Get Updates
Get notified of breaking news, exclusive insights, and must-see stories!

Bird Flu: ಹಕ್ಕಿ ಜ್ವರ, ಭಯ ಬೇಡ ಎಚ್ಚರವಿರಲಿ

ಬಳ್ಳಾರಿ, ಮಾರ್ಚ್ 01: ಕರ್ನಾಟಕದಲ್ಲಿ ಮತ್ತೆ ಹಕ್ಕಿ ಜ್ವರದ ಕುರಿತು ಚರ್ಚೆಗಳು ಆರಂಭವಾಗಿದೆ. ಕೆಲವು ಜಿಲ್ಲೆಗಳ ಹಕ್ಕಿಗಳ ಅಸಹಜ ಸಾವಿನ ಪ್ರಕರಣಗಳು ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಮೂಡಿಸಿದೆ. ಆದ್ದರಿಂದ ವಿವಿಧ ಜಿಲ್ಲಾಡಳಿತಗಳು ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದ್ದು, ಮುನ್ನೆಚ್ಚರಿಕೆಯನ್ನು ಕೈಗೊಳ್ಳಬೇಕು ಎಂದು ಸೂಚನೆಯನ್ನು ನೀಡಿದ್ದಾರೆ.

ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನಾ ಇಲಾಖೆ, ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆ ಹಕ್ಕಿ ಜ್ವರದ ಸಭೆಯನ್ನು ನಡೆಸಿದರು.

Outbreak Of Bird Flu Dont Be Panic Calls Ballari DC

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರದ ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ" ಎಂದು ಹೇಳಿದರು.

"ಹಕ್ಕಿ ಜ್ವರ ವೈರಾಣುಗಳಿಂದ ಉಂಟಾಗಿದ್ದು, ಸೋಂಕು ತಗುಲಿದ ಹಕ್ಕಿಗಳಿಂದಾಗುವ ವಿಸರ್ಜನೆ, ಶ್ವಾಸೋಚ್ಛಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ. ಸೋಂಕು ತಗುಲಿದ ಕೋಳಿ ಮರಿಗಳ ಪುಕ್ಕಗಳನ್ನು ತೆಗೆಯುವ ಮತ್ತು ವಧೆ ಮಾಡುವ ಕಾರ್ಯಗಳಲ್ಲಿ ನಿರತರಾದ ವಯಸ್ಕರಲ್ಲಿ ಹೆಚ್ಚಾಗಿ ಈ ಸೋಂಕು ಕಾಣಿಸಿಕೊಳ್ಳುತ್ತದೆ" ಎಂದರು.

"ಸೋಂಕು ತಗಲಿದ ಅಥವಾ ಸಾಯುವ ಹಂತದಲ್ಲಿರುವ ಕೋಳಿಗಳಿರುವ ವಾತಾವರಣದಲ್ಲಿ ಕ್ರೀಡಾನಿರತರಾದ ಮಕ್ಕಳಿಗೂ ಈ ಸೋಂಕು ಹರಡುತ್ತದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕು" ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಮುನ್ನೆಚ್ಚರಿಕೆ ಕ್ರಮಗಳು: ಹಕ್ಕಿಗಳ ಅಸಹಜ ಸಾವು ಕಂಡಬಂದಲ್ಲಿ ತಕ್ಷಣ ಪಶು ಇಲಾಖೆಗೆ ತಿಳಿಸಬೇಕು. ವ್ಯಾಧಿಗೊಳಗಾದ ಅಥವಾ ಆಕಸ್ಮಿಕವಾಗಿ ಮರಣ ಹೊಂದಿದ ಹಕ್ಕಿಗಳನ್ನು ಕೈಯಿಂದ ಮುಟ್ಟಬಾರದು. ಮನೆಯಲ್ಲಿ ಸೋಂಕು ತಗುಲಿದ ಹಕ್ಕಿಗಳ ಪುಕ್ಕಗಳನ್ನು ತೆಗೆಯಬಾರದು, ಕೊಲ್ಲಬಾರದು ಅಥವಾ ಕೈಯಿಂದ ಮುಟ್ಟಬಾರದು.

ಹಕ್ಕಿಗಳು ವೈರಾಣು ಸೋಂಕನ್ನು ಹೊಂದಿರಬಹುದಾಗಿರುವುದರಿಂದ ಮಕ್ಕಳನ್ನು ಅಂತಹ ಹಕ್ಕಿಗಳನ್ನು ಸ್ಪರ್ಶಮಾಡುವುದಕ್ಕಾಗಲಿ ಅಥವಾ ಅವುಗಳೊಂದಿಗೆ ಆಟ ಆಡುವುದಕ್ಕಾಲಿ ಅಥವಾ ಸಾಗಿಸುವುದಕ್ಕಾಗಲಿ ಬಿಡಬಾರದು. ಹಕ್ಕಿ ಜ್ವರ ತಲೆದೂರಿರುವ ಪ್ರದೇಶದಲ್ಲಿ ನೀವು ವಾಸಿಸುತ್ತಿದ್ದರೆ ಎಲ್ಲಿ ಜೀವಂತ ಹಕ್ಕಿಗಳನ್ನು ಮಾರುತ್ತಾರೋ ಅಥವಾ ಮಾಂಸಕ್ಕಾಗಿ ವಧಿಸುತ್ತಾರೋ ಅಂತಹ ಸ್ಥಳಗಳಿಗೆ ಹೋಗಬೇಡಿ ಕೋಳಿಗಳ ಯಾವುದೇ ವಿಸರ್ಜನೆಗಳನ್ನು ಗೊಬ್ಬರವನ್ನಾಗಿ ಉಪಯೋಗಿಸಬಾರದು.

ಹಕ್ಕಿಗಳನ್ನು ಕೈಯಿಂದ ಮುಟ್ಟಿದ ನಂತರ ಕೈಗಳನ್ನು ಸಾಬೂನಿಂದ ಮತ್ತು ನೀರಿನಿಂದ ತೊಳೆದುಕೋಳ್ಳಬೇಕು. ಕೋಳಿ ಮರಿಗಳನ್ನು ಕೈಗಳಿಂದ ಮುಟ್ಟುವಾಗ ಮೂಗು ಮತ್ತು ಬಾಯಿಗೆ ದಪ್ಪ ಬಟ್ಟೆಯ ಮುಸುಕು ಹಾಕಿಕೊಳ್ಳಿ. ಹಕ್ಕಿಗಳನ್ನು ಮುಟ್ಟಿದ ನಂತರ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಉಜ್ಜಿಕೊಳ್ಳದಂತೆ ಎಚ್ಚರವಹಿಸಿ.

ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ತಿನ್ನಲು ಚೆನ್ನಾಗಿ ಬೇಯಿಸಿ ಸೇವಿಸಬೇಕು. ಮುಂಜಾಗೃತಾ ಕ್ರಮವಾಗಿ ಎಲ್ಲ ಕೋಳಿ ಸಾಕಾಣಿಕೆ ಫೌಲ್ಟ್ರಿ ಫಾರಂಗಳಲ್ಲಿ ನಿಗಾವಹಿಸಬೇಕಿದೆ. ಇದಕ್ಕಾಗಿ ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.

ಫೌಲ್ಟ್ರಿ ಫಾರಂಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೈಯಕ್ತಿಕ ಕಾಳಜಿವಹಿಸುವ ಕುರಿತು ಜಾಗೃತಿ ನೀಡಲಾಗುತ್ತದೆ. ಅಗತ್ಯವೆನಿಸಿದಲ್ಲಿ ಚಿಕಿತ್ಸೆಗೆ ಯಾವುದೇ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+