ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆ.15ರಂದು ತುಂಗಭದ್ರಾ ಡ್ಯಾಂಗೆ ಜನರ ಭೇಟಿಗೆ ನಿಷೇಧ

|
Google Oneindia Kannada News

ಬಳ್ಳಾರಿ, ಆಗಸ್ಟ್ 10 : ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಿದ್ದು ಜಲಾಶಯ ಭರ್ತಿಯಾಗುತ್ತಿದೆ. ಜಲಾಶಯ ನೋಡಲು ನೂರಾರು ಜನರು ಆಗಮಿಸುತ್ತಿದ್ದಾರೆ. ಆದರೆ, ಆಗಸ್ಟ್ 15ರ ಸೋಮವಾರ ಜಲಾಶಯಕ್ಕೆ ಜನರ ಭೇಟಿಯನ್ನು ನಿಷೇಧಿಸಲಾಗಿದೆ.

Recommended Video

SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada

ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಜನರ ಭೇಟಿ ನಿಷೇಧಿಸಲಾಗಿದೆ. ಆ.15ರಂದು ತುಂಗಭದ್ರಾ ಜಲಾಶಯ ಹಾಗೂ ಉದ್ಯಾನವನಗಳಿಗೆ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಿ ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಜಿ. ನಾಗಮೋಹನ್ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ; ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 6 ಟಿಎಂಸಿ ನೀರು ಸಂಗ್ರಹಬಳ್ಳಾರಿ; ತುಂಗಭದ್ರಾ ಜಲಾಶಯಕ್ಕೆ ಒಂದೇ ದಿನ 6 ಟಿಎಂಸಿ ನೀರು ಸಂಗ್ರಹ

ಬಳ್ಳಾರಿ ಜಿಲ್ಲೆಯಲ್ಲಿ ಹಾಗೂ ಹೊಸಪೇಟೆ ತಾಲೂಕಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಆದ್ದರಿಂದ, ಪ್ರವಾಸಿ ತಾಣವಾದ ತುಂಗಭದ್ರಾ ಜಲಾಶಯ ಹಾಗೂ ಉದ್ಯಾನವನಗಳಿಗೆ ಆ.15ರಂದು ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಬಳ್ಳಾರಿ ಎಚ್​ಎಲ್​​ಸಿ ಕಾಲುವೆಗೆ ಬಾಗಿನ ಅರ್ಪಿಸಿದ ಸೋಮಶೇಖರ ರೆಡ್ಡಿಬಳ್ಳಾರಿ ಎಚ್​ಎಲ್​​ಸಿ ಕಾಲುವೆಗೆ ಬಾಗಿನ ಅರ್ಪಿಸಿದ ಸೋಮಶೇಖರ ರೆಡ್ಡಿ

No Entry For Tungabhadra Dam On August 15

ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನಲೆಯಲ್ಲಿ ಸಾರ್ವಜನಿಕರು ಆ.15ರಂದು ತುಂಗಭದ್ರಾ ಜಲಾಶಯ ಹಾಗೂ ಉದ್ಯಾನವನಗಳಿಗೆ ಭೇಟಿ ನೀಡಬಾರದು, ಆ.16ವರೆಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 ತುಂಬಿದ ಕದ್ರಾ ಜಲಾಶಯ; ಕಾಳಿ ನದಿಗೆ 58,000 ಕ್ಯೂಸೆಕ್ ನೀರು ತುಂಬಿದ ಕದ್ರಾ ಜಲಾಶಯ; ಕಾಳಿ ನದಿಗೆ 58,000 ಕ್ಯೂಸೆಕ್ ನೀರು

ತುಂಗಭದ್ರಾ ಜಲಾಶಯದ ಗರಿಷ್ಟ ಮಟ್ಟ 1,633 ಅಡಿಗಳು. ಸೋಮವಾರ 1621.75 ಅಡಿ ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 1,17,403 ಕ್ಯುಸೆಕ್ ಒಳ ಹರಿವು ದಾಖಲಾಗಿದೆ.

ಸೋಮವಾರ ಬಳ್ಳಾರಿ ಜಿಲ್ಲೆಯಲ್ಲಿ 253 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,624ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೂ 118 ಜನರು ಮೃತಪಟ್ಟಿದ್ದಾರೆ.

English summary
Ballari district administration banned people entry for Tungabhadra dam on August 15 to control crowed due to Covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X