• search
 • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌' ಮೈಲಾರ ಕಾರ್ಣಿಕ ಭವಿಷ್ಯ

By ಬಳ್ಳಾರಿ ಪ್ರತಿನಿಧಿ
|
   ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌' ಮೈಲಾರ ಕಾರ್ಣಿಕ ಭವಿಷ್ಯ | Oneindia Kannada

   ಬಳ್ಳಾರಿ, ಫೆಬ್ರವರಿ 04: ಬಳ್ಳಾರಿ ಜಿಲ್ಲೆಯ ಐತಿಹಾಸಿಕ ಸುಕ್ಷೇತ್ರ ಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವ ನುಡಿ ಹೊರಬಿದ್ದಿದೆ. ಈ 'ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌' ಎನ್ನುವುದು ಈ ಬಾರಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ.

   ಹೌದು, ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ 'ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌' ಎಂದು ಗೊರವಪ್ಪ ನುಡಿದ. ಆದರೆ ಆರಂಭದಲ್ಲಿ ಇದು ಅಲ್ಲಿ ನೆರೆದಿದ್ದ ಭಕ್ತರ ಗದ್ದಲದಿಂದಾಗಿ ಬೇರೆಯ ರೀತಿಯಲ್ಲಿ ಅರ್ಥೈಸಲಾಗಿತ್ತು.

   ಹೀಗಾಗಿ, ಬಳ್ಳಾರಿ ಜಿಲ್ಲಾಡಳಿತ ಕಾರಣಿಕದ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂಧನ‌ ಸಚಿವ ಡಿ. ಕೆ. ಶಿವಕುಮಾರ್‌ ಸೇರಿದಂತೆ ಹಲವು ರಾಜಕಾರಣಿಗಳು ಕಾರ್ಣಿಕ ಆಲಿಸಿದರು.

   2014ರಲ್ಲಿ ಮೈಲಾರನ ಸನ್ನಿಧಿಯಲ್ಲಿ ಗೊರವಯ್ಯ ನುಡಿದ ಭವಿಷ್ಯ

   ಆರಂಭದಲ್ಲಿ ಕೆಲಕಾಲ ಕಾರ್ಣಿಕವನ್ನು ಆಕಾಶಕ್ಕೆ ಸಿಡಿಲು ಬಡಿತಲೇ ಪರಾಕ್ ಎಂದು ವಿಶ್ಲೇಷಿಸಲಾಗಿತ್ತು. ಮೈಕ್‌ ಸಮಸ್ಯೆಯಿಂದ ಈ ರೀತಿಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಮೈಲಾರ ಜಾತ್ರಾ ಮಂಡಳಿ ಮತ್ತು ಮುಜರಾಯಿ ಇಲಾಖೆ ಈ ಕುರಿತಂತೆ ಸ್ಪಷ್ಟನೆ ನೀಡಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ತಮ್ಮ ವೃತ್ತಿಗೆ ಅನುಗುಣವಾಗಿ ಭವಿಷ್ಯವಾಣಿ ವಿಶ್ಲೇಷಿಸುತ್ತಿದ್ದ ದೃಶ್ಯ ಕಂಡುಬಂತು.

   ಮೈಕ್‌ ಸಮಸ್ಯೆಯಿಂದ ಗೊಂದಲ

   ಮೈಕ್‌ ಸಮಸ್ಯೆಯಿಂದ ಗೊಂದಲ

   ಮೈಕ್‌ ಸಮಸ್ಯೆಯಿಂದ ಈ ರೀತಿಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಮೈಲಾರ ಜಾತ್ರಾ ಮಂಡಳಿ ಮತ್ತು ಮುಜರಾಯಿ ಇಲಾಖೆ ಈ ಕುರಿತಂತೆ ಸ್ಪಷ್ಟನೆ ನೀಡಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ತಮ್ಮ ವೃತ್ತಿಗೆ ಅನುಗುಣವಾಗಿ ಭವಿಷ್ಯವಾಣಿ ವಿಶ್ಲೇಷಿಸುತ್ತಿದ್ದ ದೃಶ್ಯ ಕಂಡುಬಂತು.

