ಬಾಣಂತಿಯರ ಸಾವು: ಬಳ್ಳಾರಿ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ

ಬಳ್ಳಾರಿ, ಡಿಸೆಂಬರ್ 12: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ತನಿಖೆ ನಡೆಸಲು ಸರ್ಕಾರ ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ಸಮಿತಿ ತನಿಖೆ ನಡೆಸಿ ವರದಿ ನೀಡಿದ ಬಳಿಕ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಆಸ್ಪತ್ರೆಗೆ ಭೇಟಿ ಬಳಿಕ ಈಗ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಗುರುವಾರ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಪ್ರಕರಣದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸಿಬ್ಬಂದಿಗಳಿಂದ ಮಾಹಿತಿಗಳನ್ನು ಪಡೆದರು.

Maternal Deaths In Ballari Hospital Nagalakshmi Choudhary Visits

ಮೂಲ ಸೌಕರ್ಯದ ಮಾಹಿತಿ: ಡಾ. ನಾಗಲಕ್ಷ್ಮೀ ಚೌಧರಿ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ ಸಮುಚ್ಚಯ, ಶಸ್ತ್ರ ಚಿಕಿತ್ಸೆ ಕೊಠಡಿಗೆ ಭೇಟಿ ನೀಡಿದರು. ಬಾಣಂತಿಯರಿಗೆ ಸಿಗುವ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಮತ್ತು ಆರೈಕೆ ಕ್ರಮಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.

ಮಾಧ್ಯಮದ ಜೊತೆ ಮಾತನಾಡಿದ ಅವರು, "ಈ ಹಿಂದೆ ಆಸ್ಪತ್ರೆಯಲ್ಲಿ ಈ ತರಹದ ಘಟನೆ ಸಂಭವಿಸಲಿರಲಿಲ್ಲ, ಬಾಣಂತಿಯರ ಸಾವಿಗೆ ಐವಿ ರಿಂಗರ್ ದ್ರಾವಣ ಕೂಡ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಆಗ ಸರಬರಾಜು ಆದ ಎಲ್ಲಾ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬ್ಯಾಚ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಐವಿ ದ್ರಾವಣ ಔಷಧ ಸರಬರಾಜು ಸ್ಥಗಿತಗೊಳಿಸಿದ್ದಾರೆ" ಎಂದರು.

"ಸರ್ಕಾರವು ಮೃತಪಟ್ಟ ಬಾಣಂತಿಯರಿಗೆ ಘೋಷಿಸಿದ ಪರಿಹಾರವನ್ನು 2 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಮಕ್ಕಳ ಬೆಳವಣಿಗೆಗೆ ಹಾಗೂ ಅವರ ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿ ಸರ್ಕಾರ ವಹಿಸಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು" ಎಂದು ತಿಳಿಸಿದರು.

"ಜನ ಸಾಮಾನ್ಯರ ಆರೋಗ್ಯದ ಕಾಳಜಿಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು. ಗುಣಮಟ್ಟದ ಔಷಧಿ ಸರಬರಾಜು ಮಾಡಬೇಕು. ಈ ಕುರಿತು ಸರ್ಕಾರದ ಗಮನ ಸೆಳೆಯಲಾಗುವುದು. ಜಿಲ್ಲಾ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಶಸ್ತ್ರ ಚಿಕಿತ್ಸಾ ಕೇಂದ್ರಗಳಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ" ಎಂದು ಹೇಳಿದರು.

ಆಸ್ಪತ್ರೆಗೆ ಶನಿವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದ್ದರು. "ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಕುರಿತಾಗಿ ಉನ್ನತ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ, ಅವರು ನೀಡುವ ವರದಿಯನ್ನಾಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಹೇಳಿದ್ದರು.

ಸಚಿವರು ಮಾತನಾಡಿ, "ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ವರದಿ ನೀಡಿದ್ದರೆ, ಸೆಂಟ್ರಲ್ ಡ್ರಗ್ಸ್‌ ಲ್ಯಾಬ್ ಪಾಸಿಟಿವ್‌ ವರದಿ ನೀಡಿದೆ. ಇದನ್ನು ಉಲ್ಲೇಖಿಸಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದೇವೆ. ಫಾರ್ಮಾಸ್ಯುಟಿಕಲ್ಸ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆದೇಶಿಸಲಾಗುವುದು" ಎಂದು ತಿಳಿಸಿದ್ದರು.

ಬಳ್ಳಾರಿ ಭೇಟಿ ಸಂದರ್ಭದಲ್ಲಿ ಸಚಿವರು ಬಳ್ಳಾರಿ ತಾಲ್ಲೂಕಿನ ಬಸರಕೋಡು, ಬಾಣಾಪುರ ಗ್ರಾಮಗಳ ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನವನ್ನು ಹೇಳಿದ್ದರು. ಬಸರಕೋಡು ಗ್ರಾಮದ ಕಮ್ಮಾರಿ ಲಲಿತಾ ಮನೆಗೆ ಭೇಟಿ ನೀಡಿ, ಪೋಷಕರ ಜೊತೆ ಮಾತುಕತೆ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+