ಬಳ್ಳಾರಿ; ನವವಿವಾಹಿತನ ಆತ್ಮಹತ್ಯೆಗೆ ಕಾರಣವಾದ ಅಡುಗೆ ವಿಚಾರ
ಬಳ್ಳಾರಿ, ಆಗಸ್ಟ್ 07: ಅಡುಗೆ ಸರಿಯಾಗಿ ಮಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಹೆಂಡತಿಯೊಂದಿಗೆ ಜಗಳವಾಗಿ ನವ ವಿವಾಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುರುಳಿಹಾಳ್ ಗ್ರಾಮದ ಶರಣೇಶ (29) ನೇಣು ಹಾಕಿಕೊಂಡು ಸಾವನ್ನಪ್ಪಿರುವವರು. ನಾಲ್ಕು ತಿಂಗಳ ಹಿಂದಷ್ಟೇ ಶರಣೇಶ ಮದುವೆಯಾಗಿದ್ದರು. ಮದುವೆಯಾಗಿ ಬಂದಾಗಿನಿಂದಲೂ ಸರಿಯಾಗಿ ಅಡುಗೆ ಮಾಡಲು ಬರುತ್ತಿರಲಿಲ್ಲ ಎಂಬ ಕಾರಣಕ್ಕೆ ಗಂಡ ಹೆಂಡತಿ ನಡುವೆ ಜಗಳವಾಗುತ್ತಿತ್ತು.
ಬೆಳಗಾವಿ; ತವರಿಗೆ ಹೋದ ಪತ್ನಿ; ಇಬ್ಬರು ಮಕ್ಕಳೊಂದಿಗೆ ಪತಿ ಆತ್ಮಹತ್ಯೆ
ಇದೇ ಅವರಿಬ್ಬರ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು ಎನ್ನಲಾಗಿದೆ. ಈ ವಿಷಯವಾಗಿ ಮನನೊಂದ ನವ ವಿವಾಹಿತ ತನ್ನ ಗ್ರಾಮ ಹೊರವಲಯದಲ್ಲಿರುವ ಹೊಲದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನ ಪತ್ನಿ ಈ ಕುರಿತು ದೂರು ನೀಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.