Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
ಬಳ್ಳಾರಿ, ಏಪ್ರಿಲ್. 23: ಬಳ್ಳಾರಿ ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ಅಭ್ಯರ್ಥಿಯು ತಮ್ಮ ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಏಪ್ರಿಲ್ 12 ರಿಂದ ಏಪ್ರಿಲ್ 19 ರವರೆಗೆ ನಾಮಪತ್ರ ಸಲ್ಲಿಕೆಯ ಅವಧಿಯಲ್ಲಿ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏಪ್ರಿಲ್ 20 ರಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿದ್ದವು. ನಾಮಪತ್ರ ವಾಪಸ್ಸು ಪಡೆಯುವ ದಿನವಾದ ಏಪ್ರಿಲ್ 22 (ಸೋಮವಾರ) ರಂದು ಪಕ್ಷೇತರ ಅಭ್ಯರ್ಥಿ ಬಿ.ಭಾಗ್ಯಲಕ್ಷ್ಮಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್
ಎರಡನೇ ಹಂತದಲ್ಲಿ ನಡೆಯಲಿರುವ ಬಳ್ಳಾರಿ ಲೋಕಸಭೆ ಚುನಾವಣೆಗೆ ಮೊದಲ ದಿನ ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ರಾಮುಲು ಪತ್ನಿ ಭಾಗ್ಯಲಕ್ಷ್ಮೀ ನಾಮಪತ್ರ ಸಲ್ಲಿಸಿದ್ದರು. ಒಂದು ವೇಳೆ ತಮ್ಮ ನಾಮಪತ್ರ ತಿರಸ್ಕೃತವಾದರೇ ಎಂಬ ಭಯದಲ್ಲಿ ಎಂದು ಶ್ರೀರಾಮುಲು ಪತ್ನಿ ಭಾಗ್ಯಲಕ್ಷ್ಮಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಬಳಿಕ ಇಬ್ಬರ ನಾಮಪತ್ರಗಳು ಅಂಗೀಕಾರವಾಗಿದ್ದವು. ಪತಿಯ ನಾಮಪತ್ರ ಅಂಗೀಕಾರವಾಗಿದ್ದು, ಗೊಂಡರೆ ಭಾಗ್ಯಲಕ್ಷ್ಮೀ ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ.
ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ವಾಲ್ಮೀಕಿ ಕೃಷ್ಣಪ್ಪ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ಶ್ರೀರಾಮುಲು ಕಣದಲ್ಲಿದ್ದಾರೆ.
ಅದೇ ರೀತಿ ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ (ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಸಿ.ಚನ್ನವೀರ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್, ಪ್ರಹರ್ ಜನಶಕ್ತಿ ಪಾರ್ಟಿಯ ಅಭ್ಯರ್ಥಿ ಮಂಜಪ್ಪ, ನವಭಾರತ್ ಸೇನ ಪಕ್ಷದ ಅಭ್ಯರ್ಥಿ ಜಿ.ಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಅರುಣ್ ಎಸ್ ಹಿರೇಹಾಳ್, ವೈ.ಪಂಪಾಪತಿ, ವೀರೇಶ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ. ಈಗಾಗಲೇ ಪಕ್ಷೇತರ ಅಭ್ಯರ್ಥಿಗಳಿಗೆ ಚಿಹ್ನೆ ಕೂಡ ಹಂಚಿಕೆ ಮಾಡಲಾಗಿದ್ದು, ಮೇ 07 ರಂದು ಮತದಾನ ನಡೆಯಲಿದೆ.

ಮತದಾನಕ್ಕೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆ
ಬೇಸಿಗೆ ಬಿಸಿಲಿರುವುದರಿಂದ ಮತದಾನ ದಿನದಂದು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮತಗಟ್ಟೆಗಳಲ್ಲಿ ಮತದಾರರು ನಿಲ್ಲಲು ನೆರಳು ಇಲ್ಲದಿರುವೆಡೆ ಶ್ಯಾಮಿಯಾನ ವ್ಯವಸ್ಥೆ ಮಾಡಲಾಗುವುದು ಅಲ್ಲದೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಹಾಗೂ ಇತರೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಮತದಾರರನ್ನು ಮತಗಟ್ಟೆಗೆ ಸೆಳೆಯಲು 40 ಸಖಿ ಮಹಿಳಾ ಮತಗಟ್ಟೆಗಳು, 12 ಎಥ್ನಿಕ್, 08 ವಿಶೇಷಚೇತನ ಹಾಗೂ 08 ಯುವ ಮತಗಟ್ಟೆಗಳು, ಥೀಮ್ ಆಧಾರಿತ 8 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಹೇಳಿದ್ದಾರೆ.
ಚುನಾವಣಾ ಅಕ್ರಮ ತಡೆಯಲು 1950 ಟೋಲ್ ಫ್ರೀ ಸಂಖ್ಯೆ
ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಹಣ, ಉಡುಗೋರೆ ಹಂಚುವುದು ಹಾಗೂ ಚುನಾವಣೆ ಸಂಬಂಧಿತ ಇತರೆ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಅಥವಾ ಸಿ-ವಿಜಿಲ್ ಆಪ್ ಮೂಲಕ ದೂರು ಸಲ್ಲಿಸಬಹುದು ಎಂದಿದ್ದಾರೆ.
ಚುನಾವಣಾ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ
ಚುನಾವಣೆ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಚುನಾವಣಾ ಆಯೋಗದ ನಿರ್ದೇಶನವಿದ್ದು, ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಮಿಶ್ರಾ ಅವರು ಖಡಕ್ ಸೂಚನೆ ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications