ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಕಾರ್ಯಕಾರಿಣಿ ಸಭೆಯಿಂದ ದೂರ ಉಳಿದ ಕೆ.ಎಸ್. ಈಶ್ವರಪ್ಪ: ನೀಡಿದ ಕಾರಣವೇನು?

|
Google Oneindia Kannada News

ಹೊಸಪೇಟೆ, ಏ.16: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜೀನಾಮೆ ನೀಡಿರುವ ಕೆ.ಎಸ್. ಈಶ್ವರಪ್ಪ ಬಿಜೆಪಿ ಕಾರ್ಯಕಾರಿಣಿ ಸಭೆಯಿಂದ ದೂರು ಉಳಿದಿದ್ದಾರೆ.

ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ಆದಿಯಾಗಿ ಎಲ್ಲ ಸಚಿವರು, ಶಾಸಕರು, ಜಿಲ್ಲಾ ಪ್ರಮಖರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಭಾನುವಾರ ಏ.17ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಳ್ಳುತ್ತಿದ್ದಾರೆ. ಆದರೆ, ಈಶ್ವರಪ್ಪ ಅವರು ಸಭೆಯಿಂದ ದೂರ ಉಳಿದಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆಗೆ ಬೈಕ್‌ನಲ್ಲಿ ಬಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಬಿಜೆಪಿ ಕಾರ್ಯಕಾರಿಣಿ ಸಭೆಗೆ ಬೈಕ್‌ನಲ್ಲಿ ಬಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪ ಅವರೇ ನೇರ ಕಾರಣ ಎಂದು ಹೇಳಿದ್ದರು. ಇದು ಈಶ್ವರಪ್ಪ ಅವರ ಸಚಿವ ಸ್ಥಾನಕ್ಕೆ ಕಂಟಕವಾಗಿ ರಾಜೀನಾಮೆ ನೀಡಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಉದ್ದೇಶದಿಂದಲೇ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ ಎಂದೂ ಹೇಳಲಾಗಿತ್ತು. ಈಗ ಈಶ್ವರಪ್ಪ ಸಭೆಯಿಂದಲೇ ದೂರ ಉಳಿದಿದ್ದಾರೆ.

KS Eshwarappa not attend BJP Exicutive meeting in hospet

ಈಶ್ವರಪ್ಪ ನೀಡಿದ ಕಾರಣವೇನು?

ಕೆ.ಎಸ್. ಈಶ್ವರಪ್ಪ ಅವರ ಕುಟುಂಬದಲ್ಲಿ ಮದುವೆ ಸಮಾರಂಭ ನಡೆಯುತ್ತಿದೆ. ಈ ಕಾರಣದಿಂದ ಅವರು ಸಭೆಯಿಂದ ದೂರ ಉಳಿದಿದ್ದಾರೆ ಎಂದು ಸಮಜಾಯಿಷಿ ನೀಡಲಾಗಿದೆ. ರಾಜೀನಾಮೆಗೂ ಪತ್ರ ಸಲ್ಲಿಸುವುದಕ್ಕೂ ಮುನ್ನ ತಮ್ಮ ಮೊಮ್ಮಗನ ಮದುವೆ ಆಮಂತ್ರಣ ಪತ್ರವನ್ನು ಸಿಎಂ ಸಹಿತ ಹಲವು ಸಂಪುಟ ಸಹೋದ್ಯೋಗಿಗಳಿಗೆ ಈಶ್ವರಪ್ಪ ನೀಡಿದ್ದರು.

"ಮನೆಯಲ್ಲಿ ಮೊಮ್ಮಗನ ಮದುವೆ ಕಾರ್ಯಕ್ರಮ ನಡೆಯುತ್ತಿದೆ. ಹೀಗಾಗಿ ಕಾರ್ಯಕಾರಿಣಿಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ರಾಜ್ಯಾಧ್ಯಕ್ಷರ ಅನುಮತಿ ಪಡೆದೇ ಸಭೆಯಿಂದ ದೂರ ಉಳಿದಿದ್ದೇನೆ'' ಎಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

English summary
KS Eshwarappa dose not attend BJP Exicutive meeting in hospet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X