ಬಳ್ಳಾರಿಯಲ್ಲಿ ಅಮೂಲ್ಯ ವಿರುದ್ಧ ರಾತ್ರಿ ಪ್ರತಿಭಟನೆಗಿಳಿದ ಎಬಿವಿಪಿ

Recommended Video

      ಅಮೂಲ್ಯ ಪ್ರತಿಕೃತಿ ದಹಿಸಿ ಆಕ್ರೋಶ

      ಬಳ್ಳಾರಿ, ಫೆಬ್ರವರಿ 21: ಬೆಂಗಳೂರು ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ "ಪಾಕಿಸ್ತಾನ ಜಿಂದಾಬಾದ್" ಎಂಬ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಬಳ್ಳಾರಿ ಎಬಿವಿಪಿ ಸಂಘಟನೆ ನಿನ್ನೆ ರಾತ್ರಿ ಪ್ರತಿಭಟನೆ ನಡೆಸಿತು.

      ಅಮೂಲ್ಯ ಲಿಯೋನಾ ಪಾಕ್ ಪರ ಘೋಷಣೆ ಕೂಗಿದ ಸುದ್ದಿ ಹಬ್ಬುತ್ತಿದ್ದಂತೆ ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಅಖಿಲ ಭಾರತ‌ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ನಿನ್ನೆ ರಾತ್ರಿ ನಗರದ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಬಳ್ಳಾರಿ ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಯುವರಾಜ್ ಮಾತನಾಡಿ, "ಭಾರತ ದೇಶದಲ್ಲಿಯೇ ಹುಟ್ಟಿ‌ ಬೆಳೆದು, ಇಲ್ಲಿಯ ಅನ್ನ, ನೀರು ಕುಡಿದು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಮೂಲ್ಯ ಲಿಯೋನ್ ಅವರ ನಡೆಯನ್ನು ಎಬಿವಿಪಿ ಖಂಡಿಸುತ್ತದೆ" ಎಂದರು.

      Protest Against Amulya Leona By ABVP

      ನ್ಯಾಯಾಲಯದಲ್ಲಿ ಕೂಡ ವಕೀಲರು ಅಮೂಲ್ಯ ಪರವಾಗಿ ವಾದ ಮಾಡಬಾರದು ಎಂದು ಕೇಳಿಕೊಂಡರು. ಇಂದು ಕೂಡ ಪ್ರತಿಭಟನೆ ಮುಂದುವರೆಯಲಿದ್ದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+