• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಜಯನಗರಕ್ಕೆ ಕಂಪ್ಲಿ ಸೇರಿಸಲು ಆಗ್ರಹ; ಸಚಿವ ಶ್ರೀರಾಮುಲು ಹೇಳುವುದೇನು?

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಡಿಸೆಂಬರ್ 01: ಕಂಪ್ಲಿ ಬಂದ್ ಹೋರಾಟದ ಸಂದರ್ಭ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಆದ ಘರ್ಷಣೆ ಕುರಿತು ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, "ಶಾಸಕ ಗಣೇಶ್ ಬಿಜೆಪಿ ಬೆಂಬಲಿಗರಿಗೆ ಆವಾಜ್ ಹಾಕಿರುವುದು ಶೋಭೆಯಲ್ಲ" ಎಂದಿದ್ದಾರೆ.

ಬಳ್ಳಾರಿ ಜಿಲ್ಲೆಯಿಂದ ನೂತನ ವಿಜಯನಗರ ಜಿಲ್ಲೆಗೆ ಕಂಪ್ಲಿ ತಾಲೂಕನ್ನು ಸೇರಿಸುವಂತೆ ಆಗ್ರಹಿಸಿ ಸೋಮವಾರ ಕಂಪ್ಲಿ ಪಟ್ಟಣ ಬಂದ್ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಪ್ರಸಂಗ ನಡೆದಿತ್ತು. ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಮತ್ತು ಮಾಜಿ ಬಿಜೆಪಿ ಶಾಸಕರ ಬೆಂಬಲಿಗರ ನಡುವೆ ಗಲಾಟೆಯಾಗಿದ್ದು, ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಕಂಪ್ಲಿ ಪಟ್ಟಣ ಬಂದ್: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ಮಂಗಳವಾರ ಗ್ರಾಮ ಸ್ವರಾಜ್ ಕಾರ್ಯಕ್ರಮದ ನಿಮಿತ್ತ ಕೊಪ್ಪಳ ಜಿಲ್ಲೆಗೆ ತೆರಳುವ ಸಂದರ್ಭದಲ್ಲಿ ಕಂಪ್ಲಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ, ದುರಸ್ತಿ ಕಾಮಗಾರಿ ವೀಕ್ಷಿಸಿ ಮಾತನಾಡಿದರು. "ಕಂಪ್ಲಿ ವಿಜಯನಗರ ಜಿಲ್ಲೆಗೆ ಸೇರಬೇಕೆಂಬ ಹೋರಾಟದ ಒತ್ತಾಯ ಸರಿ. ಆದರೆ, ಶಾಸಕರು ಬಿಜೆಪಿ ಬೆಂಬಲಿಗರಿಗೆ ಧಮ್ಕಿ ಹಾಕುವ ಮೂಲಕ ಗೊಂದಲ ಸೃಷ್ಟಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆ ವಿಷಾದನೀಯವಾಗಿದೆ" ಎಂದು ಹೇಳಿದರು.

ಪಕ್ಷಾತೀತ ಹೋರಾಟದ ಮೂಲಕ ಕಂಪ್ಲಿಯನ್ನು ವಿಜಯನಗರ ಜಿಲ್ಲೆಗೆ ಸೇರಿಸಬೇಕೆಂದು ಆಗ್ರಹಿಸಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಂಪ್ಲಿ ವಿಜಯನಗರ ಜಿಲ್ಲೆಗೆ ಸೇರಿಸಬೇಂಬ ವಿಷಯಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜಕೀಯ ದೃಷ್ಟಿಯಿಂದಲ್ಲ, ಬದಲಾಗಿ ಆಡಳಿತಾತ್ಮಕ ದೃಷ್ಟಿಯಿಂದ ಕಂಪ್ಲಿಯನ್ನು ಬಳ್ಳಾರಿಗೆ ಸೇರಿಸಲಿದ್ದಾರೆ. ಆಕ್ಷೇಪಣೆಗೆ ಅವಕಾಶ ನೀಡಿದ್ದು, ಆಕ್ಷೇಪಣೆಗೆ ಸಂಬಂಧಿಸಿದಂತೆ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

   ಇವ್ರೆ ನೋಡಿ BJPಯ Lucky charm !! | Oneindia Kannada

   ಕಂಪ್ಲಿ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಯಾವುದೇ ಲಾಬಿ ಇಲ್ಲ. ಈ ಭಾಗದ ರೈತರ ಹಿತದೃಷ್ಟಿಯಿಂದ ಕಂಪ್ಲಿ ಸಕ್ಕರೆ ಕಾರ್ಖಾನೆ ಪುನರಾರಂಭಿಸಲಾಗುವುದು. ರಾಜ್ಯದಲ್ಲಿ ಮುಂದಿನ ಎರಡೂವರೆ ವರ್ಷ ಸಿಎಂ ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವೇ ಇಲ್ಲ ಎಂದರು.

   English summary
   "CM Yediyurappa will decide on the inclusion of Kampli taluk to Vijayanagar district very shortly" said Minister Sriramulu in ballari on tuesday
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X