ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"'ಬಳ್ಳಾರಿಯನ್ನು ಸ್ಮಾರ್ಟ್‌ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಿ''

|
Google Oneindia Kannada News

ಬಳ್ಳಾರಿ, ಅ.5: ಬಳ್ಳಾರಿ ನಗರವನ್ನು ಸ್ಮಾರ್ಟ್‌ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಬಳಿ ಸಂಸದ ದೇವೇಂದ್ರಪ್ಪ ಮನವಿ ಸಲ್ಲಿಸಿದ್ದಾರೆ

ಕಲ್ಯಾಣ ಕರ್ನಾಟಕದ ಪ್ರಮುಖ ಕೇಂದ್ರವಾಗಿರುವ ಬಳ್ಳಾರಿ ನಗರವನ್ನು ಕೇಂದ್ರ ಸರಕಾರದ ಸ್ಮಾರ್ಟ್‌ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಿ ಎಂದು ಬಳ್ಳಾರಿ ಸಂಸದ ವೈ ದೇವೇಂದ್ರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಳ್ಳಾರಿ-ಶಿರಗುಪ್ಪ-ಲಿಂಗಸುಗೂರು ರೈಲ್ವೇ ಮಾರ್ಗಕ್ಕೆ ಅನುದಾನ ನೀಡಿಬಳ್ಳಾರಿ-ಶಿರಗುಪ್ಪ-ಲಿಂಗಸುಗೂರು ರೈಲ್ವೇ ಮಾರ್ಗಕ್ಕೆ ಅನುದಾನ ನೀಡಿ

ಇತ್ತೀಚೆಗೆ ದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದ ಅವರು ತಮ್ಮ ಮನವಿ ಪತ್ರದಲ್ಲಿ ಬಳ್ಳಾರಿ ಹಾಗೂ ಕಲಬುರ್ಗಿ ಮಾತ್ರ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ನಗರಪಾಲಿಕೆಗಳಾಗಿವೆ. ಅತ್ಯಂತ ಹಳೆಯ ನಗರವಾಗಿರುವ ಬಳ್ಳಾರಿ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿದೆ. ರಾಜ್ಯದ ಎರಡು ಜಿಲ್ಲೆಗಳು ಹಾಗೂ ಆಂದ್ರ ಪ್ರದೇಶ ರಾಜ್ಯದ ಮೂರು ಜಿಲ್ಲೆಗಳ ಮಧ್ಯೆ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.

MP Y Devendrappa request Nirmala Sitharaman include Ballari to smart city mission

ಸ್ಮಾರ್ಟ್‌ ಸಿಟಿ ಯೋಜನೆಯ ಅಡಿಯಲ್ಲಿ ಬಳ್ಳಾರಿಯನ್ನು ಸೇರ್ಪಡೆಗೊಳಿಸಿಕೊಳ್ಳುವುದರಿಂದ ನಗರದ ಮೂಲಭೂತ ಸೌಕರ್ಯಗಳು ಹೆಚ್ಚಾಗುತ್ತವೆ. ಅಲ್ಲದೆ ಈ ಭಾಗದಲ್ಲಿ ಆರ್ಥಿಕತೆಗೆ ಪುಷ್ಠಿಯನ್ನು ನೀಡುತ್ತವೆ. ಈ ಪತ್ರದ ಜೊತೆಯಲ್ಲಿ ಬಳ್ಳಾರಿ ನಗರದ ಬಗ್ಗೆ ಸಣ್ಣ ಪುಸ್ತಿಕೆಯನ್ನು ನೀಡಿದ್ದು, ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಈ ಭಾಗದ ಭೌಗೋಳಿಕ ಹಾಗೂ ಜನಸಂಪನ್ಮೂಲದ ಅಭಿವೃದ್ದಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

English summary
Ballari MP Y Devendrappa has requested Union minister Nirmala Sitharaman to include Ballari city to smart city mission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X