ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೋಮಶೇಖರ ರೆಡ್ಡಿಗೆ ಬಂಧನದ ಭೀತಿ

By ಜಿಎಂ ರೋಹಿಣಿ ಬಳ್ಳಾರಿ
|
Google Oneindia Kannada News

ಬಳ್ಳಾರಿ, ಏ. 25 : ಕೆಎಂಎಫ್ ಅಧ್ಯಕ್ಷ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿ ಅವರಿಗೆ ಸಂಡೂರು ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಪ್ರಾಣ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರೆಂಟ್ ಜಾರಿಗೊಳಿಸಲಾಗಿದೆ.

ಬಳ್ಳಾರಿ ತಾಲೂಕಿನ ರಾಮಘಡ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆಯ ತನಿಖೆಗೆ ಬಂದಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ರಾಮಲಿಂಗಯ್ಯ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯು.ವಿ. ಸಿಂಗ್‌ ನೇತೃತ್ವದ ತಂಡಕ್ಕೆ ಪ್ರಾಣ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿತ್ತು.

Somashekar Reddy

ದೂರಿನ ವಿಚಾರಣೆ ನಡೆಸಿದ ಡಿವೈಎಸ್‌ ಪಿ ನಾಗರಾಜ ಅವರು ಸೋಮಶೇಖರ ರೆಡ್ಡಿ ಸೇರಿದಂತೆ 14 ಮಂದಿಯ ವಿರುದ್ಧ ಆರೋಪ ಪಟ್ಟಿಯನ್ನು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಿವಾನಂದ ಮಾರುತಿ ಜಿಪರೆ ಅವರು ಸೋಮಶೇಖರ ರೆಡ್ಡಿ ಹಾಗೂ ಇನ್ನುಳಿದ ಆರೋಪಿಗಳಿಗೆ ಬಂಧನದ ವಾರಂಟ್‌ ಹೊರಡಿಸಿದ್ದಾರೆ. [ಬಳ್ಳಾರಿಯಲ್ಲಿ ಗಣಿ ಸರ್ವೆ ಕಾರ್ಯ]

ಆರೋಪಿಗಳು ಪದೇ ಪದೇ ವಿಚಾರಣೆಗೆ ಗೈರು ಹಾಜರಾದ ಹಿನ್ನಲೆಯಲ್ಲಿ ನ್ಯಾಯಾಧೀಶರು ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗಳಿಸಿದ್ದಾರೆ. ಪ್ರಕರಣದ ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿದೆ. ಇದರಿಂದಾಗಿ ನ್ಯಾಯಾಲಯಕ್ಕೆ ಗೈರು ಹಾಜರಾದ ರೆಡ್ಡಿ ಬಂಧನದ ಭೀತಿ ಎದುರಿಸುವಂತಾಗಿದೆ.

ಸ್ವಸ್ತಿಕ್ ನಾಗರಾಜ್ ಹಾಜರು : ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಹೊಸಪೇಟೆಯ ಸ್ವಸ್ತಿಕ್ ನಾಗರಾಜ್ ಅವರನ್ನು ಪೊಲೀಸರು ಬಳ್ಳಾರಿ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಿದ್ದಾರೆ. ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸ್ವಸ್ತಿಕ್ ನಾಗರಾಜ್ ವಿರುದ್ಧ, ಪರಮದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ 2008ರಲ್ಲಿ ದಾಖಲಾಗಿದ್ದ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸ್ವಸ್ತಿಕ್ ನಾಗರಾಜ್ ಅವರನ್ನು ಪೊಲೀಸ್ ಬಿಗಿ ಭದ್ರತೆಯಲ್ಲಿ ಬುಧವಾರ ರಾತ್ರಿ ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಕರೆ ತಂದಿದ್ದರು. ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ, ಪುನಃ ಬೆಂಗಳೂರಿಗೆ ವಾಪಸ್ ಕಳಿಸಿದ್ದಾರೆ.

English summary
Bellary district Sandur JMFC court had issued non-bailable warrant against KMF president Somashekar Reddy on Thursday, April 24 in the case of Life-threatening to Government employees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X