ಹಂಪಿ ಸ್ಮಾರಕ ಧ್ವಂಸ ಪ್ರಕರಣ: ತನಿಖೆಗೆ ಆಗ್ರಹ, ಪ್ರತಿಭಟನೆ

ಬಳ್ಳಾರಿ, ಫೆಬ್ರವರಿ 02: ವಿಶ್ವ ವಿಖ್ಯಾತ ಹಂಪಿಯಲ್ಲಿನ ಐತಿಹಾಸಿಕ ಸ್ಮಾರಕಗಳ ಕಲ್ಲಿನ ಕಂಬಗಳು ಕಿಡಿಗೇಡಿಗಳ ಕೃತ್ಯಕ್ಕೆ ಹಾಳಾಗುತ್ತಿದ್ದು, ಸ್ಮಾರಕಗಳಿಗೆ ಸಂರಕ್ಷಣೆ ಇಲ್ಲವಾಗಿದೆ ಎನ್ನುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿರುವುದು ಉದಾಹರಣೆಯಾಗಿದೆ.

ವಿಜಯನಗರ ಸಾಮ್ರಾಜ್ಯದ ಗತಕಾಲದ ವೈಭವವನ್ನು ಹೊಂದಿರುವ ಹಂಪಿಯಲ್ಲಿ ಸ್ಮಾರಕಗಳು ಮುಂದಿನ ಪೀಳಿಗೆಗೆ ಉಳಿಯಬೇಕೆಂಬ ಉದ್ದೇಶದಿಂದ ವಿವಿಧ ಇಲಾಖೆಗಳಿಂದ ಸ್ಮಾರಕಗಳ ಜೀರ್ಣೋದ್ಧಾರ ಕಾರ್ಯವೂ ನಡೆಯುತ್ತಿದೆ. ಆದರೆ, ಹಂಪಿಯ ಒಂಟೆ ಸಾಲು, ಗಜಶಾಲೆ ಹಿಂದಿ ಇರುವಂತಹ ವಿಷ್ಣು ದೇವಸ್ಥಾನದ ಆವರಣದಲ್ಲಿನ ಕಂಬಗಳನ್ನು ಯಾರೋ ಕಿಡಿಗೇಡಿಗಳು ಬೀಳಿಸುತ್ತಿರುವ ದೃಶ್ಯ ವೀಡಿಯೋದಲ್ಲಿ ಕಂಡು ಬರುತ್ತಿದೆ.

Protest against Hampi pillar destroying viral video

ಸಾಕಷ್ಟು ಹಣ ಖರ್ಚುಮಾಡಿ ಸ್ಮಾರಕಗಳ ಜೀರ್ಣೋದ್ಧಾರ ಕಾರ್ಯವೂ ನಡೆಯುತ್ತಿದ್ದು, ಹೀಗೆ, ಸ್ಮಾರಕಗಳ ಕಲ್ಲಿನ ಕಂಬಗಳು ತುಂಡಾಗಿ ಬೀಳುವುದರಿಂದ ಅವುಗಳ ಇತಿಹಾಸವೇ ಇಲ್ಲದಂತಾಗುತ್ತದೆ.

ಪ್ರತಿಭಟನೆ

ಇತ್ತೀಚೆಗೆ ಹಾಡುಹಗಲೇ ಕಿಡಿಗೇಡಿಗಳು ಕಲ್ಲಿನ ಕಂಬಗಳನ್ನು ಬೀಳಿಸಿರುವಂಥ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದರಿಂದ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಹಂಪಿಯ ಸ್ಮಾರಕಗಳ ಸಂರಕ್ಷಣೆಗಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಹಂಪಿ ಅಭಿವೃದ್ಧಿ ಪ್ರಾಧಿಕಾರ, ರಾಜ್ಯ ಪುರಾತತ್ವ ಮತ್ತು ಸಂಗ್ರಹಾಲಯಗಳ ಸಂರಕ್ಷಣಾ ಇಲಾಖೆ ಕೆಲಸ ಮಾಡುತ್ತಿದ್ದರೂ ಇಂಥ ಘಟನೆಗಳು ನಡೆಯುತ್ತಿದೆ. ವಿಡಿಯೋ ವೈರಲ್ ಆದ ನಂತರ ಕಮಲಾಪುರ ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಮತ್ತು ಹಂಪಿ ಪ್ರವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Protest against Hampi pillar destroying viral video

ವಿಶ್ವ ವಿಖ್ಯಾತ ಹಂಪಿಯಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕುವಂತೆ ಒತ್ತಾಯಿಸಿ, ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ಪ್ರತಿಭಟನೆ ನಡೆಯುತ್ತಿದೆ.

Protest against Hampi pillar destroying viral video

ತನಿಖೆ ನಡೆಯುತ್ತಿದೆ

ಹಂಪಿ ಸ್ಮಾರಕ ಕಿಡಿಗೇಡಿಗಳಿಂದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಎಸ್ಪಿ ಅರುಣ್ ರಂಗರಾಜನ್ ಪ್ರತಿಕ್ರಿಯೆ ನೀಡಿದ್ದು, "ವೈರಲ್ ವೀಡಿಯೋ ಹಿನ್ನೆಲೆ ಈಗಾಗಾಲೇ ತನಿಖೆ ಮಾಡಲಾಗುತ್ತಿದೆ. ನಾಲ್ವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಪುರಾತತ್ವ ಇಲಾಖೆ ಎರಡು ವರುಷದ ಹಿಂದೆ ಘಟನೆಯಾಗಿದೆ ಎನ್ನುತ್ತಿದೆ. ಆರು ತಿಂಗಳ ಹಿಂದೆ ಘಟನೆ ನಡೆದಿರಬಹುದು ಎಂಬುದು ನಮ್ಮ ಅಂದಾಜು. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು" ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+