Get Updates
Get notified of breaking news, exclusive insights, and must-see stories!

ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶೆಣೈ ದಿಢೀರ್ ರಾಜೀನಾಮೆ

ಬಳ್ಳಾರಿ, ಜೂನ್ 04 : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರು ರಾಜೀನಾಮೆ ನೀಡಿದ್ದಾರೆ. ಅನುಪಮಾ ಶೆಣೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖಚಿತ ಪಡಿಸಿದ್ದಾರೆ.

ಶನಿವಾರ ಅನುಪಮಾ ಶೆಣೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಬಳ್ಳಾರಿ ಎಸ್‌ಪಿ ಆರ್.ಚೇತನ್ ಅವರಿಗೆ ನೀಡಿದ್ದಾರೆ. ಅನುಪಮಾ ಅವರ ಫೋನ್ ಸ್ವಿಚ್ ಆಫ್ ಆಗಿದ್ದು, ಹಿರಿಯ ಅಧಿಕಾರಿಗಳು ಅವರನ್ನು ಸಂಪರ್ಕಿಸಲು ಪ್ರಯತ್ನ ನಡೆಸುತ್ತಿದ್ದಾರೆ. [ಅನುಪಮಾ ಶೆಣೈ ಪರಿಚಯ]

anupama shenoy

ಅನುಪಮಾ ಶೆಣೈ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದಾರೆ ಎಂದು ಬಳ್ಳಾರಿ ಎಸ್‌ಪಿ. ಆರ್.ಚೇತನ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜೀನಾಮೆ ಪತ್ರವನ್ನು ಪಡೆಯಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. [ಅನುಪಮಾ ವರ್ಗಾವಣೆ ಖಂಡಿಸಿ ಕೂಡ್ಲಿಗಿ ಬಂದ್]

ವೈಯಕ್ತಿಕ ಪ್ರತಿಷ್ಠೆಯಿಂದ ರಾಜೀನಾಮೆ? : ಸಂಡೂರು ತಾಲೂಕು ಪಂಚಾಯಿತಿಯ ಮಾಜಿ ಸದಸ್ಯ ರವಿ ಕುಮಾರ್ ಅವರು ಶಾಂತಿ ಕದಡುವ ಚಟುವಟಿಕೆ ಮಾಡುತ್ತಿದ್ದರು ಎಂದು ಆರೋಪಿಸಿ, ಅನುಪಮಾ ಶೆಣೈ ಅವರು ಅವರನ್ನು ಬಂಧಿಸಿದ್ದರು. ಆದರೆ, ಅನುಪಮಾ ಅವರ ಕೆಳ ಹಂತದ ಅಧಿಕಾರಿಗಳು ಜಾಮೀನಿನ ಮೇಲೆ ಅವರನ್ನು ಬಿಡುಗಡೆ ಮಾಡಿದ್ದರು. [ಅನುಪಮಾ ಶೆಣೈ ವರ್ಗಾವಣೆ, ಮೌನ ಮುರಿದ ಸಿದ್ದರಾಮಯ್ಯ]

ಇದರಿಂದ ಕೋಪಗೊಂಡಿದ್ದ ಅನುಪಮಾ ಶೆಣೈ ಅವರು ರವಿ ಕುಮಾರ್ ಅವರ ಬೆಂಬಲಿಗರಾದ ರಜನಿಕಾಂತ್ ಮತ್ತು ಕೃಷ್ಣ ಅವರನ್ನು ಥಳಿಸಿದ್ದರು ಎಂದು ಆರೋಪಿಸಲಾಗಿದೆ. ಇದನ್ನು ಪ್ರಶ್ನಿಸಿ ರವಿ ಕುಮಾರ್ ಕಡೆಯವರು ಅನುಪಮಾ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದರು.

ರವಿ ಕುಮಾರ್ ಅವರ ಬಂಧನವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದ ಅನುಪಮಾ ಅವರು ವೈಯಕ್ತಿಕ ಪ್ರತಿಷ್ಠೆಯಿಂದಾಗಿ ರಾಜೀನಾಮೆ ನೀಡಿದ್ದಾರೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅನುಪಮಾ ಅವರು ಒಂದು ಪಕ್ಷದ ಜೊತೆ ಗುರುತಿಸಿಕೊಂಡು ಅದರ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದರು ಎಂಬ ಆರೋಪವೂ ಇದೆ.

ಹಿಂದೆ ವರ್ಗಾವಣೆ ಗೊಂಡಿದ್ದರು : 2016ರ ಜನವರಿಯಲ್ಲಿ ಅನುಪಮಾ ಶೆಣೈ ಅವರನ್ನು ವಿಜಯಪುರದ ಇಂಡಿಯ ಡಿವೈಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ನಾಯಕ್ ಅವರ ಫೋನ್ ಕರೆ ಸ್ವೀಕರಿಸದ ಕಾರಣ ವರ್ಗಾವಣೆ ಮಾಡಲಾಗಿದೆ ಎಂಬ ವಿವಾದ ಎದ್ದಿತ್ತು.

ಪರಮೇಶ್ವರ ನಾಯಕ್ ಅವರ ವಿರುದ್ಧ ಸರಣಿ ಪ್ರತಿಭಟನೆ ನಡೆದಿತ್ತು. ಹಲವು ಒತ್ತಡಕ್ಕೆ ಮಣಿದಿದ್ದ ಸರ್ಕಾರ ಕೂಡ್ಲಗಿಯಲ್ಲಿ ಪುನಃ ಅನುಪಮಾ ಅವರು ಕಾರ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಟ್ಟಿತ್ತು.

ರಾಜೀನಾಮೆ ನೀಡಿರುವ ಅನುಪಮಾ ಅವರು ಬೆಂಗಳೂರಿಗೆ ಬರುತ್ತಿದ್ದು, ಇಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ. ಅನುಪಮಾ ಅವರ ಹೇಳಿಕೆ ನಂತರ ಮಾತ್ರ ರಾಜೀನಾಮೆಗೆ ನಿಖರ ಕಾರಣ ತಿಳಿದುಬರಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+