ಕೃಷ್ಣದೇವರಾಯ ವಿವಿಯಿಂದ ಅಣ್ಣಾ ಹಜಾರೆಗೆ ಡಾಕ್ಟರೇಟ್
ಬಳ್ಳಾರಿ, ಜೂ. 20 : ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ಜೂ.21ರ ಶನಿವಾರ ನಡೆಯಲಿದೆ. ನಟ ಶಿವರಾಜ್ ಕುಮಾರ್, ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ, ವಿಜ್ಞಾನಿ ಯು.ಆರ್.ರಾವ್ ಸೇರಿದಂತೆ ಎಂಟು ಸಾಧಕರಿಗೆ ಈ ಬಾರಿ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.
ಜೂ.21ರ ಶನಿವಾರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ನಡೆಯಲಿದೆ. ಶಿವರಾಜ್ ಕುಮಾರ್, ಪ್ರೊ.ಯು.ವಿ.ರಾವ್, ಅಣ್ಣಾ ಹಜಾರೆ, ಶ್ರೀ ಶ್ರೀ ಶ್ರೀ ಸಂಗನಬಸವ ಮಹಾಸ್ವಾಮಿ, ಡಾ ಎಸ್. ಸಿ. ಶರ್ಮ, ಜೇಕಬ್ ಕ್ರಾಸ್ಟಾ, ಶ್ರೀಮತಿ ಸುಭದ್ರಮ್ಮ ಮನ್ಸೂರ್ ಮತ್ತು ಸಿ. ಆರ್. ನಸೀರ್ ಅಹಮದ್ ಅವರಿಗೆ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಎಂಟು ಸಾಧಕರ ಸಂಕ್ಷಿಪ್ತ ಪರಿಚಯ ಇಲ್ಲಿದೆ.
ಅಣ್ಣಾ ಹಜಾರೆ ಸಂಕ್ಷಿಪ್ತ ಪರಿಚಯ : ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರಿಗೆ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ. 1963ರ ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಕ್ಷೇತ್ರದೊಂದಿಗಿನ ನಂಟಿಗೆ ಭಾರತದ ಗಡಿಯಿಂದ ಮುನ್ನುಡಿ ಬರೆದವರು ಅಣ್ಣಾ ಹಜಾರೆ.

ಸ್ವಾಮಿ ವಿವೇಕಾನಂದರ ಪುಸ್ತಕರಿಂದ ಸ್ಫೂರ್ತಿ ಪಡೆದ ಹಜಾರೆ ಅವರು, ಮನುಕುಲದ ಏಳಿಗೆಗೆ ತಮ್ಮನ್ನು ತಾವು ಅರ್ಪಿಸಿಕೊಂಡರು. ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ರಾಲೆಗನ್ ಸಿದ್ದಿ ಎಂಬ ಗ್ರಾಮದಲ್ಲಿ ಜಲ ನಿರ್ವಹಣೆ, ಸ್ಥಳೀಯ ಸಂಸ್ಥೆಗಳ ಸಬಲೀಕರಣ, ಮದ್ಯಪಾನ ವಿರೋಧಿ ಚಳುವಳಿಗಳು, ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಸ್ವಸಹಾಯ ಗುಂಪುಗಳ ಪೋಷಣೆ ಮತ್ತು ಇನ್ನಿತರ ಸಮಾಜ ಸುಧಾರಣೆಯ ಕ್ರಮಗಳನ್ನು ಕೈಗೊಂಡರು.
ರಾಲೆಗನ್ ಸಿದ್ದಿ ಎಂಬ ಪುಟ್ಟ ಗ್ರಾಮವನ್ನು ಸಾಬರಮತಿ ಆಶ್ರಮವನ್ನಾಗಿ ರೂಪಾಂತರಗೊಳಿಸಿ ಅಣ್ಣಾ ಹಜಾರೆ ಅವರು, ಇಂದು ಸಮಾಜ ಸೇವಕರು, ಸಂಶೋಧಕರು ಹಾಗೂ ರಾಜಕಾರಣಿಗಳು ಸಂದರ್ಶಿಸುವ ಮಾದರಿ ಪ್ರವಾಸಿ ಸ್ಥಳವನ್ನಾಗಿ ಅದನ್ನು ಪರಿವರ್ತಿಸಿದ್ದಾರೆ. ದೇಶದ ಅಭಿವೃದ್ಧಿಯಾಗಬೇಕಾದರೆ ಹಳ್ಳಿಯಿಂದ ದಿಲ್ಲಿಯ ತನಕ ಭ್ರಷ್ಟಾಚಾರ ತೊಲಗಬೇಕು ಎಂದು ದೇಶವ್ಯಾಪಿ ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ಆರಂಭಿಸಿದ ಅಣ್ಣಾ ಹಜಾರೆ ಅವರ ನಿರಂತೆ ಹೋರಾಟಲದ ಫಲವಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲಾಯಿತು.
2011ರಲ್ಲಿ ಜನಲೋಕಪಾಲ್ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಅಣ್ಣಾ ಹಜಾರೆ ಮಾಡಿದ ಉಪವಾಸ ಸತ್ಯಗ್ರಾಹ ಪ್ರಪಂಚದ ಗಮನ ಸೆಳೆಯಿತು. ರಾಷ್ಟ್ರ ಹಾಗೂ ಅಂತರ್‌ರಾಷ್ಟ್ರೀಯ ಮಟ್ಟದ ಸಂಘ ಸಂಸ್ಥೆಗಳು ಅಣ್ಣಾ ಹಜಾರೆಯಾವರ ಸಾಧನೆಯನ್ನು ಗೌರವಿಸಿವೆ. ಭಾರತ ಸರ್ಕಾರವು ಹಜಾರೆ ಅವರಿಗೆ ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಶ್ರೀಯುತರ ಸೇವೆಯನ್ನು ಪರಿಗಣಿಸಿದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸುತ್ತಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications