ಮೇ 21ರಂದು ಬಳ್ಳಾರಿಯಲ್ಲಿ ಉದ್ಯೋಗ ಮೇಳ, ಕೊಡಗಿನಲ್ಲಿ ನೇರ ಸಂದರ್ಶನ
ಬಳ್ಳಾರಿ, ಮೇ 18: ಬಳ್ಳಾರಿ ಮತ್ತು ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಬಳ್ಳಾರಿಯಲ್ಲಿ ಮೇ 21ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಕೊಡಗಿನಲ್ಲಿ ಅಂದು ನೇರ ಸಂದರ್ಶನವಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಮೇ 21ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಪುರುಷರು ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಆಗಮಿಸಬೇಕು.
ಉದ್ಯೋಗ ಮೇಳ ನಗರದ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9742718891, 9663263086, 9900827768, 6360408094 ಸಂಖ್ಯೆಗೆ ಕರೆ ಮಾಡಬಹುದು.
ಕೊಡಗಿನಲ್ಲಿ ನೇರ ಸಂದರ್ಶನ: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ಖಾಸಗಿ ಕಂಪನಿಯಾದ ಕಲ್ಯಾಣಿ ಮೋಟಾರ್ಸ್ ತಮ್ಮಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಮೇ 21ರಂದು ಬೆಳಗ್ಗೆ 10.30ಕ್ಕೆ ವಿರಾಜಪೇಟೆ ಕಲ್ಯಾಣಿ ಮೋಟರ್ಸ್ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು 1 ಸೆಟ್ ರೆಸ್ಯೂಮ್‍ಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಇವರನ್ನು ಸಂಪರ್ಕಿಸಿ, ದೂರವಾಣಿ ಸಂಖ್ಯೆ 8296020826.
ಹೈನುಗಾರಿಕೆ ತರಬೇತಿ: ದಾವಣಗೆರೆ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಮೇ 19 ಮತ್ತು 20ರಂದು ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು ಎಂದು ಮನವಿ ಮಾಡಲಾಗಿದೆ.
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಇವರ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ 08192-233787.












Click it and Unblock the Notifications