ಬಳ್ಳಾರಿಯಲ್ಲಿ ರೆಡ್ಡಿ ಮಾಸ್ಟರ್ ಪ್ಲಾನ್, ಒಂದೇ ಕಲ್ಲಿಗೆ ಮೂರು ಹಕ್ಕಿ
Recommended Video

ಬಳ್ಳಾರಿ, ಏಪ್ರಿಲ್ 16: ಕಾಂಗ್ರೆಸ್‍ನ ನಿಷ್ಠಾವಂತ ಮತ್ತು ಮಾಜಿ ಸಂಸದ, ನಿವೃತ್ತ ನ್ಯಾಯಾಧೀಶ ಎನ್.ವೈ. ಗೋಪಾಲಕೃಷ್ಣ ಕುಟುಂಬದ ಎಲ್ಲಾ ಸದಸ್ಯರು ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿ, ಕೂಡ್ಲಿಗಿ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದಾರೆ. ಮೊಳಕಾಲ್ಮೂರು ಮೂಲದ ಗೋಪಾಲಕೃಷ್ಣ 2014 ಉಪಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಕಾಂಗ್ರೆಸ್ ಅವರಿಗೆ ಎರಡೂ ಕಡೆಗಳಲ್ಲಿ ಟಿಕೆಟ್ ನೀಡಿರಲಿಲ್ಲ.
ಬೆಂಗಳೂರಿನಲ್ಲಿ ಸೋಮವಾರ ಇಡೀ ದಿನ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಜಿ. ಜನಾರ್ಧನ ರೆಡ್ಡಿ ಸಮ್ಮುಖದಲ್ಲಿ ವಿವಿಧ ಹಂತದ ಚರ್ಚೆಗಳು ನಡೆದಿದ್ದು, ಎನ್.ವೈ. ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು. ತಮಗೆ ಕ್ಷೇತ್ರ ಇಲ್ಲದಂತೆ ಮಾಡಿರುವ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಬುದ್ಧಿ ಕಲಿಸಲು ಅವರು ನಿರ್ಧಾರ ತೆಗೆದುಕೊಂಡಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಎನ್.ವೈ. ಕುಟುಂಬದ ಸದಸ್ಯರು ಬಿಜೆಪಿ ಸೇರಿದಲ್ಲಿ ಮೊಳಕಾಲ್ಮೂರು ಮತ್ತು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ತಮ್ಮ ಬೆಂಬಲಿಗರ ಮತಗಳನ್ನು ಬಿಜೆಪಿ ಅಭ್ಯರ್ಥಿಗಳಿಗೆ ಹಾಕಿಸಬೇಕು. ಕೂಡ್ಲಿಗಿ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು. ಬಿ. ಶ್ರೀರಾಮುಲು, ಸಣ್ಣ ಫಕ್ಕೀರಪ್ಪ ಮತ್ತು ಎನ್.ವೈ. ಗೋಪಾಲಕೃಷ್ಣ ಗೆಲುವು ಸಾಧಿಸಬೇಕು ಎನ್ನುವುದು ಲೆಕ್ಕಾಚಾರವಾಗಿದೆ.
ಒಂದು ಹಂತದಲ್ಲಿ ಎಸ್. ತಿಪ್ಪೇಸ್ವಾಮಿ (ಮೊಳಕಾಲ್ಮೂರು ಟಿಕೆಟ್ ವಂಚಿತ ಬಿಜೆಪಿ ಹಾಲಿ ಶಾಸಕ)ಯನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಡಿಕೆ ಶಿವಕುಮಾರ್ ಚರ್ಚೆ ನಡೆಸಿದ್ದರು. ಇದೇ ವೇಳೆಗೆ ಬಿಜೆಪಿಗೆ ಎನ್.ವೈ. ಗೋಪಾಲಕೃಷ್ಣ ಅವರನ್ನು ಕರೆಯಿಸಿಕೊಂಡು, ಪುನಃ ರಾಜಕೀಯ ಪುನರುಜ್ಜೀವನ ನೀಡಲು ನಿರ್ಧರಿಸಿರುವುದು ಡಿಕೆಶಿ ಏಟಿಗೆ ರೆಡ್ಡಿ ತಿರುಗೇಟು ನೀಡಿದಂತೆ ಆಗಿದೆ.
ಟಿಕೆಟ್ ಇಲ್ಲದೆ ಮೂಲೆ ಗುಂಪಾಗುತ್ತಿದ್ದ ಎನ್.ವೈ. ಗೋಪಾಲಕೃಷ್ಣ ಅವರಿಗೆ ಕೂಡ್ಲಿಗಿಯಿಂದ ಕಣಕ್ಕಿಳಿಸಿ, ಮೊಳಕಾಲ್ಮೂರು ಮತ್ತು ಬಳ್ಳಾರಿ ಗ್ರಾಮೀಣದ ಮೇಲೆ ಜಿ. ಜನಾರ್ದನ ರೆಡ್ಡಿ ಕಣ್ಣಿಟ್ಟಿದ್ದಾರೆ. ಶ್ರೀರಾಮುಲು, ರೆಡ್ಡಿ ಮತ್ತು ಬಿಜೆಪಿಯ ಈ ಲೆಕ್ಕಾಚಾರ ಬಹುತೇಕ ಯಶಸ್ಸನ್ನು ಸಾಧಿಸುವ ಸಾಧ್ಯತೆಗಳಿವೆ. ಹೀಗೆ ಒಂದೇ ಏಟಿಗೆ ಮೂರು ಹಕ್ಕಿ ಹೊಡೆಯಲು ರೆಡ್ಡಿ ಹೊರಟಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್‍ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications