ಬಳ್ಳಾರಿಯಲ್ಲಿ ಪಿಎಫ್‌ಐ ವೆಪನ್ ಟ್ರೇನರ್‌ನನ್ನು ಬಂಧಿಸಿದ ಎನ್‌ಐಎ

ಬಳ್ಳಾರಿ, ಜೂನ್‌ 15: ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಶಸ್ತ್ರಾಸ್ತ್ರ ತರಬೇತುದಾರನನ್ನು ಬಳ್ಳಾರಿಯಲ್ಲಿ ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ತಿಳಿಸಿದೆ.

ಬಂಧಿತ ಆರೋಪಿಯನ್ನು ಆಂಧ್ರ ಪ್ರದೇಶದ ನಂದ್ಯಾಲ್ ಮೂಲದ ಮೊಹಮ್ಮದ್ ಯೂನಸ್ ಅಲಿಯಾಸ್ ಯೂನಸ್(33) ಎಂದು ಗುರುತಿಸಲಾಗಿದೆ. 2022ರ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಆತನ ಮನೆಯನ್ನು ಶೋಧಿಸಿದಾಗ, ಆರೋಪಿ ತನ್ನ ಹೆಂಡತಿ ಮತ್ತು ಇಬ್ಬರು ಅಪ್ರಾಪ್ತ ಪುತ್ರರೊಂದಿಗೆ ತಲೆಮರೆಸಿಕೊಂಡಿದ್ದನು.

PFI Weapons Trainer Arrested In Ballari

ಆರೋಪಿ ಯೂನಸ್ ತಲೆಮರೆಸಿಕೊಳ್ಳಲು ತನ್ನ ಇಡೀ ಕುಟುಂಬವನ್ನು ಆಂಧ್ರ ಪ್ರದೇಶದಿಂದ ಕರ್ನಾಟಕದ ಬಳ್ಳಾರಿಯ ಕೌಲ್ ಬಜಾರ್ ಪ್ರದೇಶಕ್ಕೆ ಸ್ಥಳಾಂತರಿಸಿದ್ದ ಎಂದು ಎನ್‌ಐಎ ತನಿಖೆಯಿಂದ ತಿಳಿದು ಬಂದಿದೆ.

ಯೂನಸ್ ಶಸ್ತ್ರಾಸ್ತ್ರ ತರಬೇತುದಾರನಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಪ್ರದೇಶದಲ್ಲಿ ಪಿಎಫ್‌ಐನಿಂದ ನೇಮಕಗೊಂಡ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದನು ಮತ್ತು ಈ ಎರಡು ರಾಜ್ಯಗಳಿಗೆ ರಾಜ್ಯ ಸಂಯೋಜಕನಾಗಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.

ಎನ್‌ಐಎ ವಿಚಾರಣೆಯ ವೇಳೆ ಯೂನಸ್, ಪಿಎಫ್‌ಐ ಶಸ್ತ್ರಾಸ್ತ್ರ ತರಬೇತಿ ವಿಚಾರಕ್ಕೆ ಸಂಬಂಧಿಸಿದಂತೆ ಶೇಖ್ ಇಲ್ಯಾಸ್ ಅಹ್ಮದ್ ಎಂಬಾತನ ಹೆಸರು ಹೇಳಿದ್ದು, ಇಲ್ಯಾಸ್ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆ ಸ್ಥಾಪಿಸುವ ಉದ್ದೇಶದೊಂದಿಗೆ ಭಯೋತ್ಪಾದಕ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ನಿರ್ವಹಿಸಲು ಯುವಕರನ್ನು ನೇಮಿಸಿಕೊಳ್ಳಲು ಮತ್ತು ಅವರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲು ನಿಷೇಧಿತ ಸಂಘಟನೆ ಪಿಎಫ್‌ಐನ ನಾಯಕರು ಮತ್ತು ಕಾರ್ಯಕರ್ತರು ನಡೆಸಿದ ಕ್ರಿಮಿನಲ್ ಪಿತೂರಿಗೆ ಈ ಪ್ರಕರಣವು ಸಂಬಂಧಿಸಿದೆ ಎನ್ನಲಾಗಿದೆ.

ಸದ್ಯ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಶಸ್ತ್ರಾಸ್ತ್ರ ತರಬೇತುದಾರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಆರೋಪಿಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+