ಶಾಸಕ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಪೊಲೀಸರು
ಬಳ್ಳಾರಿ, ಏಪ್ರಿಲ್ 29: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ-ಪದೇ ನ್ಯಾಯಾಲಯ ವಿಚಾರಣೆಗೆ ನಾಗೇಂದ್ರ ಅವರು ಗೈರಾಗುತ್ತಿದ್ದರು, ಹಾಗಾಗಿ ನ್ಯಾಯಾಲವು ಅವರ ವಿರುದ್ಧ ವಾರೆಂಟ್ ವಹಿಸಿತ್ತು.
ನ್ಯಾಯಾಲಯದ ವಾರೆಂಟ್ ಹಿನ್ನೆಲೆಯಲ್ಲಿ ಇಂದು ಪೊಲೀಸರು ನಾಗೇಂದ್ರ ಅವರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಕಳೆದ ತಿಂಗಳಷ್ಟೆ ಇದೇ ಕಾರಣಕ್ಕೆ ನಾಗೇಂದ್ರ ಅವರನ್ನು ಪೊಲೀಸರು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಅಕ್ರಮ ಗಣಿಗಾರಿಕೆ ಸಂಬಂಧ ಶಾಸಕ ನಾಗೇಂದ್ರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಈ ವಿಚಾರಣೆಗೆ ನಾಗೇಂದ್ರ ಅವರು ಪದೇ-ಪದೇ ಗೈರಾಗುತ್ತಿದ್ದರು.
ಕಾಂಗ್ರೆಸ್ ಶಾಸಕ ನಾಗೇಂದ್ರ ಅವರು ಕಾಂಗ್ರೆಸ್ ಭಿನ್ನಮತೀಯ ಶಾಸಕರಾಗಿ ಅವರು ಗುರುತಿಸಿಕೊಂಡಿದ್ದರು, ಅವರು ರಮೇಶ್ ಜಾರಕಿಹೊಳಿ ಆಪ್ತವಲಯದಲ್ಲಿಯೂ ಸಹ ಗುರುತಿಸಿಕೊಂಡಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ನಾಗೇಂದ್ರ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ ಕೇಳಿಬಂದಿತ್ತು. ಅದಿನ್ನೂ ವಿಚಾರಣೆ ಹಂತದಲ್ಲಿದೆ.












Click it and Unblock the Notifications