ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಾಭದ್ರಾ ಜಲಾಶಯಕ್ಕೆ ಕೃಷ್ಣಾ ನದಿ ನೀರು ಹರಿಸಿ

|
Google Oneindia Kannada News

ಬಳ್ಳಾರಿ, ಆಗಸ್ಟ್ 05 : ತುಂಗಾಭದ್ರಾ ಜಲಾಶಯಕ್ಕೆ ಕೃಷ್ಣಾ ನದಿ ನೀರನ್ನು ಹರಿಸಬೇಕು ಎಂದು ಬಳ್ಳಾರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಮನವಿ ಮಾಡಿದರು.

ಯಡಿಯೂರಪ್ಪ ಇಂದು ಬಳ್ಳಾರಿಯ ಜಿಂದಾಲ್‌ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು. ಆಗ ಅವರನ್ನು ಭೇಟಿಯಾದ ಶಾಸಕರು, "ಕೃಷ್ಣಾ ನದಿಯನ್ನು ಜೋಡಿಸಿದರೆ ತ್ರಿವಳಿ ಜಿಲ್ಲೆಗಳ ನೀರಾವರಿ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬಹುದು" ಎಂದು ವಿವರಿಸಿದರು.

ಬಾಗಲಕೋಟೆ : ಕೃಷ್ಣಾ ನದಿ ಪ್ರವಾಹ, ಸಂತ್ರಸ್ತರ ರಕ್ಷಣೆಬಾಗಲಕೋಟೆ : ಕೃಷ್ಣಾ ನದಿ ಪ್ರವಾಹ, ಸಂತ್ರಸ್ತರ ರಕ್ಷಣೆ

ಅತ್ಯಂತ ಸಮಾಧಾನದಿಂದ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು, "ಇದಕ್ಕೆ ಸಂಬಂಧಿಸಿದ ವಿಸ್ತ್ರತ ಯೋಜನಾ ವರದಿಯೊಂದನ್ನು ನೀಡಿ. ಮುಂದಿನ ಬಜೆಟ್‍ನಲ್ಲಿ ಘೋಷಿಸಿ ಅನುಷ್ಠಾನಗೊಳಿಸೋಣ" ಎಂದು ಭರವಸೆ ನೀಡಿದರು.

ಪ್ರವಾಹ : ಉತ್ತರ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆಪ್ರವಾಹ : ಉತ್ತರ ಕರ್ನಾಟಕದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

Somashekar Reddy

ಮಾಧ್ಯಮಗಳ ಜೊತೆ ಮಾತನಾಡಿದ ಸೋಮಶೇಖರ್ ರೆಡ್ಡಿ, "ತ್ರಿವಳಿ ಜಿಲ್ಲೆಗಳ ಹಾಗೂ ನೆರೆಯ ರಾಜ್ಯದ ಜೀವನಾಡಿಯಾಗಿರುವ ತುಂಗಾಭದ್ರಾ ಜಲಾಶಯ ಇದುವರೆಗೆ ತುಂಬಿಲ್ಲ. ಕೇವಲ 30 ಟಿಎಂಸಿ ನೀರು ಮಾತ್ರ ಇದೆ. ಇನ್ನೂ 70 ಟಿಎಂಸಿ ನೀರಿನ ಅಗತ್ಯ ಇದೆ" ಎಂದರು.

ಉಳ್ಳಾಲ, ಸೋಮೇಶ್ವರದಲ್ಲಿ ಮಳೆಗೆ ಮತ್ತೆ ಕಡಲ್ಕೊರೆತಉಳ್ಳಾಲ, ಸೋಮೇಶ್ವರದಲ್ಲಿ ಮಳೆಗೆ ಮತ್ತೆ ಕಡಲ್ಕೊರೆತ

"4 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಯಿಂದ ಹರಿಬಿಡಲಾಗುತ್ತಿದೆ. ಅದು ವ್ಯರ್ಥವಾಗಿ ಸಮುದ್ರದ ಪಾಲಾಗುತ್ತಿದೆ. ಕೃಷ್ಣಾ ನದಿ ನೀರನ್ನು ನಮ್ಮ ಜಲಾಶಯಕ್ಕೆ ಜೋಡಿಸಿದರೆ ನೀರು ಸದ್ಭಳಕೆಯಾಗುತ್ತದೆ" ಎಂದು ಹೇಳಿದರು.

"ಮೂರು ಜಿಲ್ಲೆಗಳ ನಿಯೋಗವನ್ನು ಕರೆದುಕೊಂಡು ಹೋಗಿ ಮುಖ್ಯಮಂತ್ರಿಗಳಿಗೆ ವಿಸ್ತ್ರೃತ ಯೋಜನೆ ವಿವರಿಸಿ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗುವುದು" ಎಂದು ಸೋಮಶೇಖರ ರೆಡ್ಡಿ ತಿಳಿಸಿದರು.

"ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರ ನೇತೃತ್ವದಲ್ಲಿ ಈ ಯೋಜನೆ ಸಾಕಾರಗೊಂಡರೇ ರೈತರ ಬದುಕು ಬಂಗಾರವಾಗಲಿದೆ. ಕುಡಿಯುವ ನೀರಿನ ಸಮಸ್ಯೆಯೂ ನಿವಾರಣೆಯಾಗಲಿದೆ" ಎಂದರು.

English summary
Ballari City BJP MLA Somashekar Reddy demand to merge Krishna river water to Tungabhadra dam. On August 5, 2019 he submitted the memorandum to Chief Minister B.S.Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X