• search
  • Live TV
ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಲಪಾಟಿ ಪರಿಚಯ

By ಬಳ್ಳಾರಿ ಪ್ರತಿನಿಧಿ
|

ಬಳ್ಳಾರಿ, ಜನವರಿ 11: ಬಳ್ಳಾರಿಯ ನೂತನ ಜಿಲ್ಲಾಧಿಕಾರಿಯಾಗಿ ಪವನಕುಮಾರ್ ಮಲಪಾಟಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ‌ಎಸ್. ಎಸ್. ನಕುಲ್ ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ಹಸ್ತಾಂತರ ಮಾಡಿದರು.

ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದ ಎಸ್. ಎಸ್. ನಕುಲ್ ಕೇಂದ್ರ ಹಣಕಾಸು ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ನಿಯೋಜಿತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಬಳ್ಳಾರಿಗೆ ನೂತನ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.

ಐಎಎಸ್ ಅಧಿಕಾರಿ ಎಸ್. ಎಸ್. ನಕುಲ್ ಪರಿಚಯ

ಸೋಮವಾರ ನಿರ್ಗಮಿತ ಜಿಲ್ಲಾಧಿಕಾರಿ ‌ಎಸ್. ಎಸ್. ನಕುಲ್ ನೂತನ ಜಿಲ್ಲಾಧಿಕಾರಿ ಪವನಕುಮಾರ್ ಮಲಪಾಟಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನಕುಲ್ ಅವರ ಬೀಳ್ಕೊಡುಗೆ ಹಾಗೂ ಪವನಕುಮಾರ್ ಮಲಪಾಟಿ ಅವರ ಸ್ವಾಗತ ಸಮಾರಂಭ ಸಂಜೆ 5:15ಕ್ಕೆ ನಗರದ ಬಿಡಿಎಎ ಫುಟ್ಬಾಲ್ ಸಭಾಂಗಣದಲ್ಲಿ ನಡೆಯಲಿದೆ.

ಕಾಂಗ್ರೆಸ್ ಸೇರಿದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

ಪವನಕುಮಾರ್ ಪರಿಚಯ; ಪವನಕುಮಾರ್ ಮಲಪಾಟಿ 2012ನೇ‌ ಬ್ಯಾಚ್‌ನ ಐಎಎಸ್‌ ಅಧಿಕಾರಿ. ವಾಣಿಜ್ಯ ತೆರಿಗೆಗಳ (ಜಾರಿ) ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲಪಾಟಿ ಅವರು ಈ ಹಿಂದೆ ಹೊಸಪೇಟೆ ಸಹಾಯಕ ಆಯುಕ್ತರಾಗಿಯೂ ಕೆಲಸ ನಿರ್ವಹಿಸಿದ್ದರು.

ಹೆಪ್ಸಿಬಾ ರಾಣಿ ಕೊರ್ಲಪಟಿ ಸೇರಿ 5 ಮಂದಿ ಐಎಎಸ್ ವರ್ಗಾವಣೆ

ಪವನಕುಮಾರ್ ಪರಿಚಯ; ಪವನಕುಮಾರ್ ಮಲಪಾಟಿ 2012ನೇ‌ ಬ್ಯಾಚ್‌ನ ಐಎಎಸ್‌ ಅಧಿಕಾರಿ. ವಾಣಿಜ್ಯ ತೆರಿಗೆಗಳ (ಜಾರಿ) ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲಪಾಟಿ ಅವರು ಈ ಹಿಂದೆ ಹೊಸಪೇಟೆ ಸಹಾಯಕ ಆಯುಕ್ತರಾಗಿಯೂ ಕೆಲಸ ನಿರ್ವಹಿಸಿದ್ದರು.

ಕೇಂದ್ರ ಸೇವೆಗೆ ನಕುಲ್; ಬಳ್ಳಾರಿ ಜಿಲ್ಲಾಧಿಕಾರಿಯಾಗಿದ್ದ ಎಸ್. ಎಸ್. ನಕುಲ್ ಕೇಂದ್ರ ಸೇವೆಗೆ ತೆರಳುತ್ತಿದ್ದಾರೆ. ಎಸ್. ಎಸ್. ನಕುಲ್ ಕೊಡಗು ಜಿಲ್ಲೆಯ ಕುಶಾಲನಗರ ಮೂಲದವರು. ತಂದೆ ಎಸ್. ಕೆ. ಸತೀಶ್ ಮತ್ತು ತಾಯಿ ಶೋಭಾ.

4/12/1983ರಲ್ಲಿ ಜನಿಸಿದ ನಕುಲ್, ಬಿಇ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್) ಪದವಿಯನ್ನು ಪಡೆದಿದ್ದಾರೆ. 2010ನೇ ಬ್ಯಾಚ್‌ನ ಕರ್ನಾಟಕ ಕೆಡರ್‌ನ ಐಎಎಸ್ ಅಧಿಕಾರಿಯಾದ ನಕುಲ್, ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ 31ನೇ rank ಪಡೆದು ಕರ್ನಾಟಕದಲ್ಲಿಯೇ ಮೊದಲ ಸ್ಥಾನಗಳಿಸಿದ್ದಾರೆ.

English summary
Pavan Kumar Malapati took charge as deputy commissioner of Ballari. IAS officer S. S. Nakul who working as deputy commissioner appointed as private secretary to finance minister Nirmala Sitharaman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X