• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಚಿವ ಆನಂದ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಜುಲೈ 20: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಆನಂದ ಸಿಂಗ್ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೊಸಪೇಟೆ ನಗರದ ರಾಣಿಪೇಟೆಯ ಕಚೇರಿಯನ್ನು ಇಂದು ಸೀಲ್ ‌ಡೌನ್ ಮಾಡಲಾಗಿದೆ.

ಸದ್ಯಕ್ಕೆ ಸಚಿವ ಆನಂದಸಿಂಗ್ ಅವರ ಕಾರು ಚಾಲಕನ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಸ್ವಯಂ ಹೋಂ ಕ್ವಾರೆಂಟೈನ್ ನಲ್ಲಿರಲು ಸೂಚಿಸಲಾಗಿದೆ. ಸೋಂಕು ತಗುಲಿರುವ ವಾಹನ ಚಾಲಕನನ್ನು ಹೊಸಪೇಟೆ ನಗರದ ಕೋವಿಡ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.

ಬಳ್ಳಾರಿ ಲಾಕ್ ಡೌನ್ ಮಾಡುವಂತೆ ಬರುತ್ತಿದೆ ಭಾರೀ ಒತ್ತಡ

ಕಾರು ಚಾಲಕನ ಕುಟುಂಬ ಸದಸ್ಯರನ್ನೂ ಕ್ವಾರೆಂಟೈನ್ ನಲ್ಲಿರಿಸಲಾಗಿದೆ. ಇದರೊಂದಿಗೆ ಸಚಿವ ಆನಂದಸಿಂಗ್ ಅವರ ಆಪ್ತ ಸಹಾಯಕರು, ಸಚಿವರ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನೂ 14 ದಿನಗಳ ಕಾಲ ಹೋಂ ಕ್ವಾರೆಂಟೈನ್ ನಲ್ಲಿರಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಸಚಿವರ ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

English summary
Car driver of Ballari district incharge minister Anand Singh has been tested coronavirus positive today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X