Get Updates
Get notified of breaking news, exclusive insights, and must-see stories!

ಬಳ್ಳಾರಿ ಲೋಕಸಭೆ ಚುನಾವಣೆ 2024: ಮತ ಎಣಿಕೆಗೆ ಜಿಲ್ಲಾಡಳಿತ ತಯಾರಿ

ಬಳ್ಳಾರಿ, ಜೂನ್ 02: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಜೂನ್‌ 4ರ ಮಂಗಳವಾರ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಮ್ ಮತ್ತು ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ನಡುವೆ ನೇರ ಪೈಪೋಟಿ ಇದ್ದು, ಚುನಾವಣೆ ಫಲಿತಾಂಶ ಕುತೂಹಲ ಮೂಡಿಸಿದೆ.

ಮತಗಳ ಎಣಿಕೆ ಕಾರ್ಯ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ಬಳ್ಳಾರಿ ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ, ಅಂತಿಮ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದರು.

Lok Sabha Election 2024 Ballari District Administration All Set For Election Counting

ಬಳ್ಳಾರಿ (ವಿಜಯನಗರ ಜಿಲ್ಲೆ ಒಳಗೊಂಡಂತೆ) ಜಿಲ್ಲೆಯ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 2 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 8 ಹಾಲ್‍ಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ಅಗತ್ಯ ಸಿಬ್ಬಂದಿಗಳ ನೇಮಕ: ಮತ ಎಣಿಕೆ ಸುಗಮವಾಗಿ ನಡೆಯಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 14 ಟೇಬಲ್‍ಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಟೇಬಲ್‍ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸರ್ವರ್ಸ್‍ಗಳನ್ನು ನಿಯೋಜಿಸಲಾಗಿದೆ. ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದ್ದು, ಎರಡನೇ ಹಂತದ ತರಬೇತಿಯನ್ನೂ ನೀಡಲಾಗುತ್ತದೆ. 121 ಜನರಿಗೆ ಈಗಾಗಲೇ ಕೌಂಟಿಂಗ್ ಏಜೆಂಟ್ ಆಗಿ ವೀಕ್ಷಣೆಗೆ ಪಾಸ್ ನೀಡಲಾಗಿದೆ.

ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಕಟಿಸಲಾಗುತ್ತದೆ. ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುತ್ತದೆ. ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ.

ಮತ ಎಣಿಕೆ ಕೇಂದ್ರವಾದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. 1 ಎಸ್‍ಪಿ, 2 ಎಎಸ್ಪಿ, 5ಡಿವೈಎಸ್ಪಿ, 15 ಸಿಪಿಐ, 25 ಪಿಎಸ್‍ಐ, 40 ಎಎಸ್‍ಐ, 250 ಪಿಸಿ, 4 ಕೆಎಸ್‍ಆರ್‌ಪಿ, 4 ಡಿಆರ್ ತಂಡ ಸಹಿತ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಸ್ಟ್ರಾಂಗ್ ರೂಂ ಗಳನ್ನು ತೆರೆಯಲಾಗುತ್ತದೆ. ಅಂಚೆ ಮತಗಳ ಎಣಿಕೆ ಮೊದಲು ನಡೆಯಲಿದ್ದು, ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ ಎಣಿಕಾ ಕೊಠಡಿಗಳಲ್ಲಿ ಅಗತ್ಯ ಬ್ಯಾರಿಕೇಡ್, ಎಣಿಕಾ ಟೇಬಲ್‍ಗಳ ವ್ಯವಸ್ಥೆ, ಮತ ಎಣಿಕಾ ಕೇಂದ್ರಕ್ಕೆ ಪ್ರವೇಶ ಕಲ್ಪಿಸುವ ದ್ವಾರದಲ್ಲಿ ಭದ್ರತೆ ಮುಂತಾದ ಕಾರ್ಯಗಳ ಬಗ್ಗೆಯೂ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.

ಮತಗಳ ಎಣಿಕಾ ಕಾರ್ಯ ಅತ್ಯಂತ ಸುಗಮ ಹಾಗೂ ಸುವ್ಯವಸ್ಥೆಯಿಂದ ನಡೆಯಬೇಕು. ಈ ಬಗ್ಗೆ ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಎಣಿಕಾ ಕೇಂದ್ರ ಕಟ್ಟಡದಲ್ಲಿ ಅಂದು ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿ, ಸಿಬ್ಬಂದಿ, ಮಾಧ್ಯಮದವರು ಸೇರುವುದರಿಂದ ಉಪಹಾರ ಹಾಗೂ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಕಟ್ಟಡದ ಪ್ರತಿ ಮಹಡಿಯಲ್ಲಿರುವ ಶೌಚಾಲಯಗಳನ್ನು ಸ್ವಚ್ಛವಾಗಿರಿಸಿ, ನಿಯಮಿತವಾಗಿ ಸ್ವಚ್ಛತೆಯ ನಿರ್ವಹಣೆಗೆ ಸ್ವಚ್ಛತಾ ಸಿಬ್ಬಂದಿ ನಿಯೋಜಿಸಬೇಕು, ಎಣಿಕಾ ಕೇಂದ್ರ ಪ್ರವೇಶಿಸಲು ಅಧಿಕೃತವಾಗಿ ಪಡೆದಿರುವ ಪ್ರವೇಶ ಅನುಮತಿ ಪತ್ರ (ಪಾಸ್) ಹೊಂದಿದವರಿಗೆ ಮಾತ್ರ ಅವಕಾಶವಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+