Mahindra Thar Catches Fire: ನಡುರಸ್ತೆಯಲ್ಲೇ ಧಗಧಗಿಸಿದ ಮಹೀಂದ್ರಾ ಥಾರ್ ಕಾರು
Mahindra Thar Catches Fire: ಇದೀಗ ಮೊದಲೇ ಬಿರುಬಿಸಿಲು ಮುಂದುವರೆದಿದ್ದು, ದಿನಂದಿನ ದಿನಕ್ಕೆ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಈ ನಡುವೆಯೇ ಮಹೀಂದ್ರಾ ಥಾರ್ ಕಾರು ನಡು ರಸ್ತೆಯಲ್ಲೇ ದಿಢೀರ್ ಧಗಧಗಿಸಿ ಬೆಂಕಿಗಾಹುತಿಯಾದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ಸಾಮಾನ್ಯವಾಗಿ ಎಲೆಕ್ಟ್ರಿಕ್ ವಾಹನಗಳು ಬೆಂಕಿಯಿಂದ ಧಗಧಗಿಸಿರುವ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಆದ್ರೆ ಇದೀಗ ರಸ್ತೆಯಲ್ಲೇ ಕಪ್ಪು ಬಣ್ಣದ ಮಹೀಂದ್ರಾ ಥಾರ್ ಕಾರು ದಿಢೀರ್ ಹೊತ್ತಿ ಉರಿದ ಘಟನೆ ಸಂಡೂರು ತಾಲೂಕಿನ ಬಳಿ ನಡೆದಿದ್ದು, ಇದು ಹೇಗೆ ಸಾಧ್ಯ ಎಂದು ಬಹುತೇಕ ಮಂದಿ ಶಂಕೆ ವ್ಯಕ್ತಪಡಿಸಿದ್ದಾರೆ.

ತಾಳೂರು ಗ್ರಾಮದಿಂದ ಸಂಡೂರು ಕಡೆ ಪ್ರಯಾಣಿಸುತ್ತಿದ್ದ ವೇಳೆ ಕಾರು ಇದ್ದಕ್ಕಿದ್ದಂತೆ ನಿಂತುಬಿಟ್ಟಿದೆ. ಚಾಲಕ ಶತಪ್ರಯತ್ನ ಪಟ್ಟರೂ ಕೂಡ ಕಾರು ಸ್ಟಾರ್ಟ್ ಆಗಿರಲಿಲ್ಲ. ಈ ವೇಳೆ ಸುಟ್ಟ ವಾಸನೆ ಬಂದಿದೆ. ಆಗ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ. ಇದೇ ವೇಳೆ ಥಾರ್ ಕಾರು ದಿಢೀರ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಥಾರ್ ಕಾರು ಧಗಧಗಿಸಿದ ಘಟನೆ ನಡೆದಿದೆ. ಇನ್ನು ಈ ಥಾರ್ ಕಾರು ಬೆಂಕಿಯಿಂದ ಹೊತ್ತಿ ಉರಿಯಲು ನಿಖರ ಕಾರಣ ಏನೆಂಬುದು ತಿಳಿದುಬರಬೇಕಿದೆ. ಸಾಮಾನ್ಯವಾಗಿ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆಗಳು ನಡೆದಿವೆ. ಆದ್ರೆ, ಇದೀಗ ಡೀಸೆಲ್ ಮಾದರಿ ಅದರಲ್ಲೂ ಐಷಾರಾಮಿ ಮಹೀಂದ್ರ ಥಾರ್ ಕಾರಿಗೆ ಬೆಂಕಿ ಬಿದ್ದಿರುವುದು ಅನುಮಾನಕ್ಕೆ ಕಾರಣವಾಗಿದೆ.
ಕೆಲವೊಮ್ಮೆ ಕಂಪನಿ ನೀಡಿದ ಬಳಿಕ ಗ್ರಾಹಕರು ತಮಗೆ ಬೇಕಾದ ರೀತಿಯಲ್ಲಿ ವಾಹನಗಳನ್ನು ವಿನ್ಯಾಸ ಮಾಡಿಸಿಕೊಳ್ಳುತ್ತಾರೆ. ಈ ರೀತಿ ಮಾಡಿಸಿದ ನಂತರ ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆಗಳು ಕೂಡ ನಡೆದಿವೆ.
ಎಲೆಕ್ಟ್ರಿಕ್ ಬೈಕ್ ಶೋ ರೂಮ್‌ನಲ್ಲಿ ಅಗ್ನಿ ಅವಘಡ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಗ್ನಿ ಅವಘಡ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಹಾಗೆಯೇ ಜನವರಿ 27ರಂದು ನಗರದ ರಾಜಾಜಿನಗರ ಎಲೆಕ್ಟ್ರಿಕ್ ಬೈಕ್ ಶೋ ರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 10 ವಾಹನಗಳು ಸುಟ್ಟು ಭಸ್ಮವಾಗಿದ್ದು, 20ಕ್ಕೂ ಹೆಚ್ಚು ವಾಹನಗಳು ಭಾಗಶಃ ಹಾನಿಗೆ ಒಳಗಾಗಿದ್ದವು. ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.
ಈ ಘಟನೆ ಇಂದು ಮಧ್ಯಾಹ್ನ ನಡೆದಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮನಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಕಟ್ಟಡದ ನೆಲಮಳಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ಮೂರು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಈ ವೇಳೆ ಮೂವರು ಸಿಬ್ಬಂದಿ ಶೋ ರೂಮ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆಯಲ್ಲಿ ಸಿಬ್ಬಂದಿಯು ಹೊರ ಬಂದು ಜೀವ ರಕ್ಷಣೆ ಮಾಡಿಕೊಂಡಿದ್ದು, ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಆತನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಜ್‌ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೋಂಡಾ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಾರ್ಜ್ ಹಾಕುವಾಗ ಶರ್ಟ್ ಸರ್ಕ್ಯೂಟ್ ಆಗಿ ಈ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತ ಆಗಿದ್ದು, ಕ್ವಾಲಿಟಿ ಇಲ್ಲದೆ ಇರುವ ಬ್ಯಾಟರಿಯಿಂದ ನಡೆದಿತ್ತು.
ಬಟ್ಟೆ ಕಾರ್ಖಾನೆಗೆ ಬೆಂಕಿ: ಕಳೆದ ಕೆಲವು ವಾರಗಳ ಹಿಂದೆಯಷ್ಟೇ ಬಟ್ಟೆ ಕಾರ್ಖಾನೆ ಬೆಂಕಿಗಾಹುತಿಯಾದ ಘಟನೆ ಆನೇಕಲ್ ಬಳಿ ನಡೆದಿತ್ತು.
ಇಡೀ ಕೈಗಾರಿಕಾ ಪ್ರದೇಶವು ಹೊಗೆಯಿಂದ ಕೂಡಿದ್ದು, ಅಕ್ಕಪಕ್ಕದಲ್ಲಿ ಬೆಂಕಿ ಆವರಿಸಿದೆ. ಪರಿಣಾಮ ಕೋಟಿಗಟ್ಟಲೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.
ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟ ಭಸ್ಮವಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದರು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಇನ್ನು ಈ ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟು ಭಸ್ಮವಾಗಿದ್ದವು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications