ಬಳ್ಳಾರಿ ಜಿಲ್ಲೆ ಕೊರೊನಾ ವಾರಿಯರ್ಸ್ ಗೆ ಮಾಸ್ಕ್, ಸ್ಯಾನಿಟೈಸರ್ ಕೊರತೆ
ಹಗರಿಬೊಮ್ಮನಹಳ್ಳಿ, ಏಪ್ರಿಲ್ 13: ಸಾರ್ವಜನಿಕರ ಜೊತೆಗೆ ನಿರಂತರವಾಗಿ ಒಡನಾಟವಿಟ್ಟು ಕೋರೋನಾ ವೈರಸ್ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಕೊರೊನಾವಾರಿಯರ್ಸ್ ಗೆ ಸೂಕ್ತ ಭದ್ರತೆ, ಸುರಕ್ಷತೆ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪೋಲೀಸರು, ಪೌರ ಕಾರ್ಮಿಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗೆ ಪ್ರೋತ್ಸಾಹಭತ್ಯೆ ಜೊತೆಗೆ ಗುಣಮಟ್ಟದ ಎನ್-95 ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಣೆ ಮಾಡಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ್ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಎಲ್ಲಾ ಇಲಾಖೆಗಳ ಸಿಬ್ಬಂದಿ ಬಳಸಿ ಬೀಸಾಡುವ ಮಾಸ್ಕ್‍ಗಳನ್ನು ಬಳಸುತ್ತಿದ್ದು ಜೊತೆಗೆ ದಿನಾಲು ರಸ್ತೆ ಬೀದಿ ಮನೆಮನೆ ತಿರುಗುವ ಸಿಬ್ಬಂದಿಯ ರಕ್ಷಣೆಗೆ ಸರ್ಕಾರ ಕಾಳಜಿ ವಹಿಸದಿದ್ದರೆ ಅವರಿಗೂ ಸೋಂಕು ತಗುಲಿ ಅವರೇ ಮನೆಮನೆಗೆ ರೋಗ ಹರಡುವ ಅಪಾಯವಿದ್ದು ಆರೋಗ್ಯ ಸಚಿವ ಶ್ರೀರಾಮುಲು ತಕ್ಷಣವೇ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಮ್ಮ ಕುಟುಂಬದ ಆರೋಗ್ಯದ ಹಿತಾಶಕ್ತಿಯನ್ನು ಪಣಕ್ಖಿಟ್ಟು ರಾಜ್ಯದ ಜನತೆಯ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಪೋಲೀಸರು, ಪೌರ ಕಾರ್ಮಿಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳ ಕುಟುಂಬ ವರ್ಗವನ್ನು ಕಾಪಾಡುವ ಮಹತ್ತರ ಜವಾಬ್ದಾರಿ ಸರ್ಕಾರದ ಮೇಲಿದ್ದು ಅವರ ಸುರಕ್ಷತೆಗೆ ಪ್ರಾಮುಖ್ಯತೆ ನೀಡಲು ಮನವಿ ಮಾಡಿದರು.

ಅಲ್ಲದೇ ಸೋಂಕು ದೃಢಪಟ್ಟ ಪ್ರದೇಶಗಳಲ್ಲಿ ಸರ್ವೆ ನಡೆಸಲು ತೆರಳುವ ಸಿಬ್ಬಂದಿಗಳಿಗೆ ಹಾಗೂ ಭದ್ರತೆ ಮಾಡಲು ನಿಯೋಜಿಸಲ್ಪಟ್ಟ ಎಲ್ಲಾ ಪೋಲೀಸರಿಗೂ ಪಿಪಿಇ ಕಿಟ್ ವಿತರಿಸಿ ಅವರ ಸುರಕ್ಷತೆಗೆ ನಿಗಾ ವಹಿಸಲು ಪತ್ರೇಶ್ ಹಿರೇಮಠ್ ಆಗ್ರಹಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications