಂದು ನಡೆಯಬೇಕಿದ್ದ ಕೊಟ್ಟೂರಿನ ಶ್ರೀ ಗುರುಬಸವೇಶ್ವರ ಸ್ವಾಮಿ ದೇವಾಲಯದ ಬೆಳ್ಳಿ ರಥೋತ್ಸವ ಮತ್ತು 2021ರ ಜನವರಿ 2 ಮತ್ತು 3ರಂದು ನಡೆಯಲಿದ್ದ ಮದಲಘಟ್ಟ ಗ್ರಾಮದ ಆಂಜನೇಯ ಸ್ವಾಮಿ ರಥೋತ್ಸವ ರದ್ದಾಗಿದೆ.

ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆ ರದ್ದುಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆ ರದ್ದು

Kotturu Guru Basaveshwara Temple Jatre Cancelled

ಎರಡೂ ರಥೋತ್ಸವಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸುತ್ತಿದ್ದರು. ಏಕಕಾಲದಲ್ಲಿ ಹೆಚ್ಚು ಜನರು ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವವಾಲಯದಲ್ಲಿ ಧಾರ್ಮಿಕ ಸಂಪ್ರದಾಯದಂತೆ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗಿದೆ.

ಬ್ರಿಟನ್‌ನಿಂದ ಬೆಳಗಾವಿಗೆ ಆಗಮಿಸಿದ್ದ ಮಹಿಳೆಯ ಕೋವಿಡ್ ವರದಿ ನೆಗೆಟಿವ್ಬ್ರಿಟನ್‌ನಿಂದ ಬೆಳಗಾವಿಗೆ ಆಗಮಿಸಿದ್ದ ಮಹಿಳೆಯ ಕೋವಿಡ್ ವರದಿ ನೆಗೆಟಿವ್

ಗುರುವಾರದ ಮಾಹಿತಿಯಂತೆ ಬಳ್ಳಾರಿಯಲ್ಲಿ 28 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13,648. ಸಕ್ರಿಯ ಪ್ರಕರಣಗಳ ಸಂಖ್ಯೆ 31.

English summary
Ballari district administration banned Kotturu Guru Basaveshwara temple jatre due to COVID 19 pandemic. Jatre scheduled on January 2 and 3rd 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X