ಸಚಿವ ಸ್ಥಾನದ ಮೇಲೆ ಕಣ್ಣು, ಕಾಂಗ್ರೆಸ್ ಶಾಸಕರಿಗೆ ರಾಷ್ಟ್ರ ರಾಜಕೀಯ ಬೇಡ?
ಬಳ್ಳಾರಿ, ಜೂನ್ 08; ಲೋಕಸಭೆ ಚುನಾವಣೆ 2024ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೀಟುಗಳಲ್ಲಿ ಜಯಗಳಿಸಿದೆ. ಪಕ್ಷ ಗೆದ್ದ ಕ್ಷೇತ್ರಗಳಲ್ಲಿ ಬಳ್ಳಾರಿ ಸಹ ಒಂದು.
2024ರ ಚುನಾವಣೆಗೆ ಬಳ್ಳಾರಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದ ಹಾಲಿ ಶಾಸಕ ಇ. ತುಕರಾಂ ಕಣಕ್ಕಿಳಿಸಿತ್ತು. ಅವರು 7,30,845 ಮತಗಳನ್ನು ಪಡೆದು, ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ವಿರುದ್ಧ 98,992 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹಾಲಿ ಶಾಸಕ ಇ. ತುಕರಾಂ ಈಗ ಲೋಕಸಭೆಗೆ ಹೋಗಬೇಕಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆಗ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ರಾಜ್ಯ ರಾಜಕಾರಣದಲ್ಲಿ ಉಳಿಯಬೇಕಾದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆಗ ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.
ರಾಜ್ಯ ರಾಜಕೀಯದ ಮೇಲೆ ಪ್ರೀತಿ: ರಾಜ್ಯ ನಾಯಕರ ಒತ್ತಾಯಕ್ಕೆ ಮಣಿದು ಸಂಡೂರು ಕ್ಷೇತ್ರದ ಹಾಲಿ ಶಾಸಕ ಇ. ತುಕರಾಂ ಲೋಕಸಭೆ ಚುನಾವಣೆ ಕಣಕ್ಕಿಳಿದಿದ್ದರು. ಆದರೆ ಅವರು ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರಿಗೆ ರಾಜ್ಯ ರಾಜಕೀಯದ ಮೇಲೆ ಆಸಕ್ತಿ ಹೆಚ್ಚಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಸುಮಾರು 94.73 ಕೋಟಿ ಹಣ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಬಿ. ನಾಗೇಂದ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಬಿ. ನಾಗೇಂದ್ರ ರಾಜೀನಾಮೆ ಬಳಿಕ ರಾಜ್ಯದಲ್ಲಿ ಸಚಿವ ಸ್ಥಾನವೊಂದು ಖಾಲಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ರಾಜ್ಯ ರಾಜಕೀಯದಲ್ಲೇ ಉಳಿದು, ಬಿ. ನಾಗೇಂದ್ರ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನ ಪಡೆಯಲು ಇ. ತುಕರಾಂ ಬಯಸಿದ್ದಾರೆ.
ಸಿದ್ದರಾಮಯ್ಯ ಸಂಪುಟ ಸೇರುವ ತಮ್ಮ ಆಸೆಯನ್ನು ಇ. ತುಕರಾಂ ಕಾಂಗ್ರೆಸ್ ರಾಜ್ಯ, ಕೇಂದ್ರ ನಾಯಕರ ಬಳಿಯೂ ಚರ್ಚಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುತ್ರಿ ಸೌಪರ್ಣಿಕಾಗೆ ಟಿಕೆಟ್ ನೀಡಿ, ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ತಮಗೆ ಬಿಡಿ ಎಂದು ಭರವಸೆ ನೀಡಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದಲ್ಲಿ 85223 ಮತಗಳನ್ನು ಪಡೆದು ಬಿಜೆಪಿಯ ಶಿಲ್ಪಾ ರಾಘವೇಂದ್ರ ವಿರುದ್ಧ ಇ. ತುಕರಾಂ ಜಯಗಳಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಅವರು 2018-19ರಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು.
ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಮಾತನಾಡಿ ಇ. ತುಕರಾಂ ಹಿರಿಯ ಶಾಸಕರು. ಬಳ್ಳಾರಿ, ಸಂಡೂರು ಅಭಿವೃದ್ಧಿಗೆ ಅವರು ಅಪಾರ ಕೆಲಸ ಮಾಡಿದ್ದಾರೆ. ಅವರು ರಾಜ್ಯ ರಾಜಕೀಯದಲ್ಲಿ ಮುಂದುವರೆಯುವುದು ಉತ್ತಮ. ಬಳ್ಳಾರಿ ಲೋಕಸಭೆ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದರೆ ಪಕ್ಷ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿರುವುದು ಕೇವಲ 99 ಸೀಟು (ರಾಹುಲ್ ಗಾಂಧಿ ಎರಡು ಕಡೆ ಗೆಲುವು ಸೇರಿಸಿ). ಕರ್ನಾಟಕದಲ್ಲಿ ಪಕ್ಷ ಅಧಿಕಾರದಲ್ಲಿದ್ದರೂ ಸಹ ಗೆದ್ದಿರುವುದು ಕೇವಲ 9 ಸ್ಥಾನ. ಇಂತಹ ಸಂದರ್ಭದಲ್ಲಿ ಗೆದ್ದ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಉಪ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಬಯಸಲಿದೆಯೇ?.
ಪಕ್ಷದ ನಾಯಕ ರಾಹುಲ್ ಗಾಂಧಿ ಕೆಪಿಸಿಸಿ ಕಛೇರಿಯಲ್ಲಿ ಶುಕ್ರವಾರ ಲೋಕಸಭೆ ಚುನಾವಣೆಯಲ್ಲಿ ಗೆದ್ದ, ಸೋತ ಅಭ್ಯರ್ಥಿಗಳ ಜೊತೆ ಸಭೆಯನ್ನು ನಡೆಸಿದ್ದಾರೆ. ಸಂಡೂರು ಶಾಸಕ ಇ. ತುಕರಾಂ ಅವರ ಬೇಡಿಕೆಗೆ ಒಪ್ಪಿಗೆ ನೀಡಿ ಕಾಂಗ್ರೆಸ್, ಬಳ್ಳಾರಿಯಲ್ಲಿ ಉಪ ಚುನಾವಣೆಯನ್ನು ಎದುರಿಸಲಿದೆಯೇ? ಎಂದು ಕಾದು ನೋಡಬೇಕಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications