ಬಳ್ಳಾರಿ; ವಾರದ ಹಿಂದೆ ಹೆಂಡತಿ ಕೊಂದು ಜೈಲು ಸೇರಿದ್ದವನಿಗೆ ಕೊರೊನಾ

ಬಳ್ಳಾರಿ, ಜುಲೈ 30: ವಾರದ ಹಿಂದೆ ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿ ಜೈಲು ಸೇರಿದ್ದ ವ್ಯಕ್ತಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಪೊಲೀಸರಲ್ಲಿ ಈತನಿಂದ ಆತಂಕ ಶುರುವಾಗಿದೆ.

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ನವಲಿ ಗ್ರಾಮದ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ವಾರದ ಹಿಂದೆ ಕೊಡಲಿಯಿಂದ ಬರ್ಬರವಾಗಿ ಕೊಲೆ ಮಾಡಿದ್ದ. ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಆಕೆಯನ್ನು ಕೊಂದಿದ್ದ. ನಂತರ ಆತನನ್ನು ಪೊಲೀಸರು ಬಂಧಿಸಿದ್ದರು.

ಕೊಲೆಯಾಗಿದ್ದ ಪತ್ನಿ ಹನಮವ್ವಳ ಶವಪರೀಕ್ಷೆಯನ್ನು ನಡೆಸಲಾಗಿತ್ತು. ಆ ಸಮಯದಲ್ಲೇ ಕೋವಿಡ್ ಪರೀಕ್ಷೆಯನ್ನೂ ಮಾಡಲಾಗಿತ್ತು. ಆಕೆಯ ವರದಿ ನೆಗೆಟಿವ್ ಬಂದಿತ್ತು. ಆದರೆ ಇತ್ತ ಜೈಲಿನಲ್ಲಿದ್ದ ಪತಿಗೆ ಕೆಲ ದಿನಗಳಿಂದ ಕೊರೊನಾ ರೋಗ ಲಕ್ಷಣಗಳು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದಾಗ ಈತನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

 Person Killed His Wife And Went To Jail Confirmed Coronavirus In Ballari

ಈತನ ಮಕ್ಕಳಿಗೂ ಪರೀಕ್ಷೆ ನಡೆಸಿದ್ದು, ಇಬ್ಬರು ಮಕ್ಕಳ ವರದಿ ನೆಗೆಟಿವ್ ಬಂದಿದೆ. ಆರೋಪಿಯನ್ನು ಬಂಧಿಸಿದ್ದ ಪೊಲೀಸರಿಗೆ ಈತ ಆತಂಕ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+