   ಗೊರವಯ್ಯ ನುಡಿದ ಭವಿಷ್ಯ

   ಗೊರವಯ್ಯ ನುಡಿದ ಭವಿಷ್ಯ

   ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ನೈಋತ್ಯಕ್ಕಿರುವ ಮೈಲಾರ ಲಿಂಗೇಶ್ವರ ದೇವಾಲಯಕ್ಕೆ ಶತ ಶತಮಾನಗಳ ಇತಿಹಾಸವಿದೆ. ತುಂಗಭದ್ರಾ ನದಿ ತಟದಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಈ ದೇವಾಲಯದಲ್ಲಿ ಶಿವನನ್ನು ಆರಾಧಿಸಲಾಗುತ್ತದೆ.

   ಕುರುಬ ಗೌಡ ಸಮುದಾಯದರು ಆರಾಧಿಸುವ ಈ ಶಿವನ ಸನ್ನಿಧಿಯಲ್ಲಿ ನಡೆಯುವ ವಾರ್ಷಿಕ ಕಾರ್ಣಿಕೋತ್ಸವ ಜಗತ್ಪ್ರಸಿದ್ದ. ಹಾಗೇ, ಒಂದೇ ವಾಕ್ಯದಲ್ಲಿ ಗೊರವಯ್ಯ ನುಡಿಯುವ ಭವಿಷ್ಯ ಕೂಡಾ ಅಷ್ಟೇ ಹೆಸರುವಾಸಿ.

   ಗೊರವಯ್ಯ ಭವಿಷ್ಯವಾಣಿ

   ಗೊರವಯ್ಯ ಭವಿಷ್ಯವಾಣಿ

   ಭವಿಷ್ಯವಾಣಿ ನುಡಿಯುವ ಕಾರ್ಣಿಕೋತ್ಸವದ ಮೊದಲು ಗೊರವಯ್ಯ ಒಂಬತ್ತು ದಿನಗಳ ಕಟ್ಟುನಿಟ್ಟಿನ ಉಪವಾಸ, ಜಪ, ತಪದಲ್ಲಿರುತ್ತಾನೆ. ತದನಂತರ ಕ್ಷೇತ್ರದ ಧರ್ಮದರ್ಶಿ ಯವರೊಂದಿಗೆ ಮತ್ತು ವಿಜಯನಗರದ ಅರಸರು ಅರ್ಪಿಸಿದ್ದ ಮೂರ್ತಿಯೊಂದಿಗೆ ಕುದುರೆ ಏರಿ ಡಂಕನಮರಡಿ ಎನ್ನುವ ಸ್ಥಳಕ್ಕೆ ಬರುತ್ತಾರೆ. ಅಲ್ಲಿ ಧರ್ಮದರ್ಶಿಗಳಿಂದ ಬಂಡಾರದ ಆಶೀರ್ವಾದ ಪಡೆದು ಕ್ಷೇತ್ರದ ಪರಂಪರೆಯಂತೆ 15 ಅಡಿ ಎತ್ತರದ ಬಿಲ್ಲುಗಂಬವನ್ನು ಸರ ಸರನೇರಿ, ಆಕಾಶವನ್ನು ನೋಡುತ್ತಾ ಒಂದು ವಾಕ್ಯದ ಭವಿಷ್ಯವನ್ನು ನುಡಿಯುತ್ತಾನೆ.

   'ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌'

   'ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌'

   'ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌' ಎಂದು ಗೊರವಪ್ಪ ನುಡಿದ. ಆದರೆ ಆರಂಭದಲ್ಲಿ ಇದು ಅಲ್ಲಿ ನೆರೆದಿದ್ದ ಭಕ್ತರ ಗದ್ದಲದಿಂದಾಗಿ ಬೇರೆಯ ರೀತಿಯಲ್ಲಿ ಅರ್ಥೈಸಲಾಗಿತ್ತು. 'ಆಕಾಶಕ್ಕೆ ಗಿಣಿ ಕುಕ್ಕಿ ಕುಂತಲೇ ಪರಾಕ್' ಎಂದು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರು ಪ್ರಕಟಣೆ ಹೊರಡಿಸಿದ್ದರು. ಇದರಿಂದ ಗೊಂದಲ ಸ್ವಲ್ಪ ಹೆಚ್ಚಾಯಿತು.

   English summary
   Mylara Lingeshwara Annual Karnika Utsava and Uttarence. Annual rituals including Karnikotsava in Mylara Lingeshwara Temple in Hoovina Hadagali Taluk, Bellary District, Karnataka
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more