ಲೋಕಸಭೆ ಚುನಾವಣೆ: ಕೆಆರ್‌ಪಿಪಿ ಅಭ್ಯರ್ಥಿ ಕಣಕ್ಕೆ- ಶ್ರೀರಾಮುಲುಗೆ ಆತಂಕ!

ಬಳ್ಳಾರಿ ಮಾರ್ಚ್ 9: ಬಳ್ಳಾರಿಯಲ್ಲಿ ಲೋಕಸಛಾ ಚುನಾವಣೆಯ ಸಿರ್ದಧತೆ ಭರದಿಂದ ಸಾಗಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಜನಾರ್ಧನ ರೆಡ್ಡಿ ಹೇಳುತ್ತಿದ್ದಂತೆ ಶ್ರೀರಾಮುಲು ಅವರಲ್ಲಿ ಕಳವಳವನ್ನು ಉಂಟು ಮಾಡಿದೆ.

ಬಳ್ಳಾರಿ ಗ್ರಾಮಾಂತರದಿಂದ ಸ್ಪರ್ಧಿಸಿ ಸೋತಿದ್ದ ಶ್ರೀರಾಮುಲು ಅವರಿಗೆ ಬಿಜೆಪಿಯಿಂದ ಲೋಕಸಭೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಆದರೆ ಕಲ್ಯಾಣ ರಾಜ್ಯಪ್ರಗತಿ ಪಕ್ಷದಿಂದ (ಕೆಆರ್‌ಪಿಪಿ) ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಜನಾರ್ಧನ ರೆಡ್ಡಿಯವರು ಹೇಳಿದ್ದಾರೆ. ಆದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಮತ ಹಂಚಿಕೆಯಾಗುವ ಭೀತಿ ಶ್ರೀರಾಮುಲುಗೆ ಎದುರಾಗಿದೆ. ಇದು ಚುನಾವಣೆಯಲ್ಲಿ ಗೆಲ್ಲುವ ಸಾಧ್ಯತೆಯ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಆತಂಕಗೊಂಡಿರುವ ಶ್ರೀರಾಮುಲು ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ರೆಡ್ಡಿಗೆ ಮನವರಿಕೆ ಮಾಡಿಕೊಡಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

Lok Sabha election KRPP candidate field - Sriramulu is worried

ಬಳ್ಳಾರಿಯಿಂದ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚರ್ಚಿಸಲು ರೆಡ್ಡಿ ಕಳೆದ ವಾರ ಸಭೆ ಕರೆದಿದ್ದಾರೆ ಎಂದು ಕೆಆರ್‌ಪಿಪಿ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ. ರೆಡ್ಡಿ ಅವರು ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಶ್ರೀರಾಮುಲು ಅವರನ್ನು ಬೆಂಬಲಿಸಿದ್ದರು. ಆದರೆ ಕಳೆದ ಕೆಲವು ವರ್ಷಗಳಿಂದ ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಭೀಕರ ಕಾಲವನ್ನು ಎದುರಿಸುತ್ತಿರುವ ರೆಡ್ಡಿಯ ಪರವಾಗಿ ಅವರು ನಿಲ್ಲಲಿಲ್ಲ. ಹೀಗಾಗಿ ಪರಿಶಿಷ್ಟ ಪಂಗಡದ (ಮೀಸಲು) ಕ್ಷೇತ್ರವಾಗಿರುವ ಬಳ್ಳಾರಿಯಿಂದ ನಮ್ಮ ಪಕ್ಷ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಖಚಿತವಾಗಿದೆ.

ಕೆಆರ್‌ಪಿಪಿ ಆರಂಭಿಸಿದಾಗ ಶ್ರೀರಾಮುಲು ಅವರು ಬೆಂಬಲ ನೀಡದಿರುವ ಬಗ್ಗೆ ಸಭೆಯಲ್ಲಿ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಶ್ರೀರಾಮುಲು ಅವರು ಪಕ್ಷದ ಅಭ್ಯರ್ಥಿ ಮತ್ತು ರೆಡ್ಡಿ ಪತ್ನಿ ಅವರ ಅರುಣಾ ಲಕ್ಷ್ಮಿ ವಿರುದ್ಧ ಕೆಲಸ ಮಾಡಿದ್ದರು. ಈಗ ನಮ್ಮ ಸಹಾಯ ಅಪೇಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚಿನ ರಾಜ್ಯಸಭಾ ಚುನಾವಣೆಯ ಸಮಯದಲ್ಲಿ, ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದರು. ಶ್ರೀರಾಮುಲು ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಗಳನ್ನು ವಿಭಜಿಸುವ ರಾಜಕೀಯ ತಂತ್ರವಾಗಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+