ಬಳ್ಳಾರಿ; ಕಚ್ಚಿದ ಹಾವು ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ!

ಬಳ್ಳಾರಿ, ಜೂನ್ 13; ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದುಕೊಂಡೇ ವ್ಯಕ್ತಿಯೊಬ್ಬ ಆಸ್ಪತ್ರೆಗೆ ಆಗಮಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಉಪ್ಪಾರಹಳ್ಳಿಯಲ್ಲಿ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ವ್ಯಕ್ತಿಯನ್ನು ನೋಡಿ ಕೆಲ ಕಾಲ ಆತಂಕಗೊಂಡರು.

ಭಾನುವಾರ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿಯಲ್ಲಿ ಕಾಡಪ್ಪ ಎಂಬ ವ್ಯಕ್ತಿಗೆ ಹಾವು ಕಚ್ಚಿದೆ. ಇದರಿಂದ ಸಿಟ್ಟಿಗೆದ್ದ ಆತ ಹಾವಿನ ತಲೆಗೆ ಕೈಹಾಕಿ ಹಿಡಿದುಕೊಂಡಿದ್ದಾರೆ. ಆಸ್ಪತ್ರೆಗೆ ಹೋಗುವುದಿಲ್ಲ ಎಂದುದ ಹೇಳಿದ್ದಾನೆ.

ಆದರೆ ಸ್ಥಳೀಯರು ಕಾಡಪ್ಪನಿಗೆ ಬುದ್ಧಿ ಹೇಳಿದ್ದಾರೆ. ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕಾಡಪ್ಪ ಹಾವನ್ನು ಸಹ ಕೈಯಲ್ಲಿ ಹಿಡಿದುಕೊಂಡೇ ಆಸ್ಪತ್ರೆಗೆ ಹೋಗಿದ್ದಾನೆ.

Man Comes To Hospital With Snake Which Bit Him

ಹೌಹಾರಿದ ವೈದ್ಯರು; ಹಾವು ಕಂಡರೆ ದೂರ ಓಡಿ ಹೋಗುವ ಜನರ ನಡುವೆ ಕಾಡಪ್ಪ ಹಾವನ್ನು ಹಿಡಿದುಕೊಂಡೇ ಆಸ್ಪತ್ರೆಗೆ ಆಗಮಿಸಿದ್ದನ್ನು ಕಂಡು ವೈದ್ಯರು ಸಹ ಹೌಹಾರಿದ್ದಾರೆ.

ಆಸ್ಪತ್ರೆಯಲ್ಲಿದ್ದ ರೋಗಿಗಳು, ಸಿಬ್ಬಂದಿ ಜೀವಂತ ಹಾವನ್ನು ಕೈಯಲ್ಲಿ ಹಿಡಿದುಕೊಂಡು ಆಸ್ಪತ್ರೆಗೆ ಬಂದ ಕಾಡಪ್ಪನನ್ನು ನೋಡಿ ಆತಂಕಗೊಂಡಿದ್ದಾರೆ. ಕೆಲವರು ಧೈರ್ಯವಾಗಿ ಫೋಟೋ ತೆಗೆದುಕೊಂಡಿದ್ದಾರೆ.

ಹಾವನ್ನು ಬಿಟ್ಟು ಬಂದರೆ ಚಿಕಿತ್ಸೆ ನೀಡುವುದಾಗಿ ವೈದ್ಯರು ಹೇಳಿದ್ದಾರೆ. ಬಳಿಕ ಕಾಡಪ್ಪ ಆಸ್ಪತ್ರೆಗೆ ಆವರಣದ ಪಕ್ಕದಲ್ಲಿ ಹಾವನ್ನು ಬಿಟ್ಟು ಬಂದಿದ್ದಾರೆ. ಬಳಿಕ ವೈದ್ಯರು ಚಿಕಿತ್ಸೆ ನೀಡಿದ್ದು, ಕಾಡಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹಾವು ಹಿಡಿದುಕೊಂಡು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಬಂದ ಕಾಡಪ್ಪನನ್ನು ನೋಡಲು ಜನರು ಮುಗಿ ಬಿದ್ದರು. ಕಾಡಪ್ಪನ ಕಾರಣದಿಂದಾಗಿ ಕೆಲವು ಕಾಲ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ಸಹ ನಿರ್ಮಾಣವಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+